ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ.

ಯಗಟಿ  ಪೊಲೀಸ್ ಠಾಣೆ,

ದಿನಾಂಕ 18-08-2021 ರಂದು ಬೆಳಗ್ಗೆ 09-45 ಗಂಟೆ ಸಮಯದಲ್ಲಿ ಗರ್ಜೆ ಗ್ರಾಮದ  ಹಾಲಪ್ಪರವರ ಹೆಂಡತಿ ರತ್ನಮ್ಮರವರು ತಮ್ಮ ಮನೆಯ ಮುಂದೆ   ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು ಆರೋಪಿತಳನ್ನು ವಶಕ್ಕೆ ಪಡೆದು ಆರೋಪಿತಳು ಅಕ್ರಮವಾಗಿ ಹೊಂದಿದ 1229/-ರೂ ಬೆಲೆಯ  90 ಎಂ.ಎಲ್.ನ 35 ರಾಜಾವಿಸ್ಕಿಯ ಟೆಟ್ರಾ ಪೌಚ್ ಗಳನ್ನು ಅಮಾನತ್ತುಪಡಿಸಿಕೊಂಡು ಬಂದು ಯಗಟಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ  ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಎಸ್.ಐ.ಶಶಿಕುಮಾರ್ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಅಕ್ರಮ ಮಟ್ಕಾ ಜೂಜಾಟ  ಪ್ರಕರಣ

ಬಸವನಹಳ್ಳಿ  ಪೊಲೀಸ್ ಠಾಣೆ

ದಿನಾಂಕ 17/08/2021 ರಂದು ಮದ್ಯಾಹ್ನ 2-30 ಗಂಟೆ  ಚಿಕ್ಕಮಗಳೂರು ನಗರದ 60 ಅಡಿ ರಸ್ತೆಯಿಂದ ಉಪ್ಪಳ್ಳಿಗೆ ಹೋಗುವ ತಿರುವಿನ ಹತ್ತಿರ  ಅಕ್ರಮವಾಗಿ ಮಟ್ಕಾ ಜೂಜಾಟವಾಡಿಸುತ್ತಿದ್ದ ಸಮೀರ್ ಬಿನ್ ಲೇಟ್ ಮಹಮದ್, ಶಂಕರಪುರ ವಾಸಿ ಈತನನ್ನು ವಶಕ್ಕೆ ಪಡೆದು ಆತನ ವಶದಲ್ಲಿದ್ದ ಒಂದು ಮಟ್ಕಾ ಚೀಟಿ, ಒಂದು ಪೆನ್ ಹಾಗೂ 3220/- ರೂ ನಗದು ಹಣವನ್ನು ವಶಕ್ಕೆ ಪಡೆದು ಆರೋಪಿತನ ವಿರುದ್ದ  ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಎಸ್.ಐ ಕಿರಣ್ ಕುಮಾರ್  ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ತರೀಕೆರೆ  ಪೊಲೀಸ್ ಠಾಣೆ

ದಿನಾಂಕ 18/08/2021 ರಂದು ಬೆಳಗ್ಗೆ 11-30 ಗಂಟೆ ಸಮಯದಲ್ಲಿ ತರೀಕೆರೆ ಟೌನ್ ಖಾಸಗಿ ಬಸ್ ನಿಲ್ದಾಣದ ಮುಂಭಾಗ ಅಕ್ರಮವಾಗಿ ಮಟ್ಕಾ ಜೂಜಾಟವಾಡಿಸುತ್ತಿದ್ದ ಮಹಮದ್ ಗೌಸ್ ಬಿನ್ ಗೌಸ್ ಮೊಹದ್ದೀನ್, ನಾಗೇನಹಳ್ಳಿ ಗ್ರಾಮ, ತರೀಕೆರೆ ಟೌನ್ ಈತನನ್ನು ವಶಕ್ಕೆ ಪಡೆದು ಆತನ ವಶದಲ್ಲಿದ್ದ ಒಂದು ಮಟ್ಕಾ ಚೀಟಿ, ಒಂದು ಬಾಲ್ಪೆನ್ ಹಾಗೂ 1290/- ರೂ ನಗದು ಹಣವನ್ನು ವಶಕ್ಕೆ ಪಡೆದು ಆರೋಪಿತನ ವಿರುದ್ದ  ತರೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಿ..ಐ ರಾಘವೇಂದ್ರ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ.

ಸಖರಾಯಪಟ್ಟಣ ಪೊಲೀಸ್ ಠಾಣೆ.

ದಿನಾಂಕ 17-08-2021 ರಂದು ರಾತ್ರಿ 07-30 ಗಂಟೆ ಸಮಯದಲ್ಲಿ ದೇವರಾಜ ಹಾಗೂ ವರುಣ ರವರು ತಮ್ಮ ಬಾಬ್ತು ಕೆಎ-18 ಇಹೆಚ್ - 6295 ಬೈಕಿನಲ್ಲಿ ಕಡೂರು- ಚಿಕ್ಕಮಗಳೂರು ಹೆದ್ದಾರಿ ರಸ್ತೆಯ ಹೊಸೂರು ಗ್ರಾಮದ ಬಳಿ ಹೋಗುತ್ತಿರುವಾಗ ಕಡೂರು ಕಡೆಯಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕ ಬಸ್ಸನ್ನು  ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ದೇವರಾಜುರವರು ಚಾಲನೆ ಮಾಡುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆಸಿದ ಪರಿಣಾಮ ದೇವರಾಜ ಹಾಗೂ ವರುಣ ರವರು ಬೈಕ್ ಸಮೇತ ಕೆಳಗೆ ಬಿದ್ದಿದ್ದು ದೇವರಾಜನಿಗೆ ತೊಡೆಯ ಸಂದಿಯಲ್ಲಿ ತೀವ್ರವಾದ ಪೆಟ್ಟಾಗಿ ಮೃತಪಟ್ಟಿದ್ದು ,ವರುಣನಿಗೆ ಕೈಕಾಲು , ಎದೆಗೆ  ಪೆಟ್ಟಾಗಿರುತ್ತದೆ. ಬಸ್ ಚಾಲಕನ ವಿರುದ್ದ ಕ್ರಮಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

 

ಇತ್ತೀಚಿನ ನವೀಕರಣ​ : 18-08-2021 06:20 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080