ಅಭಿಪ್ರಾಯ / ಸಲಹೆಗಳು

ಸೈಬರ್ ಪ್ರಕರಣ.

ಸಿ.ಇ.ಎನ್. ಪೊಲೀಸ್ ಠಾಣೆ.

ದಿನಾಂಕ 01-09-2021 ರಂದುಕೃಷ್ಣೇಗೌಡ ಬಿನ್ಲೇಟ್ ಪುಟ್ಟೇಗೌಡ, ಜಾವಳಿವಾಸಿರವರು ನೀಡಿದ ದೂರಿನ ಸಾರಾಂಶವೇನೆಂದರೆ  ದಿನಾಂಕ 31-08-2021 ರಂದು ಮದ್ಯಾಹ್ನ 03-00 ಗಂಟೆ ಸಮಯದಲ್ಲಿ ನನ್ನ ಮೊಬೈಲ್ ನಂಬರ್ಗೆ ಅನಾಮಧೇಯ ನಂಬರ್ನಿಂದ ಪೋನ್ ಮಾಡಿ ಕೆನರಾ ಬ್ಯಾಂಕ್ ಮ್ಯಾನೇಜರ್ ಎಂದು ನಂಬಿಸಿ ನನ್ನ ಬ್ಯಾಂಕ್ ಖಾತೆಯಿಂದ 2 ಬಾರಿ ಒಟ್ಟು 99,998/- ರೂಗಳನ್ನು  ವರ್ಗಾವಣೆ  ಮಾಡಿಕೊಂಡಿರುತ್ತಾರೆ. ಈ ರೀತಿಯಾಗಿ ನನ್ನನ್ನು ನಂಬಿಸಿ ಮೋಸ ಮಾಡಿದವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಸಿ.ಇ.ಎನ್ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಸುಲಿಗೆ ಪ್ರಕರಣ.

ಬಣಕಲ್ ಪೊಲೀಸ್ ಠಾಣೆ.

ದಿನಾಂಕ 31-08-2021 ರಂದು ಪಿರ್ಯಾದುದಾರರಾದ ಉಷಾ, ತ್ರಿಪುರ ಗ್ರಾಮ ವಾಸಿ ರವರು ನೀಡಿದ ದೂರಿನಲ್ಲಿ ನಾನು ಈಗ್ಗೆ 9 ವರ್ಷಗಳಿಂದ ಶ್ರೀ, ಧರ್ಮಸ್ಥಳ ಗ್ರಾಮಾಭಿವೃದ್ದಿ  ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದು , ಈ ದಿವಸ ಸಂಘದ ವಾರದ ಸಭೆ ಇದು  ಸಂಜೆ 06-30 ಗಂಟೆ ಸಭೆ ಮುಗಿದ ಬಳಿಕ  ನನ್ನೊಂದಿಗೆ ಬಂದಿದ್ದ ನನ್ನ  ಗಂಡ ಗಿರಿಯಪ್ಪನವರು ಮನೆಗೆ ಹೋದರು . ನಾನು ಸಂಘದ ಅರ್ಜಿ ಬರೆದು ಸಂಜೆ 06-45 ಗಂಟೆ ಸಮಯದಲ್ಲಿ ತ್ರಿಪುರದಿಂದ ಗುತ್ತಿಗೆ ಹೋಗುವ ರಸ್ತೆಯಲ್ಲಿ ಒಬ್ಬಳೆ ನಡೆದುಕೊಂಡು ಹೋಗುವಾಗ ಹಿಂದಿನಿಂದ ಯಾರೋ ಒಬ್ಬ ವ್ಯಕ್ತಿ ಬಂದು ನನ್ನ ಬಾಯಿಯನ್ನು ಅದುಮಿ ಹಿಡಿದುಕೊಂಡು ಕೈಯಲ್ಲಿದ್ದ 12,000/- ರೂ ಬೆಲೆಯ ಮೊಬೈಲ್ ಸೆಟ್ ನ್ನು ಕಿತ್ತುಕೊಂಡು ರಸ್ತೆಯಲ್ಲಿ ಓಡಿಹೋಗಿ ಮರೆಯಾದನು. ಮುಖಕ್ಕೆ ಮಾಸ್ಕ್ ಹಾಕಿದ್ದರಿಂದ ಯಾರೆಂದು ಗುರುತಿಸಲು ಸಾದ್ಯವಾಗಲಿಲ್ಲ, ನಾನೊಬ್ಬಲೇ ನಡೆದುಕೊಂಡು ಹೋಗುತ್ತಿರುವಾಗ ಹಿಂದಿನಿಂದ ಬಂದು ನನ್ನ ಬಾಯಿಯನ್ನು ಅದುಮಿ ಮೊಬೈಲ್ ನ್ನು ಕಿತ್ತುಕೊಂಡು ಹೋಗಿರುವ ವ್ಯಕ್ತಿಯನ್ನು ಪತ್ತೆ ಮಾಡಬೇಕೆಂದು ನೀಡಿದ ದೂರಿನ ಮೇರೆಗೆ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

 

 

ಇತ್ತೀಚಿನ ನವೀಕರಣ​ : 02-09-2021 10:21 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080