ಅಭಿಪ್ರಾಯ / ಸಲಹೆಗಳು

ಮನುಷ್ಯ ಕಾಣೆ  ಪ್ರಕರಣ.

ಗೋಣಿಬೀಡು ಪೊಲೀಸ್ ಠಾಣೆ.

ದಿನಾಂಕ:18-05-2022 ರಂದು ಪಿರ್ಯಾಧಿ ಮಂಜುನಾಥ ಗೌಡ ಬಿನ್ ಬಸವೇಗೌಡ , ಕತಗಾರ್ ಜೇನುಗದ್ದೆ ಖಾಂಡ್ಯ ಹೋಬಳಿ ಚಿಕ್ಕಮಗಳೂರು ವಾಸಿ ರವರು ನೀಡಿದ ದೂರೇನೆಂದರೆ, ಪಿರ್ಯಾದುದಾರರ ಮಗಳಾದ ಖುಷಿ, 19 ವರ್ಷ,  ಇವಳು ದಿನಾಂಕ;17/05/2022 ರಂದು ತನ್ನ ಅಜ್ಜಿ ಮನೆ ಗೋಣಿಬೀಡುಗೆ ಹೋಗಿ ಬರುತ್ತೇನೆಂದು ಹೋದವಳು   ಅಜ್ಜಿ ಮನೆಗೆ ಹೋಗದೇ, ವಾಪಾಸ್ಸು ಮನೆಗೆ ಬಾರದೇ ಕಾಣೆಯಾಗಿದ್ದು ಈವರೆಗೂ ಎಲ್ಲಾ ಕಡೆ ಹುಡುಕಿದರೂ ಪತ್ತೆಯಾಗಿಲ್ಲವೆಂದು ಕಾಣೆಯಾಗಿರುವ ಖುಷಿ ಇವಳನ್ನು  ಪತ್ತೆ ಮಾಡಿಕೊಡುವಂತೆ ನೀಡಿದ ದೂರಿನ ಮೇರೆಗೆ  ಗೋಣಿಬೀಡು ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಮೂಡಿಗೆರೆ ಪೊಲೀಸ್ ಠಾಣೆ.

ದಿನಾಂಕ 17-05-2022 ರಂದು ಶ್ರೀಮತಿ ರತ್ನಮ್ಮ ಕೊಂ ಕೃಷ್ಣೇಗೌಡ, ವಾಸ ಹೊಸನಗರ, ಕುನ್ನಹಳ್ಳಿ ಗ್ರಾಮ ಮೂಡಿಗೆರೆ ವಾಸಿ ರವರು ನೀಡಿದ ದೂರೇನೆಂದರೆ, ಪಿರ್ಯಾದುದಾರರ ಮಗಳಾದ ಸವೀನ ಇವಳು ತನ್ನ ಮಗು ಸಾರ್ಥಕ್ ನೊಂದಿಗೆ ಮನೆಯಲ್ಲಿ ಇದ್ದವಳು ದಿನಾಂಕ;15/05/2022 ರಂದು ಬೆಳಿಗ್ಗೆ ಸಮಯದಲ್ಲಿ ಮನೆಯಲ್ಲಿ ಇದ್ದವಳು ಮದ್ಯಾಹ್ನ ಪಿರ್ಯಾದಿ ನೋಡಿದಾಗ ಸವೀನ ತನ್ನ ಮಗಳನ್ನು ಕರೆದುಕೊಂಡು ಮನೆಯಿಂದ ಹೋಗಿದ್ದು, ವಾಪಾಸ್ಸು ಮನೆಗೆ ಬಾರದೇ ಕಾಣೆಯಾಗಿದ್ದು ಈವರೆಗೂ ಎಲ್ಲಾ ಕಡೆ ಹುಡುಕಿದರೂ ಪತ್ತೆಯಾಗಿಲ್ಲವೆಂದು ಕಾಣೆಯಾಗಿರುವ ಸವೀನ, 30 ವರ್ಷ, 5 ಅಡಿ ಎತ್ತರ,  ಗೋದಿ ಮೈ ಬಣ್ಣ, ದೃಡಕಾಯ ಮೈಕಟ್ಟು, ಮನೆಯಿಂದ ಹೋಗುವಾಗ ಹರಿಶಿನ ಬಣ್ಣದ ಚೂಡಿದಾರ  ಧರಿಸಿರುತ್ತಾಳೆ. ಮಗು ಸಾರ್ಥಕ್ ,3 ವರ್ಷ,  2.5 ಅಡಿ ಎತ್ತರ, ಗೋದಿ ಮೈ ಬಣ್ಣ, ಸಾದಾರಣ ಶರೀರ, ಕೆಂಪು ಬಣ್ಣದ ಟೀ ಶರಟು ಮತ್ತು ಚಡ್ಡಿ ಧರಿಸಿರುತ್ತಾನೆ. ಕಾಣೆಯಾಗಿರುವ ತನ್ನ ಮಗಳು ಮತ್ತು ಮಗುವನ್ನು ಇವಳನ್ನು  ಪತ್ತೆ ಮಾಡಿಕೊಡುವಂತೆ ನೀಡಿದ ದೂರಿನ ಮೇರೆಗೆ  ತರೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

 

 

 

 

 

ಇತ್ತೀಚಿನ ನವೀಕರಣ​ : 18-05-2022 05:29 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080