ಅಭಿಪ್ರಾಯ / ಸಲಹೆಗಳು

ಮನುಷ್ಯ ಕಾಣೆ ಪ್ರಕರಣ.

ಅಜ್ಜಂಪುರ ಪೊಲೀಸ್ ಠಾಣೆ.

ದಿನಾಂಕ 04-10-2021 ರಂದು ಶ್ರೀಮತಿ.ಗೀತಾ, ಹನುವನಹಳ್ಳಿ ವಾಸಿರವರು ನೀಡಿದ ದೂರಿನ ಸಾರಾಂಶವೇನೆಂದರೆ ನನ್ನ ತಮ್ಮನಾದ ರುದ್ರಸ್ವಾಮಿ, 45 ವರ್ಷ ಈತನಿಗೆ ಮಾನಸಿಕ ಖಾಯಿಲೆಯಿದ್ದು , ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದು ,ಆದರೂ ಸಹ ಮಾಣಸಿಕ ಅಸ್ವಸ್ಥನಾಗಿದ್ದು ದಿನಾಂಕ 30-09-2021 ರಂದು ಮನೆಯಿಂದ ಹೊರಗೆ ಹೋದವರು ಇದುವರೆಗೂ ವಾಪಾಸ್ ಮನೆಗೆ ಬಂದಿರುವುದಿಲ್ಲ. ನಮ್ಮ ಸಂಬಂಧಿಕರ, ನೆಂಟರಿಷ್ಟರ ಮನೆಗಳಲ್ಲಿ ಹುಡುಕಡಲಾಗಿ ಎಲ್ಲಿಯೂ ಪತ್ತೆಯಾಗಿರುವುದಿಲ್ಲ. ಆದ್ದರಿಂದ  ಕಾಣೆಯಾಗಿರುವ ನನ್ನ ತಮ್ಮನನ್ನು ಪತ್ತೆ ಮಾಡಿಕೊಡುವಂತೆ ನೀಡಿದ ದೂರಿನ ಮೇರೆಗೆ ಅಜ್ಜಂಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.      

ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ಪ್ರಕರಣ.

ಸಿ.ಇ.ಎನ್. ಪೊಲೀಸ್ ಠಾಣೆ.

ದಿನಾಂಕ 03-10-2021 ರಂದು ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯಲ್ಲಿರುವ ಕೋಟೆ ಸರ್ಕಲ್ ನಲ್ಲಿ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ಜೂಜಾಟವಾಡುತ್ತಿದ್ದ 1) ಪ್ರಶಾಂತ್ 2) ಸಂತೋಷ್ 3) ಪರಮೇಶ್ 4) ಪವನ್ ಇವರುಗಳನ್ನು ವಶಕ್ಕೆ ಪಡೆದು ಅವರುಗಳ ವಶದಲ್ಲಿದ್ದ ಒಂದು ಚೀಟಿ, ವಿವಿಧ ಕಂಪೆನಿಯ 4 ಮೊಬೈಲ್ಗಳು , ಒಂದು ಬಾಲ್ ಪೆನ್ ಹಾಗೂ 40,000/- ರೂ ನಗದು ಹಣವನ್ನು ಅಮಾನತ್ತುಪಡಿಸಿಕೊಂಡು ಆರೋಪಿತರ ವಿರುದ್ದ  ಸಿ.ಇ. ಎನ್.  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಐ. ರಕ್ಷಿತ್  ಮತ್ತು ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ವಂಚನೆ  ಪ್ರಕರಣ

ಸಿ.ಇ.ಎನ್. ಪೊಲೀಸ್ ಠಾಣೆ.

ದಿನಾಂಕ 03-10-2021 ರಂದು ನಾಗರಾಜು, ಕರ್ತಿಕೆರೆ ವಾಸಿರವರು ನೀಡಿದ ದೂರಿನ ಸಾರಾಂಶವೇನೆಂದರೆ  ಈ ದಿವಸ ಮದ್ಯಾಹ್ನ 01-33 ಗಂಟೆ ಸಮಯದಲ್ಲಿ ನನ್ನ ಮೊಬೈಲ್ ನಂಬರ್ ಗೆ ಅನಾಮದೇಯ ನಂಬರ್ ನಿಂದ  ಏರ್ ಟೆಲ್ ಕಸ್ಟಮರ್ ಕೇರ್ ನಿಂದ ಕರೆ ಮಾಡುತ್ತಿರುವುದಾಗಿ ನಂಬಿಸಿ ನನ್ನ ಅಕೌಂಟ್ ನಿಂದ 50,000/- ರೂ ಹಣವನ್ನು ಮೋಸದಿಂದ ಡ್ರಾ ಮಾಡಿಕೊಂಡಿರುತ್ತಾರೆ. ನನಗೆ ಮೋಸ ಮಾಡಿರುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಸಿ.ಇ. ಎನ್.  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 04-10-2021 06:55 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080