ಅಭಿಪ್ರಾಯ / ಸಲಹೆಗಳು

ಮನುಷ್ಯ ಕಾಣೆ ಪ್ರಕರಣ

ಗ್ರಾಮಾಂತರ ಪೊಲೀಸ್ ಠಾಣೆ.

ದಿನಾಂಕ;01/06/2022 ರಂದು ಪಿರ್ಯಾದಿ ಶ್ರೀ ಮೋಹನ್ ಬಿನ್ ಮುಳ್ಳೇಗೌಡ, ಚಿಕ್ಕನಹಳ್ಳಿ ಗ್ರಾಮ, ಕರ್ತಿಕೆರೆ, ಚಿಕ್ಕಮಗಳೂರು ವಾಸಿ ಇವರು ನೀಡಿದ ದೂರಿನಲ್ಲಿ ಪಿರ್ಯಾದಿಯ ತಂದೆ ಮುಳ್ಳೇಗೌಡ ಇವರು  ದಿನಾಂಕ; 30/05/2022 ರಂದು ಬೆಳಿಗ್ಗೆ  ಮನೆಯಿಂದ ಕಟಿಂಗ್ ಮಾಡಿಸಲು ಚಿಕ್ಕಮಗಳೂರಿಗೆ ಹೋದವರು, ವಾಪಾಸ್ಸು ಮನೆಗೆ ಬಾರದೇ ಕಾಣೆಯಾಗಿದ್ದು, ಈವರೆಗೆ ಹುಡಕಲಾಗಿ ಪತ್ತೆಯಾಗಿರುವುದಿಲ್ಲ. ಕಾಣೆಯಾಗಿರುವ ಮುಳ್ಳೇಗೌಡ,  72 ವರ್ಷ,  ಕೋಲುಮುಖ, 5 ಅಡಿ ಎತ್ತರ, ಸಾದಾರಣ ಮೈಕಟ್ಟು, ಎಣ್ಣೆಗೆಂಪು ಬಣ್ಣ, ಕನ್ನಡ, ಬಾಷೆ ಮಾತನಾಡುತ್ತಾರೆ. ತುಂಬು ತೋಳಿನ  ಶರಟು ಬಿಳಿ ಪಂಚೆ, ಪಟ್ಟಪಟ್ಟಿ ನೀಲಿ ಬಣ್ಣದ ಟವಲ್ ಧರಿಸಿರುತ್ತಾರೆ. ಕಾಣೆಯಾಗಿರುವ ತನ್ನ ತಂದೆ ಮುಳ್ಳೇಗೌಡ ರವರನ್ನು ಪತ್ತೆ ಮಾಡಿ ಕೊಡುವಂತೆ ನೀಡಿದ ದೂರಿನ ಮೇರೆಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ

ಅಕ್ರಮ ಗಾಂಜಾ ಸೇವನೆ ಪ್ರಕರಣ

ಮೂಡಿಗೆರೆ ಪೊಲೀಸ್ ಠಾಣೆ.

ದಿನಾಂಕ 01/06/2022 ರಂದು ಮೂಡಿಗೆರೆ ಪಟ್ಟಣದ ಸಂತೆ ಮೈದಾನದಲ್ಲಿ ಅಕ್ಷಯ್ ಬಿನ್ ರಮೇಶ ಈತನು ಗಾಂಜಾ ಸೇವನೆ ಮಾಡಿ ಅಮಲಿನಲ್ಲಿ  ಇರುವಂತೆ ವರ್ತಿಸುತ್ತಿದ್ದ, ಸದರಿ ಅಸಾಮಿಯನ್ನು ವಶಕ್ಕೆ ಪಡೆದು ಸದರಿ ಅಸಾಮಿ ಗಾಂಜಾ ಸೇವನೆ ಮಾಡಿದ ಬಗ್ಗೆ ವೈದ್ಯಕೀಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದ್ದು, ಅರೋಫಿತನ ವಿರುದ್ದ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಮೂಡಿಗೆರೆ ಠಾಣಾ ಪಿಎಸ್ಐ ರವಿ ಜಿ.ಎ. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಕಡೂರು ಪೊಲೀಸ್ ಠಾಣೆ.

ದಿನಾಂಕ 01/06/2022 ರಂದು ಕಡೂರು ಪಟ್ಟಣದ  ಹುಳುಕಿನಕಲ್ ಕ್ರಾಸ್ ಬಳಿ ಪ್ರದೀಪ ಬಿನ್ ನಾಗರಾಜಪ್ಪ, ವಾಸ ಅಂಬೇಡ್ಕರ್ ನಗರ, ಬೀರೂರು ಟೌನ್  ಈತನು ಗಾಂಜಾ ಸೇವನೆ ಮಾಡಿ ಅಮಲಿನಲ್ಲಿ  ಇರುವಂತೆ ವರ್ತಿಸುತ್ತಿದ್ದ, ಸದರಿ ಅಸಾಮಿಯನ್ನು ವಶಕ್ಕೆ ಪಡೆದು ಸದರಿ ಅಸಾಮಿ ಗಾಂಜಾ ಸೇವನೆ ಮಾಡಿದ ಬಗ್ಗೆ ವೈದ್ಯಕೀಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದ್ದು, ಅರೋಫಿತನ ವಿರುದ್ದ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಕಡೂರು ವೃತ್ತ ನಿರೀಕ್ಷಕರಾದ ಕೆ.ಆರ್. ಶಿವಕುಮಾರ್  ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಕಡೂರು ಪೊಲೀಸ್ ಠಾಣೆ.

