ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ   ಪ್ರಕರಣ.

ತರೀಕೆರೆ  ಪೊಲೀಸ್ ಠಾಣೆ,

ದಿನಾಂಕ 16-09-2021 ರಂದು ಬೆಳಗ್ಗೆ 11-15 ಗಂಟೆ ಸಮಯದಲ್ಲಿ ತರೀಕೆರೆ ಪಟ್ಟಣದ ಕೋಡಿಕ್ಯಾಂಪ್ ವೆಂಕಟೇಶ್ವರ ಹೋಟೆಲ್ ಹತ್ತಿರ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದ ಧರ್ಮಲಿಂಗಂ ಬಿನ್ ಅಣ್ಣಾಮಲೈ , ಕೋಡಿಕ್ಯಾಂಪ್ ವಾಸಿ ಈತನನ್ನು ವಶಕ್ಕೆ ಪಡೆದು ಆತನ ಬಳಿಯಿದ್ದ ಮದ್ಯವನ್ನು ಅಮಾನತ್ತುಪಡಿಸಿಕೊಂಡು ಧರ್ಮಲಿಂಗಂರವರ ವಿರುದ್ದ ತರೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಎಸ್.ಐ. ಕೃಷ್ಣಾನಾಯ್ಕ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಮನುಷ್ಯ ಕಾಣೆ ಪ್ರಕರಣ.

ಸಖರಾಯಪಟ್ಟಣ  ಪೊಲೀಸ್ ಠಾಣೆ.

ದಿನಾಂಕ:-16-09-2021 ರಂದು ನಿಂಗೇಶಪ್ಪ, ಕುನ್ನಾಳು ಗ್ರಾಮವಾಸಿರವರು ನೀಡಿದ ದೂರಿನ ಸಾರಾಂಶವೇನೆಂದರೆ, ದಿನಾಂಕ 13-09-2021 ರಂದು ಸಂಜೆ 05-00 ಗಂಟೆ ಸಮಯದಲ್ಲಿ ನನ್ನ ಮೊದಲನೇ ಮಗಳಾದ ಮೋಹನಕುಮಾರಿ, 23 ವರ್ಷ ಈಕೆಯು ವಾಕಿಂಗ್ ಗೆ ಹೋಗಿ ಬರುತ್ತೇನೆಂದು  ಹೇಳಿ ಹೋದವಳು ಇದುವರೆಗೂ ವಾಪಾಸ್ ಮನೆಗೆ ಬಂದಿರುವುದಿಲ್ಲ. ಸಂಬಂಧಿಕರ, ಪರಿಚಯಸ್ಥರ ಹಾಗೂ ಸ್ನೇಹಿತರ ಮನೆಗಳಲ್ಲಿ ಹುಡುಕಿದರೂ ಪತ್ತೆಯಾಗಿರುವುದಿಲ್ಲ. ಆದ್ದರಿಂದ ನನ್ನ ಮಗಳಾದ ಮೋಹನಕುಮಾರಿಯನ್ನು  ಪತ್ತೆ ಮಾಡಿಕೊಡುವಂತೆ ನೀಡಿದ ದೂರಿನನ್ವಯ ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ.

ನ.ರಾ.ಪುರ  ಪೊಲೀಸ್ ಠಾಣೆ.

ದಿನಾಂಕ 16-09-2021 ರಂದು ಶಿವಣ್ಣ ಬಿನ್ ಲೇಟ್ ನಾಗಪ್ಪ, ಕಡಹಿನಬೈಲು ಗ್ರಾಮ ವಾಸಿರವರು ನೀಡಿದ ದೂರಿನ ಸಾರಾಂಶವೇನೆಂದರೆ ದಿನಾಂಕ 08-09-2021 ರಂದು ಸಂಜೆ 05-00 ಗಂಟೆ ಸಮಯದಲ್ಲಿ ನನ್ನ ಹೆಂಡತಿಯಾದ ರುಕ್ಮಿಣಿರವರು  ಶೆಟ್ಟಿಕೊಪ್ಪದ ಕಡಹಿನಬೈಲು ಗ್ರಾಮ ಪಂಚಾಯ್ತಿಯ ಮುಂಭಾಗದ ವಾಸುರವರ ಅಂಗಡಿಗೆ ಸಾಮಾನು ತರಲು ನಡೆದುಕೊಂಡು ಹೋಗುತ್ತಿದ್ದಾಗ ನ.ರಾ.ಪುರದ ಕಡೆಯಿಂದ ಬಂದ ಕೆಎ-41 ಇಜಿ-2197 ಬೈಕಿನ ಚಾಲಕನಾದ ಯಶ್ವಂತ್ ರವರು ವಾಹನವನ್ನು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ರುಕ್ಮಿಣಿರವರಿಗೆ ಡಿಕ್ಕಿ ಹೊಡೆಸಿದ ಪರಿಣಾಮ ಬಲಗಾಲಿಗೆ, ಸೊಂಟಕ್ಕೆ, ತಲೆಗೆ ತೀವ್ರತರಹದ ಪೆಟ್ಟಾಗಿದ್ದು , ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ದಿನಾಂಕ 15-09-2021 ರಂದು ರಾತ್ರಿ 08-50 ಗಂಟೆ ಸಮಯದಲ್ಲಿ ಮೃತಪಟ್ಟಿರುತ್ತಾರೆ. ಬೈಕ್ ಚಾಲಕನಾದ ಯಶ್ವಂತ್ ರವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ನೀಡಿದ ದಊರಿನ ಮೇರೆಗೆ ನ,ಪಾ.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಅಕ್ರಮ ಜೂಜಾಟ  ಪ್ರಕರಣ.

ಬೀರೂರು   ಪೊಲೀಸ್ ಠಾಣೆ,

ದಿನಾಂಕ 15-09-2021 ರಂದು ರಾತ್ರಿ 07-30 ಗಂಟೆ ಸಮಯದಲ್ಲಿ ಕೆ.ದಾಸರಹಳ್ಳಿ ಕಟ್ಟೆಯ ಪಂಪ್ ಹೌಸ್ ಬಳಿ ಸುಮಾರು 6 ರಿಂದ 8 ಜನರು ಅಕ್ರಮವಾಗಿ ಜೂಜಾಟವಾಡುತ್ತಿದ್ದ 1) ಲಿಂಗರಾಜು  2) ಗೋವಿಂದಪ್ಪ 3) ಚೌಡಪ್ಪ ಇವರುಗಳನ್ನು ವಶಕ್ಕೆ ಪಡೆದಿದ್ದು ಉಳಿದ 4 ಜನರು ತಪ್ಪಿಸಿಕೊಂಡು ಓಡಿಹೋಗಿರುತ್ತಾರೆ. ಆರೋಪಿತರುಗಳ ಬಳಿಯಿದ್ದ 52 ಇಸ್ಪೀಟ್ ಎಲೆಗಳು, ಬಿಳಿಬಣ್ಣದ ಪ್ಲಾಸ್ಟಿಕ್ ಶೀಟ್, ಎಮರ್ಜೆನ್ಸಿ ಲೈಟ್, 8050/- ರೂ ನಗದು ಹಣವನ್ನು ಅಮಾನತ್ತುಪಡಿಸಿಕೊಂಡು ಆರೋಪಿತರ ವಿರುದ್ದ ಬೀರೂರು  ಠಾಣೆಯಲ್ಲಿ ಪ್ರಕರಣ ದಾಖಲಿಸಿ  ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಎಸ್.ಐ.ವಿಶ್ವನಾಥ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ

ಇತ್ತೀಚಿನ ನವೀಕರಣ​ : 17-09-2021 05:55 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080