ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ.

ಕಡೂರು ಪೊಲೀಸ್ ಠಾಣೆ,

ದಿನಾಂಕ 05-10-2021 ರಂದು 13-15 ಗಂಟೆ ಸಮಯದಲ್ಲಿ ತಂಗಲಿ ಗ್ರಾಮದ ವಿ.ಎಲ್, ನಗರದ ಭೀಮಾನಾಯ್ಕ ಎಂಬುವವರು ತಮ್ಮ ಮನೆಯ ಪಕ್ಕದಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದು ಆರೋಪಿಯನ್ನು ವಶಕ್ಕೆ ಪಡೆದು ಆತನ ವಶದಲ್ಲಿದ್ದ 90 ಎಂ.ಎಲ್.ನ ರಾಜಾವಿಸ್ಕಿಯ 40 ಪೌಚ್ ಗಳಿದ್ದು , ಮದ್ಯದ ಅಂದಾಜು ಬೆಲೆ 1405/- ರೂ ಆಗಿದ್ದು ಆರೋಪಿಯ ವಿರುದ್ದ  ಅಜ್ಜಂಪುರ  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.ಈ ಕಾರ್ಯಾಚರಣೆಯಲ್ಲಿ ಪಿ.ಎಸ್ .ಐ ರಮ್ಯ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಅಪಘಾತ ಪ್ರಕರಣ,

ಸಂಚಾರ ಪೊಲೀಸ್ ಠಾಣೆ.

ದಿನಾಂಕ 05-10-2021 ರಂದು ಕಾರ್ತಿಕ್ ರವರು  ನೀಡಿದ ದೂರಿನ ಸಾರಾಂಶವೇನೆಂದರೆ ದಿನಾಂಕ 05-10-2021 ರಂದು ರಾತ್ರಿ 21-30 ಗಂಟೆ ಸಮಯದಲ್ಲಿ ನನ್ನ ಚಿಕ್ಕಪ್ಪನವರ ಬಾಬ್ತು ಬೈಕ್ ನಂ. ಕೆಎ-18 ಇಹೆಚ್- 2336 ನಲ್ಲಿ ಅಲ್ಲಂಪುರಕ್ಕೆ ಹೋಗಲೆಂದು ನಗರದ ಆರ್.ಜಿ. ರಸ್ತೆಯ ಪಾಲಿಟೆಕ್ನಿಕ್ ಕಾಲೇಜಿನ ಮುಂಭಾಗದ ಟಾರು ರಸ್ತೆಯಲ್ಲಿ ಹೋಗುತ್ತಿರುವಾಗ ರಾಮನಹಳ್ಳಿ ಕಡೆಯಿಂದ ಬಂದ ಕೆಎ-04 ಎಂಡಿ- 5160 ಕಾರಿನ ಚಾಲಕ ಕಾರನ್ನು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ನನ್ನ ಬೈಕಿಗೆ ಡಿಕ್ಕಿ ಹೊಡೆಸಿದ ಪರಿಣಾಮ ನನ್ನ ಬಲಗಾಲಿನ ಮಂಡಿಗೆ ಹಾಗೂ ಬಲಗೈಗೆ ಪೆಟ್ಟಾಗಿರುತ್ತೆ.  ಕಾರಿನ ಚಾಲಕನ ವಿರುದ್ದ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ  ಸಂಚಾರ  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 06-10-2021 07:01 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080