ದಿನಾಂಕ 01/06/2022 ರಂದು ಕಡೂರು ಪಟ್ಟಣದ  ಹರುವನಹಳ್ಳಿ ರಸ್ತೆಯಲ್ಲಿ ಉಮೇಶ ಬಿನ್ ಮಂಜುನಾಥ ವಾಸ ಲಕ್ಷ್ಮೀಶ ನಗರ ಕಡೂರು ಟೌನ್  ಈತನು ಗಾಂಜಾ ಸೇವನೆ ಮಾಡಿ ಅಮಲಿನಲ್ಲಿ  ಇರುವಂತೆ ವರ್ತಿಸುತ್ತಿದ್ದ, ಸದರಿ ಅಸಾಮಿಯನ್ನು ವಶಕ್ಕೆ ಪಡೆದು ಸದರಿ ಅಸಾಮಿ ಗಾಂಜಾ ಸೇವನೆ ಮಾಡಿದ ಬಗ್ಗೆ ವೈದ್ಯಕೀಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದ್ದು, ಅರೋಫಿತನ ವಿರುದ್ದ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಕಡೂರು ಠಾಣಾ ಪಿ.ಎಸ್.ಐ. ರಮ್ಯ ಎನ್.ಕೆ. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಅಕ್ರಮ ಗೋ ಮಾಂಸ ಮಾರಾಟ ಪ್ರಕರಣ

ನಗರ ಪೊಲೀಸ್ ಠಾಣೆ.

ದಿನಾಂಕ 01/06/2022 ರಂದು ಚಿಕ್ಕಮಗಳೂರು ನಗರದ ಹಳೇಬಂಡಿ ಮಠ ರಸ್ತೆಯಲ್ಲಿರುವ  ಮನ್ಸೂರ್ ಪಾಷ ಬಿನ್ ಮೆಹಬೂಬ್ ಮೂಸ ವಾಸಿ ಈತನು ಅಕ್ರಮವಾಗಿ ದನದ ಮಾಂಸವನ್ನು ಮಾರಾಟ ಮಾಡುತ್ತಿದ್ದು, ಅರೋಪಿಯನ್ನು ವಶಕ್ಕೆ ಪಡೆದು ಆರೋಪಿತನು ಅಕ್ರಮವಾಗಿ ಹೊಂದಿದ್ದ  29 ಕೆ.ಜಿ ದನದ ಮಾಂಸ ಒಂದು ಪ್ರೀಜರ್, ಒಂದು ಪ್ಲಾಸ್ಟಿಕ್ ಟಬ್   ಅನ್ನು ಅಮಾನತ್ತುಪಡಿಸಿಕೊಂಡು ಅರೋಫಿತನ ವಿರುದ್ದ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ನಗರ ಠಾಣಾ ಪಿಎಸ್ಐ ನಾಗೇಂದ್ರನಾಯ್ಕ ಹೆಚ್ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ

ಮರಣಾಂತಿಕ ರಸ್ತೆ ಅಪಘಾತ ಪ್ರಕರಣ

ಅಜ್ಜಂಫುರ ಪೊಲೀಸ್ ಠಾಣೆ.

ದಿನಾಂಕ; 01/06/2022 ರಂದು ಪಿರ್ಯಾದಿ ಪಾಲಯ್ಯ ಬಿನ್ ಲೇಟ್ ಕಾಟಪ್ಪ, ದೊಡ್ಡಕಿಟ್ಟದಳ್ಳಿ, ಮಡಿಕೇರಿ ವಾಸಿ ಇವರು ನೀಡಿದ ದೂರಿನಲ್ಲಿ ದಿನಾಂಕ;31/05/2022 ರಂದು ಸಂಜೆ ಚಾಣಕ್ಯ ಬಾರ್ ನಲ್ಲಿ ಕೆಲ ಮಾಡಿ ತನ್ನ ಸ್ನೇಹಿತನನ್ನು  ಮಾತನಾಡಿಸಿಕೊಂಡು ಬರಲು ದೇವರಾಜ ಎಂಬಾತನ ಬಾಬ್ತು ಕೆಎ-66-ಜೆ-9518 ರ ಬೈಕಿನಲ್ಲಿ ತಿಪ್ಪಗೊಂಡನಹಳ್ಳಿ ಗೇಟ್ ಬುಕ್ಕಂಬೂದಿ ರಸ್ತೆಯಲ್ಲಿ ಹೋಗುತ್ತಿರುವಾಗ, ಎದುರುಗಡೆಯಿಂದ ಬಂದ ಕೆಎ-66 ಟಿ-3763 ರ ಟ್ಯಾಕ್ಟರ್ ಚಾಲಕ ಟ್ಯಾಕ್ಟರ್ ಅನ್ನು ಅತೀವೇಗ ಮತ್ತು ಅಜಾಗರೂತೆಯಿಂದ ಚಾಲನೆ ಮಾಡಿಕೊಂಡು ಬಂದು  ಬೈಕಿಗೆ ಡಿಕ್ಕಿ ಹೊಡೆಸಿದ ಪರಿಣಾಮ ನಾಗರಾಜುಗೆ ತಲೆಗೆ ತೀವ್ರ ಪೆಟ್ಟಾಗಿ ಮೃತಪಟ್ಟಿದ್ದು, ಕೆಎ-66 ಟಿ-3763 ರ ಟ್ಯಾಕ್ಟರ್ ಚಾಲಕನ ವಿರುದ್ದ ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ.

