ಅಭಿಪ್ರಾಯ / ಸಲಹೆಗಳು

ಮರಣಾಂತಿಕ ರಸ್ತೆ ಅಪಘಾತ ಪ್ರಕರಣ

ಅಜ್ಜಂಪುರ ಪೊಲೀಸ್ ಠಾಣೆ.

ದಿನಾಂಕ;13/06/2022 ರಂದು 09-10 ಗಂಟೆ ಸಮಯದಲ್ಲಿ ಪಿರ್ಯಾದಿ ಮಲ್ಲಿಕಾರ್ಜುನಯ್ಯ ಬಿನ್ ಪರಮೇಶ್ವರಯ್ಯ ವಾಸ ಅತ್ತಿಮಗ್ಗೆ ಟೌನ್ ವಾಸಿ ಇವರು ನೀಡಿದ ದೂರಿನಲ್ಲಿ ದಿನಾಂಕ;12/06/2022 ರಂದು ಪಿರ್ಯಾದಿ ಚಿಕ್ಕಮ್ಮ ರುದ್ರಮ್ಮ ಮತ್ತು ಅಳಿಯ ಚಂದ್ರಯ್ಯ ಇವರು ಕೆಎ-18-ಇಎ-0653 ಮಹೇಂದ್ರ ಮೋಟಾರ್ ಸೈಕಲಿನಲ್ಲಿ ಅಲಘಟ್ಟ ಗ್ರಾಮಕ್ಕೆ ಹೋಗುತ್ತಿರುವಾಗ ಕಾಟಿಗನೆರೆ- ತಮ್ಮಟದಹಳ್ಳಿ ಮದ್ಯೆ ಹೋಗುತ್ತಿದ್ದು, ಬೈಕಿನ ಹಿಂದೆ ಕುಳಿತಿದ್ದ ರುದ್ರಮ್ಮ ಇವರ ಸೀರೆಯ ಸೆರಗು ಬೈಕಿನ ಚಕ್ರಕ್ಕೆ ಸಿಕ್ಕಿಕೊಂಡು ಪರ್ಸ್ ಕೂಡ ಕೆಳಗೆ ಬಿದಿದ್ದು ಅದನ್ನು ತೆಗೆದುಕೊಳ್ಳಲು ರುದ್ರಮ್ಮ ಬಗಿದ್ದಾಗ ಜಾರಿ ಬಿದ್ದು, ತಲೆಗೆ, ಕೈ ಗೂ ಬಲವಾದ ಪೆಟ್ಟು ಬಿದ್ದು, ಚಿಕಿತ್ಸೆಗೆ ಅಸ್ಪತ್ರೆಗೆ ಸೇರಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಕರೆದುಕೊಂಡು ಹೋಗುತ್ತಿರುವಾಗ ಮಾರ್ಗ ಮದ್ಯದಲ್ಲಿ ಮೃತಪಟ್ಟಿದ್ದು, ಮುಂದಿನ ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ.

ಮನುಷ್ಯ ಕಾಣೆ ಪ್ರಕರಣ

ಲಿಂಗದಹಳ್ಳಿ ಪೊಲೀಸ್ ಠಾಣೆ.

ದಿನಾಂಕ;12/06/2022 ರಂದು ರಾತ್ರಿ ಪಿರ್ಯಾದಿ ಶ್ರೀಮತಿ ಗಂಗೀಬಾಯಿ ಕೊಂ ಲೇಟ್ ಮಂಜಾನಾಯ್ಕ ಉಡೇವಾ ಗ್ರಾಮ ವಾಸಿ ಇವರು ನೀಡಿದ ದೂರಿನಲ್ಲಿ ಪಿರ್ಯಾದಿಯ ಮಗಳು ದೇವಿಕಾ  ಇವಳು  ದಿನಾಂಕ; 11/06/2022 ರಂದು ಮನೆಯಲ್ಲಿ ಇದ್ದವಳು, ನಂತರ ಮನೆಯಿಂದ ಹೋದವಳು ವಾಪಾಸ್ಸು ಮನೆಗೆ ಬಾರದೆ ಕಾಣೆಯಾಗಿದ್ದು, ಈವರೆಗೆ ಹುಡಕಲಾಗಿ ಪತ್ತೆಯಾಗಿರುವುದಿಲ್ಲ. ಕಾಣೆಯಾಗಿರುವ ದೇವಿಕಾ. 19 ವರ್ಷ, ಇವಳನ್ನು ಪತ್ತೆ ಮಾಡಿ ಕೊಡುವಂತೆ ನೀಡಿದ ದೂರಿನ ಮೇರೆಗೆ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ.

ಲಕ್ಕವಳ್ಳಿ ಪೊಲೀಸ್ ಠಾಣೆ.

ದಿನಾಂಕ:12-06-2022 ರಂದು ಲಕ್ಕವಳ್ಳಿ ಪೊಲೀಸ್ ಠಾಣಾ ಸರಹದ್ದಿನ ಬರ್ಗೇನಹಳ್ಳಿ  ಗ್ರಾಮದಲ್ಲಿ ಕೃಷ್ಣಮೂರ್ತಿ ಬಿನ್ ಲೇಟ್ ಗುರುಸಿದ್ದಪ್ಪ ರವರ ತಮ್ಮ ಮನೆಯ ಪಕ್ಕದಲ್ಲಿರುವ ಚಿಲ್ಲರೆ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದು, ಮತ್ತು ಸಾರ್ವಜನಿಕರಿಗೆ ಮದ್ಯವನ್ನು ಕುಡಿಯಲು ಅವಕಾಶ ಮಾಡಿಕೊಟ್ಟಿದ್ದು, ಅರೋಪಿಯನ್ನು ವಶಕ್ಕೆ ಪಡೆದು, ಅರೋಪಿತನ ವಶದಲ್ಲಿ ಇದ್ದ 90 ಎಂ.ಎಲ್. ನ 03 ಟೆಟ್ರಾಪ್ಯಾಕ್ ಮದ್ಯವನ್ನು ಅಂದಾಜು ಬೆಲೆ 105/- ರೂ ಗಳನ್ನು ಮತ್ತು ಸಾರ್ವಜನಿಕರು ಕುಡಿದು ಬಿಸಾಡಿದ ಮದ್ಯದ ಖಾಲಿ ಪ್ಯಾಕ್ ಗಳನ್ನು ಅಮಾನತ್ತುಪಡಿಸಿಕೊಂಡಿದ್ದು, ಆರೋಪಿತನ ವಿರುದ್ದ ಲಕ್ಕವಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಲಕ್ಕವಳ್ಳಿ ಠಾಣಾ ಪಿ.ಎಸ್.ಐ. ಮಂಜುನಾಥ. ಹೆಚ್.  ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 13-06-2022 06:15 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080