ಅಭಿಪ್ರಾಯ / ಸಲಹೆಗಳು

ಅಕ್ರಮ ಗಾಂಜಾ ಸೇವನೆ ಪ್ರಕರಣಗಳು

ಅಜ್ಜಂಪುರ ಪೊಲೀಸ್ ಠಾಣೆ.

ದಿನಾಂಕ:06/06/2022 ರಂದು ಅಜ್ಜಂಪುರ ಠಾಣಾ ಸರಹದ್ದಿನ ಬುಕ್ಕಾಂಬೂದಿ ಬಸ್ ನಿಲ್ದಾಣದ ಬಳಿ ಅಕ್ರಮವಾಗಿ ಶ್ರೀನಿವಾಸ ಬಿನ್ ತಿಪ್ಪಣ್ಣ ವಾಸ ಬುಕ್ಕಾಂಬುದಿ ಇವನು ಗಾಂಜಾ ಸೇವನೆ ಮಾಡಿ ಅಮಲಿನಲ್ಲಿ ಇರುವಂತೆ ವರ್ತಿಸುತ್ತಿದ್ದ, ಸದರಿ ಅಸಾಮಿಯನ್ನು ವಶಕ್ಕೆ ಪಡೆದು ಸದರಿ ಅಸಾಮಿ ಗಾಂಜಾ ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಅರೋಫಿತನ ವಿರುದ್ದ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಅಜ್ಜಂಪುರ ಠಾಣಾ ಪಿ.ಎಸ್.ಐ. ಖಾದರ್ ಪಾಷ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಅಜ್ಜಂಪುರ ಪೊಲೀಸ್ ಠಾಣೆ.

ದಿನಾಂಕ:06/06/2022 ರಂದು ಅಜ್ಜಂಪುರ ಠಾಣಾ ಸರಹದ್ದಿನ ಬುಕ್ಕಾಂಬೂದಿ ಈದ್ಗಾ  ಬಳಿ ಅಕ್ರಮವಾಗಿ ಜುನೈದ್ ಬಿನ್ ಸಫೀವುಲ್ಲಾ, ವಾಸ ತಾವರೆಕೆರೆ, ಚನ್ನಗಿರಿ ಇವನು ಗಾಂಜಾ ಸೇವನೆ ಮಾಡಿ ಅಮಲಿನಲ್ಲಿ ಇರುವಂತೆ ವರ್ತಿಸುತ್ತಿದ್ದ, ಸದರಿ ಅಸಾಮಿಯನ್ನು ವಶಕ್ಕೆ ಪಡೆದು ಸದರಿ ಅಸಾಮಿ ಗಾಂಜಾ ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಅರೋಫಿತನ ವಿರುದ್ದ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಅಜ್ಜಂಪುರ ಠಾಣಾ ಪಿ.ಎಸ್.ಐ. ಮಂಜುಳಾಬಾಯಿ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಅಜ್ಜಂಪುರ ಪೊಲೀಸ್ ಠಾಣೆ.

ದಿನಾಂಕ:06/06/2022 ರಂದು ಅಜ್ಜಂಪುರ ಠಾಣಾ ಸರಹದ್ದಿನ ಬುಕ್ಕಾಂಬೂದಿ ಈದ್ಗಾ  ಬಳಿ ಅಕ್ರಮವಾಗಿ ವಿನಯ್ ಬಿನ್ ಅರ್ಮುಗಮ್ ವಾಸ ತಾವರೆಕೆರೆ, ಚನ್ನಗಿರಿ ಇವನು ಗಾಂಜಾ ಸೇವನೆ ಮಾಡಿ ಅಮಲಿನಲ್ಲಿ ಇರುವಂತೆ ವರ್ತಿಸುತ್ತಿದ್ದ, ಸದರಿ ಅಸಾಮಿಯನ್ನು ವಶಕ್ಕೆ ಪಡೆದು ಸದರಿ ಅಸಾಮಿ ಗಾಂಜಾ ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಅರೋಫಿತನ ವಿರುದ್ದ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಅಜ್ಜಂಪುರ ಠಾಣಾ ಪಿ.ಎಸ್.ಐ. ಮಂಜುಳಾಬಾಯಿ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಅಜ್ಜಂಪುರ ಪೊಲೀಸ್ ಠಾಣೆ.

ದಿನಾಂಕ:06/06/2022 ರಂದು ಅಜ್ಜಂಪುರ ಠಾಣಾ ಸರಹದ್ದಿನ ಮಾಕನಹಳ್ಳಿ ಗ್ರಾಮದ ಕೆರೆ ಬಳಿ ಅಕ್ರಮವಾಗಿ ಮನೋಜ್ ಬಿನ್ ಧನೇಶ್, ವಾಸ ಎರೆಹೊಸೂರು ಗ್ರಾಮ, ಅಜ್ಜಂಪುರ ಇವನು ಗಾಂಜಾ ಸೇವನೆ ಮಾಡಿ ಅಮಲಿನಲ್ಲಿ ಇರುವಂತೆ ವರ್ತಿಸುತ್ತಿದ್ದ, ಸದರಿ ಅಸಾಮಿಯನ್ನು ವಶಕ್ಕೆ ಪಡೆದು ಸದರಿ ಅಸಾಮಿ ಗಾಂಜಾ ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಅರೋಫಿತನ ವಿರುದ್ದ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಅಜ್ಜಂಪುರ ಠಾಣಾ ಪಿ.ಎಸ್.ಐ. ಮಂಜುಳಾಬಾಯಿ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಬಣಕಲ್ ಪೊಲೀಸ್ ಠಾಣೆ.

