ಅಭಿಪ್ರಾಯ / ಸಲಹೆಗಳು

ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ  ಪ್ರಕರಣ.

ಗ್ರಾಮಾಂತರ ಪೊಲೀಸ್ ಠಾಣೆ.

ದಿನಾಂಕ:04-12-2021 ರಂದು ಗ್ರಾಮಾಂತರ  ಪೊಲೀಸ್ ಠಾಣಾ ಸರಹದ್ದಿನ  ಇಂದಾವರ ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿಯಾದ ಶ್ರೀ ನರಸಿಂಹಮೂರ್ತಿ ರವರ ನೀಡಿದ ದೂರಿನಲ್ಲಿ  ದಿನಾಂಕ:29/11/2021 ಎಂ.ಜಿ. ನರೇಗಾ ಕಾಮಗಾರಿ ಅನುಷ್ಠಾನಕ್ಕೆ ಸಂಬಂಧಿಸಿದ ಕಛೇರಿಯಲ್ಲಿ  ವಿಚಾರಣಾ ಪ್ರಕ್ರಿಯೆಯನ್ನು ನಡೆಸುತ್ತಿದ್ದಾಗ ಇಂದಾವಾರ ಗ್ರಾಮ ವಾಸಿ ಯತೀಶ ಎಂಬುವನು ಏಕಾಏಕಿ ಅವಾಚ್ಯ ಶಬ್ದಗಳಿಂದ ಬೈದು ಬಲಕೆನ್ನೆಗೆ ಹೊಡೆದು ನಿನನ್ನು ಮುಗಿಸುತ್ತೇನೆ ಎಂದು ಪ್ರಾಣ ಬೆದರಿಕೆ ಹಾಕಿ ಪಿರ್ಯಾದಿಯವರಿಗೆ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು ಅರೋಪಿತನ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲು ನೀಡಿದ ದೂರಿನ ಮೇರೆಗೆ ಅರೋಫಿತನ ವಿರುದ್ದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ರಸ್ತೆ ಅಪಘಾತ ಪ್ರಕರಣ

ಬಣಕಲ್ ಪೊಲೀಸ್ ಠಾಣೆ.

ದಿನಾಂಕ:04/12/2021 ರಂದು ಪಿರ್ಯಾದಿ ಸುಧಾಕರ ಎಸ್. ರವರು ನೀಡಿದ ದೂರಿನಲ್ಲಿ ದಿನಾಂಕ 03-12-2021 ರಂದು ಸಂಜೆ 6-45 ಗಂಟೆ ಸಮಯದಲ್ಲಿ ಸಬ್ಬೇನಹಳ್ಳಿಯ ಚಿಕನ್ ಅಂಗಡಿಯಿಂದ ಚಿಕನ್ ತೆಗೆದುಕೊಂಡು ವಾಪಾಸ್ ಮನೆಗೆ ಹೋಗಲು ರಸ್ತೆ ದಾಟುತ್ತಿರುವಾಗ ಬಣಕಲ್ ಕಡೆಯಿಂದ ಬಂದ ಕೆಎ-14-ಎಸ್-5809 ಬೈಕ್ ನ ಚಾಲಕ ಬೈಕ್ ನ್ನು ದುಡುಕಿನಿಂದ ಚಾಲನೆ ಮಾಡಿಕೊಂಡು ಬಂದು ಪಿರ್ಯಾದಿಗೆ ಡಿಕ್ಕಿ ಹೊಡೆಸಿದ್ದು  ಪರಿಣಾಮ ಪಿರ್ಯಾದಿಗೆ ಪೆಟ್ಟಾಗಿದ್ದು , ಆರೋಪಿ ಬೈಕ್ ಚಾಲಕ ಬೈಕ್ ನ್ನು ನಿಲ್ಲಿಸಿದೆ ಹೋಗಿದ್ದು ಆರೋಪಿ ಬೈಕ್ ಚಾಲಕನ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲು ನೀಡಿದ ದೂರಿನ ಮೇರೆಗೆ ಅರೋಫಿತನ ವಿರುದ್ದ ಬಣಕಲ್  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ

ಇತ್ತೀಚಿನ ನವೀಕರಣ​ : 04-12-2021 07:39 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080