ಅಭಿಪ್ರಾಯ / ಸಲಹೆಗಳು

ಅಕ್ರಮ ಗಾಂಜಾ ಸೇವನೆ ಪ್ರಕರಣ;

ಮಲ್ಲಂದೂರು ಪೊಲೀಸ್ ಠಾಣೆ.

ದಿನಾಂಕ:01/07/2022 ರಂದು ಪಿ.ಎಸ್.ಐ. ಮಲ್ಲಂದೂರು ರವರು ನೀಡಿದ ದೂರಿನಲ್ಲಿ ದಿನಾಂಕ;30/06/2022 ರಂದು  ಕಳವಾಸೆಯ ಗ್ರಾಮದ ಶಿವಣ್ಣ ರವರ ಅಂಗಡಿ ಅಬುಲ್ ಹಮೀದ್ ಬಿನ್ ಹುಸೆನ್ ವಾಸ ರವಿಗೌಡರ ಎಸ್ಟೇಟ್ , ಕಳವಾಸೆ ಗ್ರಾಮ ಜಾಗರ ಹೋಬಳಿ ಈತನು ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಾದಕ ವಸ್ತುವನ್ನು ಸೇವನೆ ಮಾಡಿ ಅಮಲಿನಲ್ಲಿ ಇರುವಂತೆ ವರ್ತಿಸುತ್ತಿದ್ದ, ಸದರಿ ಅಸಾಮಿಯನ್ನು ವಶಕ್ಕೆ ಪಡೆದು, ಸದರಿ ಅಸಾಮಿಯು ಮಾದಕ ವಸ್ತುವನ್ನು ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಅರೋಫಿತನ ವಿರುದ್ದ ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಮಲ್ಲಂದೂರು ಠಾಣಾ ಪಿ.ಎಸ್.ಐ. ರವೀಶ್  ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಮನುಷ್ಯ ಕಾಣೆ ಪ್ರಕರಣ

ಶೃಂಗೇರಿ ಪೊಲೀಸ್ ಠಾಣೆ.

ದಿನಾಂಕ;02/07/2022 ರಂದು ಪಿರ್ಯಾದಿ ಶಂಕರಪ್ಪ ಬಿನ್ ಅಣ್ಣಫ್ಪಗೌಡ  ವಾಸ ತನಿಕೋಡು ಗ್ರಾಮ ಶೃಂಗೇರಿ  ಇವರು ನೀಡಿದ ದೂರಿನಲ್ಲಿ ಪಿರ್ಯಾದಿಯ ಹೆಂಡತಿ ಮೀನಾಕ್ಷಿ ಇವಳು ದಿನಾಂಕ;01/07/2022 ರಂದು ಶೃಂಗೇರಿಗೆ ಹೋಗಿ ಬರುವುದಾಗಿ ಮನೆಯಿಂದ ಹೋದವಳು, ವಾಪಾಸ್ಸು ಮನೆಗೆ ಬಾರದೇ ಕಾಣೆಯಾಗಿದ್ದು, ಈವರೆಗೆ ಹುಡಕಲಾಗಿ ಪತ್ತೆಯಾಗಿರುವುದಿಲ್ಲ. ಕಾಣೆಯಾಗಿರುವ ಹೆಂಡತಿ ಮೀನಾಕ್ಷಿ,  39 ವರ್ಷ, ರವರನ್ನು ಪತ್ತೆ ಮಾಡಿ ಕೊಡುವಂತೆ ನೀಡಿದ ದೂರಿನ ಮೇರೆಗೆ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಮಹಿಳಾ ಪೊಲೀಸ್ ಠಾಣೆ.

