ಅಭಿಪ್ರಾಯ / ಸಲಹೆಗಳು

ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪ್ರಕರಣ

ಕಡೂರು ಪೊಲೀಸ್ ಠಾಣೆ.

ದಿನಾಂಕ 10/10/2021 ರಂದು ಪಿರ್ಯಾದಿ ಕಡೂರು ಠಾಣಾ ಹೆಚ್.ಸಿ. 118 ಶ್ರೀ ಗುರುಮೂರ್ತಿ ರವರು ನೀಡಿದ ದೂರಿನಲ್ಲಿ  ರಾತ್ರಿ 11-15 ಗಂಟೆ ಸಮಯದಲ್ಲಿ  ಕಡೂರು ಪಟ್ಟಣದ ಕದಂಬ ಸರ್ಕಲ್ ಬಳಿ ವೆಂಕಟೇಶ್ವರ ಟಾಕೀಸ್ ರಸ್ತೆಯಲ್ಲಿ ವೆಂಕಟೇಶ @ ಕದಂಬ ವೆಂಕಟೇಶ ಎಂಬುವರು ಸಾರ್ವಜನಿಕರಿಗೆ ತೊಂದರೆ ಅಗುವಂತೆ ತಮ್ಮ ಕಾರನ್ನು ರಸ್ತೆಗೆ ಅಡ್ಡವಾಗಿ ನಿಲ್ಲಿಸಿಕೊಂಡು ಸಾರ್ವಜನಿಕರಿಗೆ ಅವಾಚ್ಯವಾಗಿ ಬೈಯುತ್ತಿದ್ದು ಈ ಬಗ್ಗೆ ದೂರಿನ ಮೇರೆಗೆ  ಪಿರ್ಯಾದಿ ಮತ್ತು ಸಿಬ್ಬಂದಿಯವರು ಸ್ಥಳಕ್ಕೆ ಭೇಟಿ ನೀಡಿದ್ದು ರಸ್ತೆಯಿಂದ ವಾಹನವನ್ನು ತೆರೆವು ಮಾಡುತ್ತಿರುವಾಗ  ಅರೋಪಿ ಪಾನಮತ್ತನಾಗಿದ್ದು ಪಿರ್ಯಾದಿಗೆ ಅವಾಚ್ಯ ಶಬ್ದಗಳಿಂದ ಬೈದು ನಿಮ್ಮನ್ನು ಸುಟ್ಟು ಹಾಕುತ್ತೇನೆಂದು ಬೆದರಿಕೆ ಹಾಕಿ, ಎದೆಗೆ ಕೈ ಹಾಕಿ ತಳ್ಳಿದ್ದು, ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿರುತ್ತಾರೆಂದು ಅರೋಪಿ ವಿರುದ್ದ ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಕಡೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

ಕಳಸ ಪೊಲೀಸ್ ಠಾಣೆ.

ದಿನಾಂಕ 10/10/2021 ರಂದು ಕಳಸ ಠಾಣಾ ಸರಹದ್ದಿನ ಹೆಮ್ಮಕ್ಕಿ ಗ್ರಾಮದಲ್ಲಿ ರತ್ನಾಕರ ಬಿನ್ ಲೇಟ್ ಗೋಪಾಲಗೌಡ ಎಂಬುವರು ತಮ್ಮ ಮನೆಯಪಕ್ಕದ ಶೆಡ್ಡ್ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು ,  ಆರೋಪಿಯನ್ನು ವಶಕ್ಕೆ ಪಡೆದು ಆರೋಪಿಯು ಅಕ್ರಮವಾಗಿ ಹೊಂದಿದ್ದ ಸುಮಾರು 2334/- ರೂ ಬೆಲೆಯ ಮದ್ಯದ ಬಾಟಲಿಗಳನ್ನು, ಅಮಾನತ್ತುಪಡಿಸಿಕೊಂಡು ಬಂದು ಆರೋಫಿ ವಿರುದ್ದ ಕಳಸ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ. ಹರ್ಷವರ್ಧನ್  ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 11-10-2021 07:27 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080