ಅಭಿಪ್ರಾಯ / ಸಲಹೆಗಳು

ಮನುಷ್ಯ ಕಾಣೆ ಪ್ರಕರಣ.

ಮಹಿಳಾ  ಪೊಲೀಸ್ ಠಾಣೆ.

ದಿನಾಂಕ:-15-09-2021 ರಂದು ಕಲ್ಲುದೊಡ್ಡಿ ಶಾಂತಿನಗರ ವಾಸಿಯಾದ ಫಯಾಜ್ ಬಿನ್ ಖಾನಾಸಾಬ್ರವರು ನೀಡಿದ ದೂರಿನ ಸಾರಾಂಶವೇನೆಂದರೆ, ನನ್ನ ಹೆಂಡತಿ ಶಾಹಿನಾ, 48 ವರ್ಷ ಈಕೆಯು ಮಾನಸಿಕ ಅಸ್ವಸ್ಥಳಾಗಿದ್ದು, ದಿನಾಂಕ 14-09-2021 ರಂದು ಬೆಳಿಗ್ಗೆ ಸುಮಾರು 06-00 ಗಂಟೆ ಸಮಯದಲ್ಲಿ ಯಾರಿಗೂ ತಿಳಿಸದೆ ಎಲ್ಲಿಗೋ ಹೋಗಿರುತ್ತಾಳೆ. ಸಂಬಂಧಿಕರ, ಪರಿಚಯಸ್ಥರ ಮನೆಗಳಲ್ಲಿ ಹುಡುಕಿದರೂ ಪತ್ತೆಯಾಗಿರುವುದಿಲ್ಲ. ಆದ್ದರಿಂದ ನನ್ನ ಹೆಂಡತಿ ಶಾಹಿನಾರವರನ್ನು  ಪತ್ತೆ ಮಾಡಿಕೊಡುವಂತೆ ನೀಡಿದ ದೂರಿನನ್ವಯ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಮನುಷ್ಯ ಕಾಣೆ ಪ್ರಕರಣ.

ಗ್ರಾಮಾಂತರ  ಪೊಲೀಸ್ ಠಾಣೆ.

ದಿನಾಂಕ:-14-09-2021 ರಂದು ಇಂದಾವರ ಗ್ರಾಮ ವಾಸಿಯಾದ ಈರಾಚಾರಿ ಬಿನ್ ಲೇಟ್ ಪುಟ್ಟಾಚಾರ್ ರವರು ನೀಡಿದ ದೂರಿನ ಸಾರಾಂಶವೇನೆಂದರೆ, ನನ್ನ ಮಗಳಾದ ಕು// ಗೌತಮಿ, 26 ವರ್ಷ ಈಕೆಯು ಚಿಕ್ಕಮಗಳೂರು ನಗರದ ಹೊಸಮನೆ ಬಡಾವಣೆಯಲ್ಲಿರುವ ಧರ್ಮಸ್ಥಳ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು , ದಿನಾಂಕ 13-09-2021 ರಂದು ಬೆಳಗ್ಗೆ ಕೆಲಸಕ್ಕೆ ಹೋಗುವುದಾಗಿ ಹೇಳಿ ಹೋದವಳು ವಾಪಾಸ್ ಮನೆಗೆ ಬಂದಿರುವುದಿಲ್ಲ. ಸಂಬಂಧಿಕರ ಮನೆಗಳಲ್ಲಿ ಹಾಗೂ ಸ್ನೇಹಿತರುಗಳಲ್ಲಿ ವಿಚಾರ ಮಾಡಲಾಗಿ ಎಲ್ಲಿಯೂ ಪತ್ತೆಯಾಗಿರುವುದಿಲ್ಲ. ಆದ್ದರಿಂದ ನನ್ನ ಮಗಳನ್ನು  ಪತ್ತೆ ಮಾಡಿಕೊಡುವಂತೆ ನೀಡಿದ ದೂರಿನನ್ವಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಅಕ್ರಮ ಮದ್ಯ ಸಾಗಾಟ ಪ್ರಕರಣ.