ದಿನಾಂಕ;01/07/2022 ರಂದು ಪಿರ್ಯಾದಿ ಶ್ರೀಮತಿ ದೇವಮ್ಮ ಕೊಂ ರಾಜೇಂದ್ರ  ವಾಸ ದೋಣಿಖಣ, ಚಿಕ್ಕಮಗಳೂರು  ಇವರು ನೀಡಿದ ದೂರಿನಲ್ಲಿ ಪಿರ್ಯಾದಿಯ ಹಾಸ್ಟೇಲ್ ನಲ್ಲಿ ಓದಿಕೊಂಡಿದ್ದ ಅಕ್ಷಿತ ಇವಳು ದಿನಾಂಕ; 28/06/2022 ರಂದು ಕಾಲೇಜಿಗೆ ಹೋಗಿ ಬರುವುದಾಗಿ ಹಾಸ್ಟೇಲ್ ನಿಂದ  ಹೋದವಳು, ವಾಪಾಸ್ಸು ಹಾಸ್ಟೇಲ್ ಗೆ  ಬಾರದೇ ಕಾಣೆಯಾಗಿದ್ದು, ಈವರೆಗೆ ಹುಡಕಲಾಗಿ ಪತ್ತೆಯಾಗಿರುವುದಿಲ್ಲ. ಕಾಣೆಯಾಗಿರುವ ; ಅಕ್ಷಿತ ಹೆಚ್.ಎಸ್.,  19 ವರ್ಷ, ದುಂಡುಮುಖ, ಸಾದಾರಣ ಮೈ ಕಟ್ಟು, 5.5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ಕನ್ನಡ ಇಂಗ್ಲೀಷ್ ಬಾಷೆ ಮಾತನಾಡುತ್ತಾಳೆ. ನೇರಳೆ ಬಣ್ಣದ ಟಾಪ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾಳೆ. ಇವಳನ್ನು ಪತ್ತೆ ಮಾಡಿ ಕೊಡುವಂತೆ ನೀಡಿದ ದೂರಿನ ಮೇರೆಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಬೈಕ್ ಕಳ್ಳತನ ಪ್ರಕರಣ.

ಕಡೂರು ಪೊಲೀಸ್ ಠಾಣೆ.

ದಿನಾಂಕ 01/07/2022 ರಂದು ಪಿರ್ಯಾದುದಾರರಾದ ಮಲ್ಲಿಕಾರ್ಜುನ ಬಿ.ಎನ್. ಬಿನ್ ನಾಗರಾಜಪ್ಪ, ಕಡೂರು ಟೌನ್  ನೀಡಿದ ದೂರಿನ ಸಾರಾಂಶವೇನೆಂದರೆ, ಪಿರ್ಯಾದಿಯು ತನ್ನ ಬಾವ ಸ್ವಾಮಿ ರವರ ಬಾಬ್ತು ಕೆಎ-18-ಡಬ್ಲ್ಯೂ-7856 ರ ನಂಬರಿನ ಡಿಸ್ಕವರಿ ಬೈಕ್ ಅನ್ನು ದಿನಾಂಕ;28/05/2022 ರಂದು ಮನೆಗೆ ಹೊರಗೆ ನಿಲ್ಲಿಸಿದ್ದು ದಿನಾಂಕ; 29/05/2022 ರಂದು   ಬೆಳಿಗ್ಗೆ ನೋಡಲಾಗಿ ಯಾರೋ ಕಳ್ಳರು ಮನೆಯ ಮುಂದೆ ನಿಲ್ಲಿಸಿದ್ದ ಸುಮಾರು  20.000/-ರೂ ಬೆಲೆಬಾಳುವ  ಬೈಕ್ ಅನ್ನು  ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಕಳ್ಳರನ್ನು ಪತ್ತೆ ಮಾಡಿ ಕಳುವಾಗಿರುವ ಬೈಕ್ ಅನ್ನು ಪತ್ತೆ ಮಾಡಿ ಕೊಡುವಂತೆ ನೀಡಿದ ದೂರಿನ ಮೇರೆಗೆ ಕಡೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ

ಇತ್ತೀಚಿನ ನವೀಕರಣ​ : 02-07-2022 01:56 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080