ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ. 

ಯಗಟಿ ಪೊಲೀಸ್ ಠಾಣೆ.

ದಿನಾಂಕ:05/03/2022 ರಂದು ಯಗಟಿ ಠಾಣಾ ಸರಹದ್ದಿನ ನಾಗಗೊಂಡನಹಳ್ಳಿ ಇಂದಿರಾನಗರ ವಾಸಿ ಕೃಷ್ಣಪ್ಪ ಬಿನ್ ರಾಮಯ್ಯ  ವಾಸಿ ಇವರು ಇಂದಿರಾ ನಗರದಲ್ಲಿ ಅಕ್ರಮವಾಗಿಮದ್ಯ ಮಾರಾಟ ಮಾಡುತ್ತಿದ್ದು ಅರೋಪಿತನನ್ನು ವಶಕ್ಕೆ ಪಡೆದು ಆರೋಪಿತನ ವಶದಲ್ಲಿದ್ದ 90 ಎಂ.ಎಲ್.ನ 60 ಪೌಚ್ ಮದ್ಯವನ್ನು ಅಂದಾಜು ಬೆಲೆ 2100/- ರೂ ಅಗಿದ್ದು ಅಮಾನತ್ತುಪಡಿಸಿಕೊಂಡು ಬಂದು ಅರೋಪಿ ವಿರುದ್ದ ಯಗಟಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ. ವೈ.ಎಸ್. ಪಿ.ಎಸ್.ಐ. ಶಶಿಕುಮಾರ್ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಕಳ್ಳತನ ಪ್ರಕರಣ

ಮೂಡಿಗೆರೆ ಪೊಲೀಸ್ ಠಾಣೆ.

ದಿನಾಂಕ:06/03/2022 ರಂದು ಪಿರ್ಯಾದಿ ಪ್ರಕಾಶ್ ಕುಮಾರ್ ಬಿನ್ ಲೇಟ್ ಲೋಕನಾಥ ಶೆಟ್ಟಿ  ಕಲ್ಮಕ್ಕಿ ಮಾವಿನಕೆರೆ ಗ್ರಾಮ ವಾಸಿ ಇವರು ನೀಡಿದ ದೂರಿನಲ್ಲಿ ಪಿರ್ಯಾದಿಯವರು ಮೊಬೈಲ್ ಸೆಂಟರ್ ಅಂಗಡಿ ಇಟ್ಟುಕೊಂಡಿದ್ದು, ದಿನಾಂಕ:05/03/2022 ರಂದು ಅಂಗಡಿ ಬಾಗಿಲು ಹಾಕಿಕೊಂಡು ಹೋಗಿದ್ದು, ಈ ದಿನ ಬೆಳಿಗ್ಗೆ ಓಪನ್ ಮಾಡಿದಾಗ ಯಾರೋ ಕಳ್ಳರು ಅಂಗಡಿ ಮೇಲ್ಚಾವಣಿಯ ಸಿಮೆಂಟ್ ಶಿಟ್ ಅನ್ನು ಎತ್ತಿ ಅಂಗಡಿಯಲ್ಲಿ ಇಟ್ಟಿದ್ದ 6 ಸ್ಮಾಟ್ ಪೋನ್ ಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು ಕಳ್ಳತನವಾಗಿರುವ ಸ್ಮಾಟ್ ಪೋನ್ ಗಳ ಬೆಲೆ 90,000/- ರೂ ಗಳಾಗಿದ್ದು ಕಳ್ಳತನ ಮಾಡಿದ ಕಳ್ಳರನ್ನು ಪತ್ತೆ ಹಚ್ಚಿ ಕಳುವಾಗಿರುವ ಮೋಬೈಲ್ ಪೋನ್ ಗಳನ್ನು ಪತ್ತೆ ಮಾಡಿಕೊಡುವಂತೆ ನೀಡಿದ ದೂರಿನ ಮೇರೆಗೆ ಕಳಸ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಮನುಷ್ಯ ಕಾಣೆ ಪ್ರಕರಣ

ತರೀಕೆರೆ ಪೊಲೀಸ್ ಠಾಣೆ.

ದಿನಾಂಕ:05.03.2022 ರಂದು ಪಿರ್ಯಾದಿ ಶ್ರೀಮತಿ ಲೀಲಾ ಕೊಂ ಚಂದ್ರಶೇಖರ್ ಹೂವಾಡಿಗರ ಬೀದಿ ತರೀಕರೆ ಪಟ್ಟಣ ವಾಸಿ ರವರು ನೀಡಿದ ದೂರಿನಲ್ಲಿ ಪಿರ್ಯಾಧುದಾರರ ತಂಗಿ ಪುಷ್ಪಾವತಿ ಇವರು ಜೋಡಿಕೊಡಿಹಳ್ಳಿಯಿಂದ ದಿನಾಂಕ;25-02-2022 ರಂದು ಮನೆಯಲ್ಲಿ ಯಾರಿಗೂ ಹೇಳದೆ ಮನೆ ಬಿಟ್ಟು ಹೋಗಿದ್ದು, ಎಲ್ಲಾ ಕಡೆ ಹುಡುಕಿದರೂ ಸಹ ಪತ್ತೆಯಾಗಿಲ್ಲವೆಂದು ಕಾಣೆಯಾಗಿರುವ ಪುಷ್ಪಾವತಿ ಕೊಂ ಧರೇಶ್ ಎತ್ತರ 5.2. ಅಡಿ 30 ವರ್ಷ, ಕನ್ನಡ ಬಾಷೆ ಮಾತನಾಡುತ್ತಾಳೆ. ನೀಲಿ ಬಣ್ಣದ ನೈಟಿ ಕಪ್ಪು ಕೂದಲು ಕುತ್ತಿಗೆಯಲ್ಲಿ ರಾಗಿಕಾಳು ಗಾತ್ರದ ಕಪ್ಪು ಮಚ್ಚೆ ಇರುತ್ತದೆ. ಕಾಣೆಯಾಗಿರುವ ತನ್ನ ತಂಗಿಯನ್ನು ಪತ್ತೆ ಮಾಡಿಕೊಡುವಂತೆ ನೀಡಿದ ದೂರಿನ ಮೇರೆಗೆ ತರೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 06-03-2022 01:36 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080