ಕಡೂರು ಪೊಲೀಸ್ ಠಾಣೆ.

ದಿನಾಂಕ:31-05-2022 ರಂದು ಕಡೂರು ಪೊಲೀಸ್ ಠಾಣಾ ಸರಹದ್ದಿನ ಲಕ್ಕೇನಹಳ್ಳಿ  ಗ್ರಾಮದ ರವಿ ಬಿನ್ ಬೀರಪ್ಪ ಎಂಬುವನು ತನ್ನ ಪೆಟ್ಟಿಗೆ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಅರೋಪಿಯನ್ನು ವಶಕ್ಕೆ ಪಡೆದು ಅರೋಪಿತನ ವಶದಲ್ಲಿ ಇದ್ದ 90 ಎಂ.ಎಲ್. ನ 32 ಮದ್ಯವನ್ನು  ಅಂದಾಜು ಬೆಲೆ 1124/- ರೂ ಗಳನ್ನು ಅಮಾನತ್ತುಪಡಿಸಿಕೊಂಡಿದ್ದು, ಆರೋಪಿತನ ವಿರುದ್ದ ಕಡೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಮಲ್ಲಂದೂರು ಠಾಣಾ ಪಿಎಸ್ಐ ರಮ್ಯ ಎನ್. ಕೆ.  ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಕಳ್ಳತನ ಪ್ರಕರಣ

ನಗರ ಪೊಲೀಸ್ ಠಾಣೆ

ದಿನಾಂಕ;31-05-2022 ರಂದು ಪಿರ್ಯಾದಿ ಪುಟ್ಟಸ್ವಾಮಿ ಎಂ.ಡಿ. ಬಿನ್  ಎಂ.ಡಿ. ದೇವೇಗೌಡ,  ಜಯನಗರ ಚಿಕ್ಕಮಗಳೂರು ವಾಸಿ ಇವರು ನೀಡಿದ ದೂರಿನಲ್ಲಿ  ದಿನಾಂಕ;30-05-2022 ರಂದು ಮನೆಗೆ ಬೀಗ ಹಾಕಿಕೊಂಡು ಬೆಂಗಳೂರಿಗೆ ಹೋಗಿದ್ದು, ದಿನಾಂಕ;31-05-2022 ರಂದು ವಾಪಾಸ್ಸು ಬಂದು ಮನೆಯನ್ನು ನೋಡಲಾಗಿ  ಮನೆಯ ಹಿಂಬಾಗದ ಬಾಗಿಲನ್ನು ಯಾರೋ ಕಳ್ಳರು ಮುರಿದು ಮನೆಯ ಒಳಪ್ರವೇಶಿಸಿ, ಗಾಡ್ರೇಜ್ ಬೀರುವಿನಲ್ಲಿ ಇದ್ದ ಒಂದು ಚಿನ್ನದ 12 ಗ್ರಾಂ ಉಂಗುರ, ಬೆಲೆ 60,000/- ರೂ ಮತ್ತು ಒಂದು 6 ಗ್ರಾಂ ತೂಕದ ಪ್ಲಾಟಿನಂ ಉಂಗುರ ಸುಮಾರು 45,000/- ರೂ ಒಟ್ಟು 1,05,000 ರೂ ಗಳ ಬೆಲೆಯ 2 ಉಂಗುರಗಳನ್ನು  ಕಳವು ಮಾಡಿಕೊಂಡು ಹೋಗಿದ್ದು, ಕಳ್ಳರನ್ನು ಪತ್ತೆ ಮಾಡಿ ಕಳುವಾಗಿರುವ ಸ್ವತ್ತುಗಳನ್ನು ಪತ್ತೆ ಮಾಡಿ ಕೊಡುವಂತೆ ನೀಡಿದ ದೂರಿನ ಮೇರೆಗೆ ನಗರಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

 

ಇತ್ತೀಚಿನ ನವೀಕರಣ​ : 01-06-2022 07:24 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080