ಅಭಿಪ್ರಾಯ / ಸಲಹೆಗಳು

ಮರಣಾಂತಿಕ ರಸ್ತೆ ಅಪಘಾತ ಪ್ರಕರಣ

ಬೀರೂರು ಪೊಲೀಸ್ ಠಾಣೆ.

ದಿನಾಂಕ:10/02/2022 ರಂದು ಬೀರೂರು ಠಾಣಾ ಸರಹದ್ದಿನ ಗೀತಾ ರವರು ನೀಡಿದ ದೂರಿನಲ್ಲಿ ದಿನಾಂಕ;09/02/2022  ರಂದು ಪಿರ್ಯಾದಿ ಗಂಡ ಲಿಂಗರಾಜು ರವರು ಅಂತರಘಟ್ಟಮ್ಮ ಜಾತ್ರೆಗೆಂದು ಜೊಡಿತಿಮ್ಮಾಫುರ ಗ್ರಾಮಕ್ಕೆ ಹೋಗಿದ್ದು ಜಾತ್ರೆ ಮುಗಿಸಿಕೊಂಡು ರಾತ್ರಿ ಮನೆಗೆ ವಾಪಾಸ್ಸು ಬರುತ್ತಿರುವಾಗ ಬೀರೂರು ಸಮೀಪ ವಿನುತಾ ಇಂಡಸ್ಟ್ರಿಸ್ ಬಳಿ ಯಾವುದೋ ಅಪರಿಚಿತ ವಾಹನ ಪಿರ್ಯಾದಿಯ ಗಂಡ ಲಿಂಗರಾಜುವಿಗೆ ಅಪಘಾತಪಡಿಸಿದ್ದು ಪಿರ್ಯಾದಿ ಗಂಡ ಲಿಂಗರಾಜು ಪೆಟ್ಟಾಗಿದ್ದು ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕರೆದುಕೊಂಡು  ಹೋಗುವಾಗ ಮಾರ್ಗ ಮದ್ಯದಲ್ಲಿ  ಮೃತಪಟ್ಟಿದ್ದು  ಮುಂದಿನ ಕ್ರಮದ ಬಗ್ಗೆ ನೀಡಿದ ದೂರಿನ ಮೇರೆಗೆ ಬೀರೂರು  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಗ್ರಾಮಾಂತರ ಪೊಲೀಸ್ ಠಾಣೆ.

ದಿನಾಂಕ:10/02/2022 ರಂದು ಪ್ರಸನ್ನ ಬಿನ್ ಚಿನ್ನಸ್ವಾಮಿ ರವರು ನೀಡಿದ ದೂರಿನಲ್ಲಿ ದಿನಾಂಕ;10/02/2022  ರಂದು ಪಿರ್ಯಾದಿ ತಂದೆ ಚಿನ್ನಸ್ವಾಮಿ ರವರು ಬೆಳಿಗ್ಗೆ ಫೈನಾನ್ಸ್ ಕಲೆಕ್ಷನ್ ಗಾಗಿ ತಮ್ಮ ಬಾಬ್ತು ಕೆಎ-18-ಇಇ-6946 ನಂಬರಿನ ಬೈಕಿನಲ್ಲಿ ಹೋಗಿದ್ದು ವಾಪಾಸ್ಸು ಚಿಕ್ಕಮಗಳೂರಿಗೆ ಬರುತ್ತಿರುವಾಗ  ಸೆರಾಯ್ ಹೋಟೇಲ್  ಮುಂಭಾಗ ಪಿರ್ಯಾದಿ ತಂದೆ ಚಿನ್ನಸ್ವಾಮಿ ರವರು ಬೈಕ್ ನ್ನು ಅತೀವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗುತ್ತಿರುವಾಗ ಬೈಕ್ ನಿಯಂತ್ರಣ ತಪ್ಪಿ ರಸ್ತೆಯ ಮೇಲೆ ಬಿದ್ದು ಪಿರ್ಯಾದಿಗೆ ತಂದೆಯವರಿಗೆ ಪೆಟ್ಟಾಗಿದ್ದು ತೀವ್ರತರವಾದ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದು  ಮುಂದಿನ ಕ್ರಮದ ಬಗ್ಗೆ ನೀಡಿದ ದೂರಿನ ಮೇರೆಗೆ ಗ್ರಾಮಾಂತರ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

ಕೊಪ್ಪ ಪೊಲೀಸ್ ಠಾಣೆ.

ದಿನಾಂಕ:09-02-2022 ರಂದು ಕೊಪ್ಪ ಠಾಣಾ ಸರಹದ್ದಿನ ಹೆಚ್. ಹೊಸೂರು ಗ್ರಾಮ ವಾಸಿ ರಾಘು ಬಿನ್ ಲೇಟ್ ಪಿಜಿನ  ಎಂಬುವನು ಅಕ್ರಮವಾಗಿ ಮದ್ಯ ಮಾರಾಟ ಮಾಡಲು ಮದ್ಯವನ್ನು ತೆಗೆದುಕೊಂಡು ಹೋಗುತ್ತಿದ್ದು ಅರೋಪಿಯನ್ನು ವಶಕ್ಕೆ ಪಡೆದು ಆರೋಪಿ ವಶದಲ್ಲಿ 90 ಎಂ.ಎಲ್.ನ 40 ಟೆಟ್ರಾಪ್ಯಾಕ್ ಮದ್ಯ ಅಂದಾಜು ಬೆಲೆ 1405/- ರೂ ಅಗಿದ್ದು ಮಧ್ಯವನ್ನು ಅಮಾನತ್ತುಪಡಿಸಿಕೊಂಡು ಬಂದು  ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ. ಶ್ರೀನಾಥ ರೆಡ್ಡಿ  ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 10-02-2022 08:02 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080