ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಹಾಗೂ ಕೊವಿಡ್-19 ನಿಯಮ ಉಲ್ಲಂಘನೆ ಪ್ರಕರಣ

ಲಕ್ಕವಳ್ಳಿ   ಪೊಲೀಸ್ ಠಾಣೆ.

ದಿನಾಂಕ 07/06/2021 ರಂದು ಲಕ್ಕವಳ್ಳಿ ಠಾಣಾ ಸರಹದ್ದಿನಲ್ಲಿ ಗಸ್ತು ಮಾಡುತ್ತಿರುವಾಗ ಗಾಂಧಿನಗರದ ವಾಸಿಯಾದ ಸುಂದರ್ ರಾಜ್ ಎಂಬುವವರು ತಮ್ಮ ಪೆಟ್ಟಿಗೆ ಅಂಗಡಿ ಮುಂಭಾಗ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾರೆಂದು ಬಂದ ಮಾಹಿತಿ  ಮೇರೆಗೆ ದಾಳಿ ನಡೆಸಿದ್ದು ಆರೋಪಿ ಸುಂದರಾಜ್ನನ್ನು ವಶಕ್ಕೆ ಪಡೆದು ಆತನ  ಬಳಿಯಿದ್ದ  ಪ್ಲಾಸ್ಟಿಕ್ ಚೀಲವನ್ನು ಪರಿಶೀಲಿಸಲಾಗಿ 90 ಎಂ.ಎಲ್,ನ ಓರಿಜಿನಲ್ ಚಾಯ್ಸ್ ಡಿಲೆಕ್ಸ್ ವಿಸ್ಕಿಯ 40 ಟೆಟ್ರಾ ಪೌಚ್ ಗಳಿದ್ದು ,ಮದ್ಯದ ಅಂದಾಜು 1400/- ರೂ ಆಗಿರುತ್ತೆ. ಕೊವಿಡ್-19 ಸಾಂಕ್ರಾಮಿಕ ರೋಗವು ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವು ಹೊರಡಿಸಿರುವ ಆದೇಶಗಳನ್ನು ಉಲ್ಲಂಘಿಸಿ ಯಾವುದೇ ಪರವಾನಗಿಯನ್ನು ಹೊಂದದೆ, ಸಾರ್ವಜನಿಕರನ್ನು ಗುಂಪು ಸೇರಿಸಿಕೊಂಡು ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದ  ಆರೋಪಿತನ ವಿರುದ್ದ ಲಕ್ಕವಳ್ಳಿ  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಿಎಸ್ಐ. ರಘುನಾಥ್  ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಹೆಂಗಸು  ಕಾಣೆ ಪ್ರಕರಣ

ಮಹಿಳಾ ಠಾಣೆ

ದಿನಾಂಕ 08-06-2021 ರಂದು ಪಿರ್ಯಾದುದಾರರಾದ ಶಶಿಕುಮಾರ್ ಬಿನ್ ಲೇಟ್ ರಾಜು ರವರು ಠಾಣೆಗೆ ಹಾಝರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ ದಿನಾಂಕ 07-06-2021 ರಂದು ಪಿರ್ಯಾದುದಾರರ ಮಗಳಾದ ಅನುಷ, 19 ವರ್ಷ ಇವಳು ಅಂಗಡಿಗೆ  ಹೋಗಿ ಬರುತ್ತೇನೆಂದು ಮನೆಯಿಂದ ಹೊರಗೆ ಹೋದವಳು ಮನೆಗೆ ವಾಪಾಸ್ ಬಂದಿರುವುದಿಲ್ಲ. ಸ್ನೇಹಿತರ ಹಾಗೂ ನೆಂಟರಿಷ್ಟರ ಮನೆಗಳಲ್ಲಿ  ಎಲ್ಲಾ ಕಡೆ ಹುಡುಕಾಡಿದರೂ  ಎಲ್ಲಿಯೂ  ಪತ್ತೆಯಾಗಿರುವುದಿಲ್ಲ . ಆದ್ದರಿಂದ ಕಾಣೆಯಾಗಿರುವ ನನ್ನ ಮಗಳಾದ ಅನುಷಾಳನ್ನು ಪತ್ತೆ ಮಾಡಿಕೊಡಬೇಕೆಂದು ನೀಡಿದ ದೂರನ್ನು ಸ್ವೀಕರಿಸಿಕೊಂಡು ಪ್ರಕರಣ ದಾಖಲಿಸಿ ತನಿಖೆ  ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 25-06-2021 06:42 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080