ಅಭಿಪ್ರಾಯ / ಸಲಹೆಗಳು

ಮರಣಾಂತಿಕ ರಸ್ತೆ ಅಪಘಾತ ಪ್ರಕರಣ

ಕಡೂರು ಪೊಲೀಸ್ ಠಾಣೆ.

ದಿನಾಂಕ;02/06/2022 ರಂದು ಪಿರ್ಯಾದಿ ಮಹಮ್ಮದ್ ಬಷಿರ್ ಬಿನ್ ಮಹಮ್ಮದ್ ಇಸ್ಮಾಯಿಲ್ ಮಸೀದಿ ಬೀದಿ ಸಖರಾಯಪಟ್ಟಣ ವಾಸಿ ಇವರು ನೀಡಿದ ದೂರಿನಲ್ಲಿ ದಿನಾಂಕ;02/06/2022 ರಂದು ಸಂಜೆ ಪಿರ್ಯಾದಿ ಮಗ ಮಹಮ್ಮದ್ ಶಾರೀಕ್ ತನ್ನ ಸ್ನೇಹಿತ ಸಲ್ಮಾನ್ ರವರ ಮನೆಗೆ ಕಡೂರಿಗೆ ಕೆಎ-66-ಜೆ-1857 ಬೈಕಿನಲ್ಲಿ ಹೋಗುತ್ತಿದ್ದಾಗ ರಾಮನಹಳ್ಳಿ ಗೇಟ್ ಬಳಿ  ರಸ್ತೆಯಲ್ಲಿ ಹೋಗುತ್ತಿರುವಾಗ, ಎದುರುಗಡೆಯಿಂದ ಬಂದ ಕೆಎ-18-ಎನ್-6878 ರ ಕಾರ್ ಚಾಲಕ ಕಾರ್ ಅನ್ನು ಅತೀವೇಗ ಮತ್ತು ಅಜಾಗರೂತೆಯಿಂದ ಚಾಲನೆ ಮಾಡಿಕೊಂಡು ಬಂದು  ಬೈಕಿಗೆ ಡಿಕ್ಕಿ ಹೊಡೆಸಿದ ಪರಿಣಾಮ ಮಹಮ್ಮದ್ ಶಾರೀಕ್ ಗೆ ತಲೆಗೆ ತೀವ್ರ ಪೆಟ್ಟಾಗಿ ಮೃತಪಟ್ಟಿದ್ದು, ಕೆಎ-18-ಎನ್-6878 ರ ಕಾರ್ ಚಾಲಕನ ವಿರುದ್ದ ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಕಡೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. 

 

ಅಕ್ರಮ ಮದ್ಯ ಮಾರಾಟ ಪ್ರಕರಣ.

ಮೂಡಿಗೆರೆ ಪೊಲೀಸ್ ಠಾಣೆ.

ದಿನಾಂಕ:02-06-2022 ರಂದು ಮೂಡಿಗೆರೆ ಪೊಲೀಸ್ ಠಾಣಾ ಸರಹದ್ದಿನ ಮುತ್ತಿಗೆಪುರ ಗ್ರಾಮದ ಮುದ್ರೆಮನೆಯಲ್ಲಿ ಸಂದೀಪ ಬಿನ್ ಲೇಟ್ ಪುಟ್ಟಸ್ವಾಮಿಗೌಡ ಎಂಬುವನು ತನ್ನ ದಿನಸಿ ಅಂಗಡಿಯ ಹಿಂಭಾಗದಲ್ಲಿ ತೆರೆದ ಶೆಡ್ ನಲ್ಲಿ  ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಅರೋಪಿಯನ್ನು ವಶಕ್ಕೆ ಪಡೆದು, ಅರೋಪಿತನ ವಶದಲ್ಲಿ ಇದ್ದ 9 ಲೀಟರ್ 720 ಎಂ.ಎಲ್. ನ  ಮದ್ಯವನ್ನು  ಅಂದಾಜು ಬೆಲೆ 3021/- ರೂ ಗಳನ್ನು ಅಮಾನತ್ತುಪಡಿಸಿಕೊಂಡಿದ್ದು, ಆರೋಪಿತನ ವಿರುದ್ದ ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಮೂಡಿಗೆರೆ ಠಾಣಾ ಪಿಎಸ್ಐ ರವಿ ಜಿ.ಎ. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

 

ಅಕ್ರಮ ಗಾಂಜಾ ಸೇವನೆ ಪ್ರಕರಣಗಳು

ಬಾಳೆಹೊನ್ನೂರು ಪೊಲೀಸ್ ಠಾಣೆ.