ದಿನಾಂಕ:06/06/2022 ರಂದು ಬಣಕಲ್ ಠಾಣಾ ಸರಹದ್ದಿನ ಬಣಕಲ್ ಟೌನ್ ಕೆ.ಎಂ. ರಸ್ತೆಯಲ್ಲಿ ಅಕ್ರಮವಾಗಿ ಮಹಮ್ಮದ್ ಬಷೀರ್ @ ಫವಾಜ್ ಬಿನ್ ಹೆಚ್.ಹಸನ್ ವಾಸ ಕುವೆಂಪು ನಗರ, ಬಣಕಲ್ ಇವನು ಗಾಂಜಾ ಸೇವನೆ ಮಾಡಿ ಅಮಲಿನಲ್ಲಿ ಇರುವಂತೆ ವರ್ತಿಸುತ್ತಿದ್ದ, ಸದರಿ ಅಸಾಮಿಯನ್ನು ವಶಕ್ಕೆ ಪಡೆದು ಸದರಿ ಅಸಾಮಿ ಗಾಂಜಾ ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಅರೋಫಿತನ ವಿರುದ್ದ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಬಣಕಲ್ ಠಾಣಾ ಪಿ.ಎಸ್.ಐ ಶ್ರೀಮತಿ ಗಾಯಿತ್ರಿ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ

ಬಣಕಲ್ ಪೊಲೀಸ್ ಠಾಣೆ.

ದಿನಾಂಕ:06/06/2022 ರಂದು ಬಣಕಲ್ ಠಾಣಾ ಸರಹದ್ದಿನ ಇಂದಿರಾನಗರ, ರಸ್ತೆಯಲ್ಲಿ ಅಕ್ರಮವಾಗಿ ಮಹಮ್ಮದ್ ಸಿರಾಜ್ ಬಿನ್ ಲೇಟ್ ಮಹಮ್ಮದ್ ರಪೀಕ್  ವಾಸ ಇಂದಿರಾ ನಗರ, ಬಣಕಲ್ ಇವನು ಗಾಂಜಾ ಸೇವನೆ ಮಾಡಿ ಅಮಲಿನಲ್ಲಿ ಇರುವಂತೆ ವರ್ತಿಸುತ್ತಿದ್ದ, ಸದರಿ ಅಸಾಮಿಯನ್ನು ವಶಕ್ಕೆ ಪಡೆದು ಸದರಿ ಅಸಾಮಿ ಗಾಂಜಾ ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಅರೋಫಿತನ ವಿರುದ್ದ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಬಣಕಲ್ ಠಾಣಾ ಪಿ.ಎಸ್.ಐ ಶ್ರೀಮತಿ ಗಾಯಿತ್ರಿ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಕೊಲೆ ಪ್ರಕರಣ

ತರೀಕೆರೆ ಪೊಲೀಸ್ ಠಾಣೆ.

ದಿನಾಂಕ ;06/06/2022 ರಂದು ಪಿರ್ಯಾದಿ ಬಿ. ರಮೇಶ್ ಬಾಬು ರವರು ನೀಡಿದ ದೂರಿನಲ್ಲಿ, ಪಿರ್ಯಾದಿ ವಿಐಎಲ್ ಪ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದು,  ದಿನಾಂಕ;06/06/2022 ರಂದು ವಿಐಎಲ್-02 ಜಾಗದಲ್ಲಿ 10 ಎಕರೆ ಜಾಗದಲ್ಲಿ ಪ್ಯಾಕ್ಟರಿ  ಪಾಳು ಬಿದ್ದಿದ ಬಿಲ್ಟಿಂಗ್ ರೂಪಿಂಗ್ ಕೆಲಸ ಮಾಡಿಸುತ್ತಿರುವಾಗ, ಸದರಿ ಪಾಳು ಬಿದ್ದಿರುವ ಜಾಗದ ಕಾಲು ದಾರಿಯಲ್ಲಿ ಒಂದು ಗಂಡಸಿನ ಶವವಿದ್ದು ಸುಮಾರು 30-35 ವರ್ಷದ್ದಾಗಿದ್ದು, ಸದರಿ ಶವದ ಹಣೆಯಿಂದ ರಕ್ತ ಹರಿದು ಹೆಪ್ಪುಗಟ್ಟಿರುತ್ತದೆ. ಶವದ ಹಣೆಯ ಮೇಲೆ ಕಲ್ಲಿನಿಂದ ಎತ್ತಿ ಹಾಕಿರುವ ಗಾಯದ ಗುರುತು ಇದ್ದು, ದಿನಾಂಕ;05-06-2022 ರಂದು ಯಾರೋ ದುಷ್ಕರ್ಮಿಗಳು, ಯಾವುದೋ ಉದ್ದೇಶಕ್ಕಾಗಿ, ಸದರಿ ವ್ಯಕ್ತಿಯ ಹಣೆಗೆ ಕಲ್ಲನ್ನು ಎತ್ತಿ ಹಾಕಿ ಕೊಲೆ ಮಾಡಿ, ಪರಾರಿಯಾಗಿರುವುದು ಕಂಡು ಬಂದಿರುತ್ತದೆ. ಸದರಿ ಮೃತಪಟ್ಟ ಅನಾಮದೇಯ ಗಂಡಸಿನ ವ್ಯಕ್ತಿ ಯಾರೆಂದು, ಆತನ ವಿಳಾಸ ತಿಳಿದಿರುವುದಿಲ್ಲವೆಂದು, ಕೊಲೆ ಮಾಡಿರುವ ದುಷ್ಕರ್ಮಿಗಳನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಲು ನೀಡಿದ ದೂರಿನ ಮೇರೆಗೆ ತರೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ.

