ಅಭಿಪ್ರಾಯ / ಸಲಹೆಗಳು

ಅಕ್ರಮ ಇಸ್ಪೀಟ್ ಜೂಜಾಟ ಪ್ರಕರಣ

ಸಿ.ಇ.ಎನ್. ಪೊಲೀಸ್ ಠಾಣೆ.

ದಿನಾಂಕ:04/04/2022 ರಂದು ಬೆಳಿಗ್ಗೆ ಚಿಕ್ಕಮಗಳೂರು ನಗರದ ಉಂಡೆದಾಸರಹಳ್ಳಿ ಯಿಂದ ಉಪ್ಪಳ್ಳಿ ಹೋಗುವ ಕಾಲುದಾರಿಯಲ್ಲಿರುವ ಗೊಬ್ಬರದ ಮರದ ಕೆಳಗೆ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಅರೋಪಿತರಾದ 1] ಮಂಜುನಾಥ 2] ಪ್ರಶಾಂತ 3] ಅರುಣ 4] ಲೇಕೇಶ್ ಗೌಂಡರ್ 5] ಸಂಜು 6] ಆನಂದ 7]ನಟರಾಜ ರವರನ್ನು ವಶಕ್ಕೆ ಪಡೆದು ಆರೋಪಿತರು ಅಕ್ರಮವಾಗಿ ಇಸ್ಪೀಟ್ ಜೂಜಾಟಕ್ಕೆ ಬಳಸಿದ  22,930 /- ರೂ ನಗದು ಹಣ , 52 ಇಸ್ಪೀಟ್ ಎಲೆಗಳು, ಒಂದು ಹಳದಿ ಬಣ್ಣದ ಪ್ಲಾಸ್ಟಿಕ್ ಚೀಲವನ್ನು ಅಮಾನತ್ತುಪಡಿಸಿಕೊಂಡು ಬಂದು ಸಿ.ಇ. ಎನ್. ಪೊಲೀಸ್ ಠಾಣೆಯಲ್ಲಿ ಆರೋಪಿತರ ವಿರುದ್ದ  ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಸಿ.ಇ.ಎನ್. ಪೊಲೀಸ್ ಠಾಣೆಯ ಪಿ.ಎಸ್.ಐ. ನಾಸೀರ್ ಹುಸೇನ್ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಅಕ್ರಮ ಮಟ್ಕಾ ಜೂಜಾಟ ಪ್ರಕರಣ

ನಗರ ಪೊಲೀಸ್ ಠಾಣೆ.

ದಿನಾಂಕ:04/04/2022 ರಂದು ಮದ್ಯಾಹ್ನ ಚಿಕ್ಕಮಗಳೂರು ನಗರದ ಮಾರ್ಕೇಟ್ ರಸ್ತೆಯಲ್ಲಿರುವ ನ್ಯಾಮತ್ ಹೋಟೆಲ್ ಹತ್ತಿರ ಖಾದರ್ ಬಾಷ ಎಂಬುವರು ಅಕ್ರಮವಾಗಿ ಸಾರ್ವಜನಿಕರಿಗೆ ಮಟ್ಕಾ ಜೂಜಾಟ ಆಡಿಸುತ್ತಿದ್ದ ಅರೋಪಿತನಾದ  ಖಾದರ್ ಪಾಷ ಬಿನ್ ರೆಹಮಾತ್ ವುಲ್ಲಾ  ವಾಸ ಟಿಪ್ಪು ನಗರ ಚಿಕ್ಕಮಗಳೂರು ಈತನನ್ನು ವಶಕ್ಕೆ ಪಡೆದು ಆತನು ಮಟ್ಕಾ ಚೀಟಿಯನ್ನು ನಾಸೀರ್ ಪಾಷ, ಷರೀಪ್ ಗಲ್ಲಿ ಚಿಕ್ಕಮಗಳೂರು ಈತನಿಗೆ ಕೊಡುತ್ತಿರುವುದಾಗಿ ತಿಳಿಸಿದ್ದು, ಆರೋಪಿತನು ಸಾರ್ವಜನಿಕರಿಂದ ಸಂಗ್ರಹಿಸಿದ ಹಣ 1160/-ರೂ ನಗದು ಹಣ, ಒಂದು ಮಟ್ಕಾ ನಂಬರಿನ ಚೀಟಿ ಮತ್ತು ಒಂದು ಬಾಲ್ ಪೆನ್ನು ಅನ್ನು ಅಮಾನತ್ತುಪಡಿಸಿಕೊಂಡು ಬಂದು ನಗರ ಪೊಲೀಸ್ ಠಾಣೆಯಲ್ಲಿ ಆರೋಪಿತರ ವಿರುದ್ದ  ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ನಗರ ಪೊಲೀಸ್ ಠಾಣೆಯ ಪಿ.ಎಸ್.ಐ. ಕೆ.ಎಸ್. ಸತೀಶ್ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಮನುಷ್ಯ ಕಾಣೆ ಪ್ರಕರಣ

ಎನ್.ಆರ್. ಪುರ ಪೊಲೀಸ್ ಠಾಣೆ.

ದಿನಾಂಕ:04/04/2022 ರಂದು ಕಸ್ತೂರಮ್ಮ ಕೋಂ ಮಲ್ಲಪ್ಪ ಕೋಣಕೆರೆ ಗ್ರಾಮ ಇವರು ನೀಡಿದ ದೂರಿನಲ್ಲಿ ದಿನಾಂಕ 24/03/2022 ಪಿರ್ಯಾದಿ ಮಗಳು ಗೀತಾ ಮಂಜುನಾಥ, ಇವಳು ತನ್ನ ಮಕ್ಕಳಾದ ಶ್ವೇತಾ ಮತ್ತು ಕೆಂಚಮ್ಮ ರವರುಗಳನ್ನು ಕರೆದುಕೊಂಡು ಮನೆಯಿಂದ ಹೋದಳು ಮನೆಗೆ ವಾಪಾಸ್ಸು ಬಾರದೆ ಇದ್ದು, ಕಾಣೆಯಾಗಿರುತ್ತಾರೆ. ಎಲ್ಲಾ ಕಡೆ ಹುಡುಕಾಡಿದರೂ ಸಹ ನನ್ನ ಮಗಳು ಮತ್ತು ಮೊಮ್ಮಕ್ಕಳು ಪತ್ತೆಯಾಗಿರುವುದಿಲ್ಲ. ಅದ್ದರಿಂದ ಕಾಣೆಯಾಗಿರುವ ನನ್ನ ಮಗಳು ಮತ್ತು ಮೊಮ್ಮಕ್ಕಳನ್ನು ಪತ್ತೆ ಮಾಡಿಕೊಡುವಂತೆ ಕೋರಿ ನೀಡಿದ ದೂರಿನ ಮೇರೆಗೆ ಎನ್.ಆರ್. ಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. 

 

ಇತ್ತೀಚಿನ ನವೀಕರಣ​ : 04-04-2022 06:47 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080