ದಿನಾಂಕ:01/06/2022 ರಂದು ದೇವದಾನ ಗ್ರಾಮದ ಸಂಗಮೇಶ್ವರಪೇಟೆಯ ಹಾಸ್ಟೇಲ್ ಹತ್ತಿರ 1] ಸಾದಿಕ್ ಬಿನ್ ಮೊಹಿದ್ದಿನ್, ಕಡಬಗೆರೆ 2] ಶಾಕೀರ್ ಬಿನ್ ಹಲೀಲ್ ವಾಸ ಜೇನುಗದ್ದೆ 3] ಸಿಯಾಬ್ ಬಿನ್ ಉಮ್ಮರ್ ವಾಸ ಕಡಬಗೆರೆ, ದೇವದಾನ ಗ್ರಾಮ  4] ರಪೀಕ್ ಬಿನ್ ಮೊಹಿದ್ದೀನ್, ವಾಸ ಕಡಬಗೆರೆ, ದೇವದಾನ ಗ್ರಾಮ ಇವರುಗಳು ಗಾಂಜಾ ಸೇವನೆ ಮಾಡಿ ಅಮಲಿನಲ್ಲಿ  ಇರುವಂತೆ ವರ್ತಿಸುತ್ತಿದ್ದ, ಸದರಿ ಅಸಾಮಿಯನ್ನು ವಶಕ್ಕೆ ಪಡೆದು ಸದರಿ ಅಸಾಮಿ ಗಾಂಜಾ ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಅರೋಫಿತನ ವಿರುದ್ದ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣಗಳನ್ನು ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಬಾಳೆಹೊನ್ನೂರು ಠಾಣಾ ಪಿಎಸ್ಐ ನಿತ್ಯಾನಂದ ಗೌಡ ಪಿ.ಡಿ.  ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

 

 

ತರೀಕೆರೆ ಪೊಲೀಸ್ ಠಾಣೆ.

ದಿನಾಂಕ:02/06/2022 ರಂದು ತರೀಕೆರೆ ಗ್ರಾಮದ ತರೀಕೆರೆ ಟೌನ್ ಎಸ್.ಜೆ.ಎಂ. ಬಳಿ ಮಹಮ್ಮದ್ ನೌಶದ್ ಬಿನ್ ಅನ್ವರ್ ಇವನು ಗಾಂಜಾ ಸೇವನೆ ಮಾಡಿ ಅಮಲಿನಲ್ಲಿ  ಇರುವಂತೆ ವರ್ತಿಸುತ್ತಿದ್ದ, ಸದರಿ ಅಸಾಮಿಯನ್ನು ವಶಕ್ಕೆ ಪಡೆದು ಸದರಿ ಅಸಾಮಿ ಗಾಂಜಾ ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದ್ದು, ಅರೋಫಿತನ ವಿರುದ್ದ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ತರೀಕೆರೆ ಠಾಣಾ ಪಿಎಸ್ಐ ತಿಪ್ಪೇಶ್ ಡಿ.ವಿ. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

 

ತರೀಕೆರೆ ಪೊಲೀಸ್ ಠಾಣೆ.

ದಿನಾಂಕ:02/06/2022 ರಂದು ತರೀಕೆರೆ ಗ್ರಾಮದ ತರೀಕೆರೆ ಟೌನ್ ಎಂ.ಜಿ. ಸರ್ಕಲ್ ಎಸ್.ಬಿ.ಐ. ಬ್ಯಾಂಕ್  ಮುಂದಿನ  ರಸ್ತೆಯ ಬದಿ ತೌಪೀಕ್ ಬಿನ್ ಹಫಿಜ್, ವಾಸ ಗಾಳಿಹಳ್ಳಿ ಇವನು ಗಾಂಜಾ ಸೇವನೆ ಮಾಡಿ ಅಮಲಿನಲ್ಲಿ ಇರುವಂತೆ ವರ್ತಿಸುತ್ತಿದ್ದ, ಸದರಿ ಅಸಾಮಿಯನ್ನು ವಶಕ್ಕೆ ಪಡೆದು, ಸದರಿ ಅಸಾಮಿ ಗಾಂಜಾ ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಅರೋಫಿತನ ವಿರುದ್ದ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ತರೀಕೆರೆ ಠಾಣಾ ಪಿಎಸ್ಐ ಅನಿಲ್ ಕುಮಾರ ನಾಯಕ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

 

ತರೀಕೆರೆ ಪೊಲೀಸ್ ಠಾಣೆ.

ದಿನಾಂಕ:02/06/2022 ರಂದು ತರೀಕೆರೆ ಗ್ರಾಮದ ತರೀಕೆರೆ ಟೌನ್ ಎಪಿಎಂಸಿ ಗೇಟ್ ಮುಂದೆ ದರ್ಶನ್ ವಿ ಬಿನ್ ವೆಂಕಟೇಶ, ವಾಸ ಚಿಕ್ಕರೆ ಇವನು ಗಾಂಜಾ ಸೇವನೆ ಮಾಡಿ ಅಮಲಿನಲ್ಲಿ ಇರುವಂತೆ ವರ್ತಿಸುತ್ತಿದ್ದ, ಸದರಿ ಅಸಾಮಿಯನ್ನು ವಶಕ್ಕೆ ಪಡೆದು, ಸದರಿ ಅಸಾಮಿ ಗಾಂಜಾ ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಅರೋಫಿತನ ವಿರುದ್ದ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ತರೀಕೆರೆ ಠಾಣಾ ಪಿಎಸ್ಐ  ಕೃಷ್ಣನಾಯ್ಕ್  ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 04-06-2022 01:13 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080