ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ.

ಯಗಟಿ ಪೊಲೀಸ್ ಠಾಣೆ.

ದಿನಾಂಕ:08-12-2021 ರಂದು ಯಗಟಿ ಠಾಣಾ ಸರಹದ್ದಿನ ಬಾಸೂರು  ಗ್ರಾಮದ ವಾಸಿ ಪ್ರವೀಣ ಎಂಬುವರು ಬಾಸೂರು ಗೇಟ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಆರೋಪಿ ಬಳಿಯಿದ್ದ 90 ಎಂ.ಎಲ್. ನ ರಾಜಾವಿಸ್ಕಿಯ 62  ಟೆಟ್ರಾಪ್ಯಾಕ್ ಮದ್ಯವನ್ನು  ವಶಕ್ಕೆ ಪಡೆದು, ಮದ್ಯದ ಅಂದಾಜು ಬೆಲೆ 2718/-ರೂ ಆಗಿದ್ದು, ಆರೋಪಿ ವಿರುದ್ದ ಯಗಟಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಯಗಟಿ ಠಾಣಾ ಪಿ.ಎಸ್.ಐ.ಶಶಿಕುಮಾರ್.ವೈ.ಎಸ್.ಹಾಗೂ ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಮನುಷ್ಯ ಕಾಣೆ  ಪ್ರಕರಣ.

ಮೂಡಿಗೆರೆ  ಪೊಲೀಸ್ ಠಾಣೆ.

ದಿನಾಂಕ:06-12-2021 ರಂದು ಮೂಡಿಗೆರೆ ಪೊಲೀಸ್ ಠಾಣಾ ಸರಹದ್ದಿನ ದೊಡ್ಡಿಬೀದಿ  ಗ್ರಾಮದ ವಾಸಿ ಶ್ರೀಮತಿ ಸವಿತಾ  ಇವರು ನೀಡಿದ ದೂರಿನಲ್ಲಿ ದಿನಾಂಕ:07-12-2021 ರಂದು ಪಿರ್ಯಾದಿಯವರ ಗಂಡ ವಿಕ್ರಮ್ರವರು ಬೆಳಿಗ್ಗೆ 10-00 ಗಂಟೆ ಸಮಯದಲ್ಲಿ ಕಲ್ಲು ಲೋಡ್ ಮಾಡುವ ಕೆಲಸಕ್ಕೆ ಮಗಳಾದ ಖುಷಿ, 5 ವರ್ಷ ಇವಳನ್ನು ಕರೆದುಕೊಂಡು ಹೋಗಿದ್ದು  ಇದುವರೆವಿಗೂ ಮನೆಗೆ ಬಂದಿರುವುದಿಲ್ಲ. ಇವರನ್ನು ಎಲ್ಲಾ ಕಡೆ ಹುಡುಕಾಡಿದರೂ ಸಹ ಈವರೆಗೆ ಸಿಕ್ಕಿರುವುದಿಲ್ಲವೆಂದು ಕಾಣೆಯಾಗಿರುವ ನನ್ನ ಗಂಡ ವಿಕ್ರಮ್, 30 ವರ್ಷ, ಸಾದಾರಣ ಮೈ ಕಟ್ಟು, ಎಣ್ಣೆಗೆಂಪು ಮೈ ಬಣ್ಣ, 5.5 ಅಡಿ ಎತ್ತರ ಹಾಗೂ ಮಗಳಾದ ಖುಷಿ , 5 ವರ್ಷ, 2.5 ಅಡಿ ಎತ್ತರ ಇರುತ್ತಾಳೆ. ಕನ್ನಡ & ತೆಲುಗು ಭಾಷೆ ಮಾತಾನಾಡುತ್ತಾರೆ.ಕಾಣೆಯಾಗಿರುವ ವಿಕ್ರಮ್ ಹಾಗೂ ಖುಷಿರವರನ್ನು ಪತ್ತೆ ಮಾಡಿಕೊಡುವಂತೆ ನೀಡಿದ ದೂರಿನ ಮೇರೆಗೆ ಮೂಡಿಗೆರೆ  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ.

ಲಕ್ಕವಳ್ಳಿ ಪೊಲೀಸ್ ಠಾಣೆ.

ದಿನಾಂಕ:07-12-2021 ರಂದು ಲಕ್ಕವಳ್ಳಿ ಠಾಣಾ ಸರಹದ್ದಿನ ಗೋಪಾಲಕಾಲೋನಿಯ ವಾಸಿಯಾದ   ರಾಮಚಂದ್ರಪ್ಪ ಎಂಬುವರು ತಮ್ಮ ಮನೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಆರೋಪಿ ಬಳಿಯಿದ್ದ 90 ಎಂ.ಎಲ್. ನ ಓರಿಜಿನಲ್ ಚಾಯ್ಸ್ ಡಿಲೆಕ್ಸ್ ವಿಸ್ಕಿಯ 30 ಟೆಟ್ರಾಪ್ಯಾಕ್ ಮದ್ಯವನ್ನು  ವಶಕ್ಕೆ ಪಡೆದು, ಮದ್ಯದ ಅಂದಾಜು ಬೆಲೆ 1050 /-ರೂ ಆಗಿದ್ದು, ಆರೋಪಿ ವಿರುದ್ದ ಲಕ್ಕವಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಲಕ್ಕವಳ್ಳಿ ಠಾಣಾ ಪಿ.ಎಸ್.ಐ.ಮೇಘ.ಟಿ.ಎನ್. ಹಾಗೂ ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಲಕ್ಕವಳ್ಳಿ ಪೊಲೀಸ್ ಠಾಣೆ.

ದಿನಾಂಕ:07-12-2021 ರಂದು ಲಕ್ಕವಳ್ಳಿ ಠಾಣಾ ಸರಹದ್ದಿನ ಗೋಪಾಲಭೂಸೇನಹಳ್ಳಿ ವಾಸಿಯಾದ   ಮಂಜಪ್ಪ ಎಂಬುವರು ತಮ್ಮ ಮನೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದು, ನಮ್ಮಗಳನ್ನು ನೋಡಿ ಆರೋಪಿಯು ಓಡಿಹೋಗಿದ್ದು ಆತನು ಬಿಟ್ಟುಹೋಗಿದ್ದ  90 ಎಂ.ಎಲ್. ನ ಓರಿಜಿನಲ್ ಚಾಯ್ಸ್ ಡಿಲೆಕ್ಸ್ ವಿಸ್ಕಿಯ 34 ಟೆಟ್ರಾಪ್ಯಾಕ್ ಮದ್ಯವನ್ನು  ವಶಕ್ಕೆ ಪಡೆದು, ಮದ್ಯದ ಅಂದಾಜು ಬೆಲೆ 1190/-ರೂ ಆಗಿದ್ದು, ಆರೋಪಿ ವಿರುದ್ದ ಲಕ್ಕವಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಲಕ್ಕವಳ್ಳಿ ಠಾಣಾ ಪಿ.ಎಸ್.ಐ.ಮೇಘ.ಟಿ.ಎನ್. ಹಾಗೂ ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 08-12-2021 07:32 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080