ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ .

ಮೂಡಿಗೆರೆ  ಪೊಲೀಸ್ ಠಾಣೆ.

ದಿನಾಂಕ 05/06/2021 ರಂದು ಮೂಡಿಗೆರೆ ಠಾಣಾ ವ್ಯಾಪ್ತಿ ಬಿಜುವಳ್ಳಿ ಗ್ರಾಮದ ಸುಂಡೇಕೆರೆ ಬ್ರಿಡ್ಜ್ ಹತ್ತಿರ ಇರುವ ಪಂಪ್ ಹೌಸ್ ಎದುರು ಪ್ರದೀಪ ಎನ್. ಕೆ. ಬಿನ್ ಕರಿಯಯ್ಯ  ಎಂಬುವವರು ಅಕ್ರಮವಾಗಿ ಮದ್ಯವನ್ನು  ಮಾರಾಟ ಮಾಡುತ್ತಿದ್ದಾರೆಂದು ಮಾಹಿತಿ ಬಂದ ಮೇರೆಗೆ ದಾಳಿ ನಡೆಸಿ ಆರೋಪಿತನನ್ನು ವಶಕ್ಕೆ ಪಡೆದು ಆತನ ಬಳಿ 90 ಎಂ.ಎಲ್ ನ ಕ್ಯಾಪ್ಟನ್ ಮಾರ್ಟಿನ್ ವಿಸ್ಕಿಯ  286 ಮದ್ಯದ ಪೌಚ್ ಗಳನ್ನು ವಶಕ್ಕೆ ಪಡೆದು ಮದ್ಯದ ಅಂದಾಜು ಬೆಲೆ 10,047/-ರೂ ಆಗಿರುತೆ. ಆರೋಪಿತನು ಮಾರಾಟ ಮಾಡಲು ಬಳಸಿದ ಕೆಎ-18-ವಿ-5598 ಆರೋಪಿತನ ವಿರುದ್ದ  ಮೂಡಿಗೆರೆ  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ  ಪಿಎಸ್ಐ. ರವಿ ಜಿ.ಎ. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ .

ಯಗಟಿ  ಪೊಲೀಸ್ ಠಾಣೆ.

ದಿನಾಂಕ 04/06/2021 ರಂದು ಜಿ.ಯರದಕೆರೆ ಗ್ರಾಮದ  ವಾಸಿಯಾದ ಕುಮಾರ ಎಂಬುವವರು ಅಕ್ರಮವಾಗಿ ಮದ್ಯವನ್ನು  ಮಾರಾಟ ಮಾಡುತ್ತಿದ್ದಾರೆಂದು ಮಾಹಿತಿ ಬಂದ ಮೇರೆಗೆ ದಾಳಿ ನಡೆಸಿ ಆರೋಪಿತನಾದ ಕುಮಾರನನ್ನು ವಶಕ್ಕೆ ಪಡೆದು ಆತನ ಬಳಿ ಪ್ಲಾಸ್ಟಿಕ್ ಚೀಲದಲ್ಲಿದ್ದ  90 ಎಂ.ಎಲ್ ನ ರಾಜಾವಿಸ್ಕಿಯ 41 ಮದ್ಯದ ಪೌಚ್ ಗಳನ್ನು ವಶಕ್ಕೆ ಪಡೆದು ಮದ್ಯದ ಅಂದಾಜು ಬೆಲೆ 1440/ರೂ ಆಗಿರುತ್ತೆ  ಆರೋಪಿತನ ವಿರುದ್ದ  ಯಗಟಿ  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪ್ರಭಾರ ಪಿಎಸ್ಐ. ಬಸವರಾಜಪ್ಪ  ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ

ಯಗಟಿ  ಪೊಲೀಸ್ ಠಾಣೆ.

ದಿನಾಂಕ 04/06/2021 ರಂದು ಚೌಳಹಿರಿಯೂರು ಗ್ರಾಮದ  ವಾಸಿಯಾದ ಮಹೇಶ್ವರಪ್ಪ ಎಂಬುವವರು ಚೌಳಹಿರಿಯೂರು ರಸ್ತೆಯ ದೊಡ್ಡ ಸೇತುವೆಯ ನಾಗರಾಜಪ್ಪರವರ ತೋಟದ ಹತ್ತಿರ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾರೆಂದು ಮಾಹಿತಿ ಬಂದ ಮೇರೆಗೆ ದಾಳಿ ನಡೆಸಿ ಆರೋಪಿತನಾದ ಮಹೇಶ್ವರಪ್ಪನನ್ನು ವಶಕ್ಕೆ ಪಡೆದು ಆತನ ಬಳಿ ಪ್ಲಾಸ್ಟಿಕ್ ಚೀಲದಲ್ಲಿದ್ದ  90 ಎಂ.ಎಲ್ ನ ರಾಜಾವಿಸ್ಕಿಯ 46 ಮದ್ಯದ ಪೌಚ್ಗಳನ್ನು ವಶಕ್ಕೆ ಪಡೆದು ,ಮದ್ಯದ ಅಂದಾಜು ಬೆಲೆ 1615 /ರೂ ಆಗಿರುತ್ತೆ,  ಆರೋಪಿತನ ವಿರುದ್ದ  ಯಗಟಿ  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ  ಪ್ರಭಾರ ಪಿಎಸ್ಐ. ಬಸವರಾಜಪ್ಪ   ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ

ಅಕ್ರಮ ಮದ್ಯ ಮಾರಾಟ ಹಾಗೂ ಕೊವಿಡ್-19 ನಿಯಮ ಉಲ್ಲಂಘನೆ ಪ್ರಕರಣ

ಬಾಳೂರು  ಪೊಲೀಸ್ ಠಾಣೆ.

ದಿನಾಂಕ 04/06/2021 ರಂದು ಬಾಳೂರು ಠಾಣಾ ಸರಹದ್ದಿನಲ್ಲಿ ಗಸ್ತು ಮಾಡುತ್ತಿರುವಾಗ ಮರ್ಕಲ್   ಗ್ರಾಮದ  ಯೋಗೀಶ  ಎಂಬುವವರು ಅಕ್ರಮವಾಗಿ ಮದ್ಯವನ್ನು  ಮಾರಾಟ ಮಾಡುತ್ತಿದ್ದಾರೆಂದು ಬಂದ ಮಹಿತಿ  ಮೇರೆಗೆ ದಾಳಿ ನಡೆಸಿದ್ದು ಆರೋಪಿಯನ್ನು ವಶಕ್ಕೆ ಪಡೆದು ಆನತ ಬಳಿ ಪ್ಲಾಸ್ಟಿಕ್ ಚೀಲದಲ್ಲಿದ್ದ 90 ಎಂ.ಎಲ್ ನ ಕ್ಯಾಪ್ಟನ್ ಮಾರ್ಟಿನ್ ಸ್ಪೆಷಲ್ ವಿಸ್ಕಿಯ 31 ಟೆಟ್ರಾ ಪೌಚ್ಗಳಿದ್ದು,ಮದ್ಯದ ಅಂದಾಜು ಬೆಲೆ 1089/- ರೂ ಆಗಿರುತ್ತೆ. ಆರೋಪಿಯು  ಕೊವಿಡ್-19 ಸಾಂಕ್ರಾಮಿಕ ರೋಗವು ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವು ಹೊರಡಿಸಿರುವ ಆದೇಶಗಳನ್ನು ಉಲ್ಲಂಘಿಸಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಮದ್ಯವನ್ನು  ಮಾರಾಟ ಮಾಡುತ್ತಿದ್ದು  ಆರೋಪಿತನ ವಿರುದ್ದ ಬಾಳೂರು  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿಎಸ್ಐ. ಶ್ರೀಮತಿ.ರೇಣುಕಮ್ಮ  ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಎನ್.ಆರ್ .ಪುರ . ಪೊಲೀಸ್ ಠಾಣೆ.

ದಿನಾಂಕ 04/06/2021 ರಂದು ಎನ್.ಆರ್.ಪುರ ಟೌನ್, ಹೌಸಿಂಗ್ ಬೋರ್ಡ್ ವಾಸಿಯಾದ ಸಚಿನ್ ಬಿನ್ ನಾಗರಾಜುರವರು  ತಮ್ಮ ಮನೆಯ ಮುಂಭಾಗ  ಸಾರ್ವಜನಿಕರಿಗೆ  ಅಕ್ರಮವಾಗಿ  ಮದ್ಯವನ್ನು ಇಟ್ಟುಕೊಂಡು ಮಾರಾಟ  ಮಾಡುತ್ತಿದ್ದಾರೆಂದು ಮಾಹಿತಿ ಬಂದ ಮೇರೆಗೆ ದಾಳಿ ನಡೆಸಿದ್ದು ಆರೋಪಿಯನ್ನು ವಶಕ್ಕೆ ಪಡೆದು ಆತನ ಬಳಿ ಪ್ಲಾಸ್ಟಿಕ್ ಚೀಲದಲ್ಲಿದ್ದ  ಸಾರಾಯಿಯ ಪೌಚ್ ಗಳನ್ನು ವಶಕ್ಕೆ ಪಡೆದಿದ್ದು, ಆರೋಪಿಯು  ಕೊವಿಡ್-19 ಸಾಂಕ್ರಾಮಿಕ ರೋಗವು ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವು ಹೊರಡಿಸಿರುವ ಆದೇಶಗಳನ್ನು ಉಲ್ಲಂಘಿಸಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಮದ್ಯವನ್ನು  ಮಾರಾಟ ಮಾಡುತ್ತಿದ್ದು  ಆರೋಪಿ ಸಚಿನ್ ರವರ ವಿರುದ್ದ ಎನ್.ಆರ್ .ಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ  ಪಿಎಸ್ಐ DILEEP KUMAR V T ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 25-06-2021 06:43 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080