ಮೂಡಿಗೆರೆ  ಪೊಲೀಸ್ ಠಾಣೆ,

ದಿನಾಂಕ 14-09-2021 ರಂದು ಸಂಜೆ 16-00 ಗಂಟೆ ಸಮಯದಲ್ಲಿ ಮೂಡಿಗೆರೆ ಪಟ್ಟಣದ ಎಪಿಎಂಸಿ ಮಾರ್ಕೆಟ್ ಬಳಿ ಒಂದು ಮರದ ಕೆಳಗೆ ಒಂದು ಸ್ಕೂಟಿಯನ್ನು ಮರೆಮಾಚಿ ನಿಲ್ಲಿಸಿದ್ದು ಸ್ಕೂಟಿಯನ್ನು ಪರಿಶೀಲಿಸಲಾಗಿ ಮದ್ಯದ ಪೌಚ್ ಗಳಿದ್ದು , ವಿಚಾರ ಮಾಡಲಾಗಿ ಬೆಟ್ಟಗೆರೆ ಸುಂದ್ರೇಶ್ ರವರು ಸ್ಕೂಟಿಯನ್ನು ಕೊಟ್ಟು ಮೂಡಿಗೆರೆಯಿಂದ ಸಾರಾಯಿ ತೆಗೆದುಕೊಂಡು ಬಾ ಎಂದು ತಿಳಿಸಿರುತ್ತಾರೆಂದು ನವೀನ ಬಿನ್ ಲೇಟ್ ಸಂಜೀವ, ಬೆಟ್ಟಗೆರೆ ಗ್ರಾಮ ವಾಸಿರವರು ತಿಳಿಸಿದ್ದು ,ಸ್ಕೂಟಿ ಹಾಗೂ ಮದ್ಯವನ್ನು ಅಮಾನತ್ತುಪಡಿಸಿಕೊಂಡು ಸುಂದ್ರೇಶ ಹಾಗೂ ನವೀನ ರವರ ವಿರುದ್ದ ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ  ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಎಸ್.ಐ.ರವಿ. ಜಿ.ಎ. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ.

ಪಂಚನಹಳ್ಳಿ  ಪೊಲೀಸ್ ಠಾಣೆ,

ದಿನಾಂಕ 14-09-2021 ರಂದು 16-15  ಗಂಟೆ ಸಮಯದಲ್ಲಿ ಚೌಡಿಪಾಳ್ಯತಾಂಡ್ಯ ಹಾಗೂ ಚೌಡಿಪಾಳ್ಯ ಗ್ರಾಮಗಳ ಮದ್ಯೆ ರಸ್ತೆಯ ಬದಿಯಲ್ಲಿರುವ ಶ್ರೀ .ಮಲಿಯಮ್ಮ ದೇವಾಲಯಕ್ಕೆ ಸೇರಿದ ಜಮೀನಿಗೆ ಹೋಗುವ ಹಾದಿಯಲ್ಲಿ ಇರುವ ಸಿಮೆಂಟ್ ಕಟ್ಟೆಯ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದ  ಪುಟ್ಟಪ್ಪ ಬಿನ್ ಚೌಡಯ್ಯ, ಚೌಡಿಪಾಳ್ಯ ಗ್ರಾಮ ವಾಸಿ ಈತನನ್ನು ವಶಕ್ಕೆ ಪಡೆದು ಈತನ ಬಳಿಯಿದ್ದ 90 ಎಂ.ಎಲ್. ನ 42 ರಾಜಾವಿಸ್ಕಿಯ ಪೌಚ್ ಗಳನ್ನು ಅಮಾನತ್ತುಪಡಿಸಿಕೊಂಡಿರುತ್ತೆ. ಮದ್ಯದ ಅಂದಾಜು ಬೆಲೆ 1475/- ರೂ ಗಳಾಗಿರುತ್ತೆ. ಪುಟ್ಟಪ್ಪರವರ ವಿರುದ್ದ ಪಂಚನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ  ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಎಸ್.ಐ. ಶ್ರೀಮತಿ .ಶೋಭಾ.ಕೆ. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 15-09-2021 05:58 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080