ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ.

ಸಿ.ಇ.ಎನ್. ಪೊಲೀಸ್ ಠಾಣೆ.

ದಿನಾಂಕ 07-11-2021 ರಂದು ಸಖರಾಯಪಟ್ಟಣ ಠಾಣಾ ಸರಹದ್ದಿನ  ಎಸ್.ಬಿದರೆ ಗ್ರಾಮದ ಬಸ್ ನಿಲ್ದಾಣ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದು, ಆರೋಫಿ ಸತೀಶ್ ಬಿ ಎಸ್ ಬಿನ್ ಲೇಟ್ ಸದಾಶಿವ ಗೌಡ ನನ್ನು ವಶಕ್ಕೆ ಪಡೆದು ಆರೋಪಿ ಬಳಿಯಿದ್ದ 90 ಎಂ.ಎಲ್. 136 ರಾಜಾ ವಿಸ್ಕಿಯ ಟೆಟ್ರಾಪ್ಯಾಕ್ ಮದ್ಯವನ್ನು ಮತ್ತು 160 ರೂ ನಗದು ಹಣವನ್ನು ವಶಕ್ಕೆ ಪಡೆದು, ಮದ್ಯದ ಅಂದಾಜು ಬೆಲೆ 4777/-ರೂ ಆಗಿದ್ದು, ಆರೋಪಿ & ಮದ್ಯವನ್ನು ಆರೋಪಿಗೆ ನೀಡಿದ ಮಾಲೀಕರು ಶ್ರೀನಿವಾಸ ವೈನ್ಸ್ ಶಾಪ್ ಇವರ ವಿರುದ್ದ  ಸಿ.ಇ.ಎನ್.  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಸಿ.ಇ.ಎನ್. ಠಾಣಾ ಪಿ.ಎಸ್.ಐ. ಶ್ರೀ ರಫೀಕ್ ಎಂ. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ನಗರ ಪೊಲೀಸ್ ಠಾಣೆ.

ದಿನಾಂಕ 06-11-2021 ರಂದು ನಗರ ಠಾಣಾ ಸರಹದ್ದಿನ ಗವನಹಳ್ಳಿ ಶ್ರೀ ಆಂಜನೇಯ ದೇವಸ್ಥಾನದ  ಮುಂಭಾಗದ  ಸಾರ್ವಜನಿಕ ಸ್ಥಳದಲ್ಲಿ ಪುರéುಷೋತ್ತಮರಾಜು ಬಿನ್ ತಿಮ್ಮರಾಜು  ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದು, ಆರೋಫಿಯನ್ನು  ವಶಕ್ಕೆ ಪಡೆದು ಆರೋಪಿ  ಬಳಿಯಿದ್ದ 90 ಎಂ.ಎಲ್. 15 ಓರಿಜನಲ್ ಚಾಯ್ಸ್ ಡಿಲಕ್ಸ್ ವಿಸ್ಕಿಯ ಟೆಟ್ರಾಪ್ಯಾಕ್ ಮದ್ಯವನ್ನು ಮತ್ತು 180 ರೂ ನಗದು ಹಣವನ್ನು ವಶಕ್ಕೆ ಪಡೆದು, ಮದ್ಯದ ಅಂದಾಜು ಬೆಲೆ 525/-ರೂ  ಆಗಿದ್ದು, ಆರೋಪಿಯ ವಿರುದ್ದ  ನಗರ  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ನಗರ ಠಾಣಾ ಪಿ.ಎಸ್.ಐ. ಶ್ರೀ ಶಂಭುಲಿಂಗಯ್ಯ  ಎಂ.ಈ. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಮನುಷ್ಯ ಕಾಣೆ ಪ್ರಕರಣ

ಸಖರಾಯಪಟ್ಟಣ ಪೊಲೀಸ್ ಠಾಣೆ.

ದಿನಾಂಕ;06-11-2021 ರಂದು  ಶ್ರೀಮತಿ ಮಂಜುಳಾ ಕೋಂ ಮಹೇಂದ್ರ  ವಾಸ ದಾಸರಹಟ್ಟಿ ಕಡೂರು ತಾಲ್ಲೋಕು ರವರು ನೀಡಿದ ದೂರಿನಲ್ಲಿ ತನ್ನ ಹಿರಿಯ ಮಗಳಾದ ಅಪೂರ್ವ ಬಿ.ಕಾಂ. ವಿದ್ಯಾಬ್ಯಾಸ ಮಾಡುತ್ತಿದ್ದು, ದಿನಾಂಕ:04-10-2021 ರಂದು ಬೆಳಿಗ್ಗೆ ಎಂದಿನಂತೆ ಕಾಲೇಜಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದವಳು ಈ ವರೆಗೂ ಮನೆಗೆ ಬಾರದೇ ಇದ್ದು ಎಲ್ಲಾ ಕಡೆ ಹುಡುಕಾಡಿದರೂ ಸಹ ಪತ್ತೆಯಾಗಿಲ್ಲವೆಂದು ಕಾಣೆಯಾಗಿರುವ ತನ್ನ ಮಗಳು ಅಪೂರ್ವ, 18 ವರ್ಷ ಇವಳನ್ನು ಪತ್ತೆ ಮಾಡಿ ಕೊಡಬೇಕಾಗಿ ಕೋರಿ ನೀಡಿದ ದೂರಿನ ಮೇರೆಗೆ ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ

ಇತ್ತೀಚಿನ ನವೀಕರಣ​ : 07-11-2021 06:31 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080