ಲಕ್ಕವಳ್ಳಿ ಪೊಲೀಸ್ ಠಾಣೆ.

ದಿನಾಂಕ:06-06-2022 ರಂದು ಲಕ್ಕವಳ್ಳಿ ಪೊಲೀಸ್ ಠಾಣಾ ಸರಹದ್ದಿನ ಹಳೆ ಲಕ್ಕವಳ್ಳಿ ಇಂದಿರಾನಗರ ಗ್ರಾಮದಲ್ಲಿ ನಾಗರಾಜ ಬಿನ್ ರಾಮಪ್ಪ ಈತನು ತಮ್ಮ ಮನೆಯ ಮುಂಬಾಗದ ಅವರಣದಲ್ಲಿರುವ ಗೋಡೋನ್ ಮುಂಭಾದಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದು, ಅರೋಪಿಯನ್ನು ವಶಕ್ಕೆ ಪಡೆದು, ಅರೋಪಿತನ ವಶದಲ್ಲಿ ಇದ್ದ 90 ಎಂ.ಎಲ್. ನ 28 ಟೆಟ್ರಾಪ್ಯಾಕ್ ಮದ್ಯವನ್ನು ಅಂದಾಜು ಬೆಲೆ 983/- ರೂ ಗಳನ್ನು ಅಮಾನತ್ತುಪಡಿಸಿಕೊಂಡಿದ್ದು, ಆರೋಪಿತನ ವಿರುದ್ದ ಲಕ್ಕವಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಲಕ್ಕವಳ್ಳಿ ಠಾಣಾ ಪಿ.ಎಸ್.ಐ. ಶಂಭುಲಿಂಗಯ್ಯ ಎಂ.ಈ. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಮನುಷ್ಯ ಕಾಣೆ ಪ್ರಕರಣ

ಯಗಟಿ ಪೊಲೀಸ್ ಠಾಣೆ.

ದಿನಾಂಕ;07/06/2022 ರಂದು ಪಿರ್ಯಾದಿ ಶ್ರೀ ಆರ್.ಟಿ. ರಾಜಪ್ಪ ಬಿನ್ ತಿಮ್ಮಪ್ಪ, ವಾಸ ರಾಂಪುರ ಯಗಟಿ ವಾಸಿ ಇವರು ನೀಡಿದ ದೂರಿನಲ್ಲಿ ಪಿರ್ಯಾದಿಯ ಮಗಳು ಪ್ರಿಯಾಂಕ ಇವಳು ದಿನಾಂಕ; 06/06/2022 ರಂದು ಮನೆಯಲ್ಲಿ ಇದ್ದವಳು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆಯಿಂದ ಯಾರಿಗೂ ಹೇಳದೆ ಹೋದವಳು, ವಾಪಾಸ್ಸು ಮನೆಗೆ ಬಾರದೇ ಕಾಣೆಯಾಗಿದ್ದು, ಈವರೆಗೆ ಹುಡಕಲಾಗಿ ಪತ್ತೆಯಾಗಿರುವುದಿಲ್ಲ. ಕಾಣೆಯಾಗಿರುವ ಪ್ರಿಯಾಂಕ,  18 ವರ್ಷ,  ಕೋಲುಮುಖ, 5.2 ಅಡಿ ಎತ್ತರ, ಸಾದಾರಣ ಮೈಕಟ್ಟು, ಎಣ್ಣೆಗೆಂಪು  ಮೈ ಬಣ್ಣ,  ಕಪ್ಪು ಬಣ್ಣದ ಟೀ ಶರಟು, ಗುಲಾಬಿ ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಕಾಣೆಯಾಗಿರುವ ತನ್ನ ಮಗಳು ಪ್ರಿಯಾಂಕ ರವರನ್ನು ಪತ್ತೆ ಮಾಡಿ ಕೊಡುವಂತೆ ನೀಡಿದ ದೂರಿನ ಮೇರೆಗೆ ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ

ಇತ್ತೀಚಿನ ನವೀಕರಣ​ : 07-06-2022 06:29 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080