ಅಭಿಪ್ರಾಯ / ಸಲಹೆಗಳು

ಸೈಬರ್ ಪ್ರಕರಣ.

ಸಿ.ಇ.ಎನ್. ಪೊಲೀಸ್ ಠಾಣೆ,

ದಿನಾಂಕ 06-09-2021 ರಂದು ಪೈಜಾನ್ ಅಹಮದ್ರವರು ನೀಡಿದ ದೂರೇನೆಂದರೆ ದಿನಾಂಕ 04-09-2021 ರಂದು ನನ್ನ ಮೊಬೈಲ್ ನಂಬರ್ ಗೆ ಅಮೆಜಾನ್ ಕಂಪೆನಿಯವರೆಂದು ವಾಟ್ಸ್ ಆಪ್ ಲಿಂಕ್ ಬಂದಿದ್ದು , ಅಮೆಜಾನ್ ಕಂಪೆನಿಯವರೇ ಎಂದು ನಂಬಿಸಿ7 ಟಾಸ್ಕ್ ಕಂಪ್ಲೀಟ್ ಮಾಡುವಂತೆ ತಿಳಿಸಿ  ನನ್ನ ಬ್ಯಾಂಕ್ ಅಕೌಂಟ್ ನಿಂದ 1,25,000/- ರೂಗಳನ್ನು ಹಾಕಿಸಿಕೊಂಡು ಮೋಸ ಮಾಡಿರುತ್ತಾರೆಂದು ಆರೋಪಿಗಳನ್ನು ಪತ್ತೆ ಮಾಡಬೇಕೆಂದು ನೀಡಿದ ದೂರಿನ ಮೇರೆಗೆ ಸಿ.ಇ.ಎನ್. ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ,

 

ಅಪಘಾತ ಪ್ರಕರಣ.

ಬಾಳೆಹೊನ್ನೂರು ಪೊಲೀಸ್ ಠಾಣೆ.

ದಿನಾಂಕ 05-09-2021 ರಂದು ನವೀನ್ ರವರು ನೀಡಿದ ದೂರಿನ ಸಾರಾಂಶವೇನೆಂದರೆ ದಿನಾಂಕ 04-09-2021 ರಂದು ಮದ್ಯಾಹ್ನ 01-00 ಗಂಟೆ  ಸಮಯದಲ್ಲಿ ನನ್ನ ತಮ್ಮನಾದ ನಂದೀಶರವರು ತಮ್ಮ ಬೈಕಿನಲ್ಲಿ ಬಾಳೆಹೊನ್ನೂರು ಕಡ್ಲೆಮಕ್ಕಿ ಪೊಲೀಸ್ ಕ್ವಾಟ್ರಸ್ ಗೆ ಹೋಗುವ ಕ್ಸಾಸ್ ನಲ್ಲಿ ಹೋಗುತ್ತಿರುವಾಗ ಎದುರುಗಡೆಯಿಂದ ಬಂದ ಕೆಎ-18 ಬಿ-5318 ಲಾರಿ ಚಾಲಕ ಚಂದ್ರಶೇಖರ ರವರು ಲಾರಿಯನ್ನು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಬೈಕಿಗೆ ಡಿಕ್ಕಿ ಹೊಡೆಸಿದ ಪರಿಣಾಮ ತಲೆಗೆ, ಕೈಕಾಲುಗಳಿಗೆ ಪೆಟ್ಟಾಗಿರುತ್ತದೆಂದು ಲಾರಿ ಚಾಲಕನ ವಿರುದ್ದ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ,

ಬೀರೂರು ಪೊಲೀಸ್ ಠಾಣೆ.

ದಿನಾಂಕ 05-09-2021 ರಂದು ಯಶ್ವಂತ್ ರವರು ನೀಡಿದ ದೂರಿನ ಸಾರಾಂಶವೇನೆಂದರೆ ದಿನಾಂಕ 30-08-2021 ರಂದು ನಾನು ನನ್ನ ಸ್ನೇಹಿತ ಪ್ರಮೋದ್ ರವರೊಂದಿಗೆ ಸಂಜೆ 07-30 ಗಂಟೆ ಸಮಯದಲ್ಲಿ ತಮ್ಮ ಬೈಕಿನಲ್ಲಿ ಹೋಗುತ್ತಿರುವಾಗ ಎದುರುಗಡೆಯಿಂದ ಬಂದ ಕೆಎ-04 ಎಂಫ್- 2970 ಕಾರಿನ ಚಾಲಕ ಕಾರನ್ನು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಬೈಕಿಗೆ ಡಿಕ್ಕಿ ಹೊಡೆಸಿದ ಪರಿಣಾಮ ನನಗೆ ಸಣ್ಣಪುಟ್ಟ ಗಾಯಗಳಾಗಿದ್ದು,  ಪ್ರಮೋದ್ ರವರ ಬಲತೊಡೆಗೆ ತೀವ್ರ ತರಹದ ಪೆಟ್ಟಾಗಿರುತ್ತದೆಂದು ಕಾರಿನ ಚಾಲಕನ ವಿರುದ್ದ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ

 

ಇತ್ತೀಚಿನ ನವೀಕರಣ​ : 06-09-2021 06:50 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080