ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ.

ಕಳಸ  ಪೊಲೀಸ್ ಠಾಣೆ.

ದಿನಾಂಕ:09-12-2021 ರಂದು ಕಳಸ ಠಾಣಾ ಸರಹದ್ದಿನ  ಬೂದಿಗುಂಡಿ ಗ್ರಾಮದ ಸತೀಶ ಎಂಬುವವರು ತಮ್ಮಅಂಗಡಿಯ ಹಿಂಭಾಗದಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಆರೋಪಿ ಬಳಿಯಿದ್ದ 90 ಎಂ.ಎಲ್. ನ ಮೈಸೂರು ಲ್ಯಾನ್ಸ್ ರ್ ವಿಸ್ಕಿಯ 43 ಟೆಟ್ರಾಪ್ಯಾಕ್  ಹಾಗೂ 3 ಯು.ಬಿ ಎಕ್ಸ್ಫರ್ಟ್ ಸ್ಟ್ರಾಂಗ್ ಬೀರ್ ಇವುಗಳನ್ನು ವಶಕ್ಕೆ ಪಡೆದು, ಮದ್ಯದ ಅಂದಾಜು ಬೆಲೆ 2095/-ರೂ ಆಗಿದ್ದು, ಆರೋಪಿ ವಿರುದ್ದ ಕಳಸ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಕಳಸ ಠಾಣಾ ಪಿ.ಎಸ್.ಐ. ಹರ್ಷವರ್ಧನ ಹಾಗೂ ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಮನುಷ್ಯ ಕಾಣೆ  ಪ್ರಕರಣ.

ಶೃಂಗೇರಿ  ಪೊಲೀಸ್ ಠಾಣೆ.

ದಿನಾಂಕ:09-12-2021 ರಂದು ಶೃಂಗೇರಿ ಪೊಲೀಸ್ ಠಾಣಾ ಸರಹದ್ದಿನ ಶೃಂಗೇರಿ ಪಟ್ಟಣದ ವಾಸಿ  ಜಯರಾಮ್ ಬಿನ್ ಲೇಟ್ ಈಶ್ವರಪ್ಪ ಇವರು ನೀಡಿದ ದೂರಿನಲ್ಲಿ ದಿನಾಂಕ:09-12-2021 ರಂದು ಬೆಳಿಗ್ಗೆ 09-15 ಗಂಟೆ ಸಮಯದಲ್ಲಿ ಪಿರ್ಯಾದಿಯವರ ಮಗಳಾದ ಭಾವನಾ , 20 ವರ್ಷ, ಈಕೆಯು ಕಾಲೇಜಿಗೆ ಹೋದವಳು ಸಂಜೆಯಾದರೂ ಮನೆಗೆ ವಾಪಾಸ್ ಬಂದಿರುವುದಿಲ್ಲ.  ಎಲ್ಲಾ ಕಡೆ ಹುಡುಕಾಡಿದರೂ ಸಹ ಸಿಕ್ಕಿರುವುದಿಲ್ಲವೆಂದು ಕಾಣೆಯಾಗಿರುವ ನನ್ನ ಮಗಳಾದ ಭಾವನಾ, 20 ವರ್ಷ,  ದೃಢಕಾಯ ಶರೀರ ಗೋಧಿ ಮೈ ಬಣ್ಣ, ಕನ್ನಡ ಹಾಗೂ ಇಂಗ್ಲೀಷ್ ಮಾತಾನಾಡುತ್ತಾಳೆ. .ಕಾಣೆಯಾಗಿರುವ ಭಾವನಾಳನ್ನು ಪತ್ತೆ ಮಾಡಿಕೊಡುವಂತೆ ನೀಡಿದ ದೂರಿನ ಮೇರೆಗೆ ಶೃಂಗೇರಿ  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

 

 

 

ಇತ್ತೀಚಿನ ನವೀಕರಣ​ : 10-12-2021 06:14 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080