ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ.

ಯಗಟಿ  ಪೊಲೀಸ್ ಠಾಣೆ,

ದಿನಾಂಕ 19-08-2021 ರಂದು ಬೆಳಗ್ಗೆ 09-15 ಗಂಟೆ ಸಮಯದಲ್ಲಿ ಬಿಸಲೆರೆ ಗ್ರಾಮದ ಶಿವಮೂರ್ತಿರವರು ತಮ್ಮ ಮನೆಯ ಮುಂದೆ   ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು ಆರೋಪಿಯನ್ನು  ವಶಕ್ಕೆ ಪಡೆದು ಆರೋಪಿಯು ಅಕ್ರಮವಾಗಿ ಹೊಂದಿದ 1335/-ರೂ ಬೆಲೆಯ  90 ಎಂ.ಎಲ್.ನ 38 ರಾಜಾವಿಸ್ಕಿಯ ಟೆಟ್ರಾ ಪೌಚ್ ಗಳನ್ನು ಅಮಾನತ್ತುಪಡಿಸಿಕೊಂಡು ಬಂದು ಯಗಟಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ  ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಎಸ್.ಐ. ಶಶಿಕುಮಾರ್ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಅಪಘಾತ ಪ್ರಕರಣ.

ಗ್ರಾಮಾಂತರ ಪೊಲೀಸ್ ಠಾಣೆ.

ದಿನಾಂಕ 19-08-2021 ರಂದು ಬೆಳಗ್ಗೆ 07-00 ಗಂಟೆ ಸಮಯದಲ್ಲಿ ಶ್ರೀಮತಿ.ಶಾರದರವರು ತಮ್ಮ ಮಗ ಶಂಕರರವರ ಮನೆಗೆ ಹೋಗಲೆಂದು ಶಾಂತಿನಗರದ ಬೇತೇಲ್ ಸ್ಕೂಲ್ ಹತ್ತಿರ ನಡೆದುಕೊಂಡು ಹೋಗುತ್ತಿರುವಾಗ  ಎದುರಿನಿದ ಬಂದ ಕೆಎ-18 ಎ- 7405 ಕಾರಿನ ಚಾಲಕ ಕಾರನ್ನು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು  ರವರಿಗೆ ಡಿಕ್ಕಿ ಹೊಡೆಸಿದ ಪರಿಣಾಮ ಎದೆಗೆ, ಎಡಕಾಲು ಹಾಗೂ ಎಡಕೈಗೆ ಪೆಟ್ಟಾಗಿರುತ್ತೆ. ಕಾರಿನ ಚಾಲಕನ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಗ್ರಾಮಾಂತರ  ಠಾಣೆಯಲ್ಲಿ ಪ್ರಕರಣ ದಾಖಲಿಸಿ  ತನಿಖೆ ಕೈಗೊಂಡಿರುತ್ತಾರೆ.

ಮರಳು ಕಳ್ಳತನ ಪ್ರಕರಣ.

ಬಾಳೂರು ಪೊಲೀಸ್ ಠಾಣೆ.

ದಿನಾಂಕ 18-08-2021 ರಂದು ಮದ್ಯಾಹ್ನ 12-30 ಗಂಟೆ ಸಮಯದಲ್ಲಿ ಮಾಳಿಗನಾಡು ಗ್ರಾಮದ ಸಮರ್ಥ ಎಂಬುವವರು ತಮ್ಮ  ಮನೆಯ ಮುಂದಿನ ಅಂಗಳದಲ್ಲಿ  ಸರ್ಕಾರದ ಸ್ವತ್ತಾದ ಸುಮಾರು 01 ಟ್ರಾಕ್ಟರ್ ಲೋಡ್ ನಷ್ಟು ಮರಳನ್ನು ಮಾಳಿಗನಾಡು ಗ್ರಾಮದ ಹಳ್ಳದಿಂದ ಯಾವುದೇ ಪರವಾನಗಿಯನ್ನು ಹೊಂದದೆ ಕಳ್ಳತನದಿಂದ ಸಂಗ್ರಹ ಮಾಡಿಟ್ಟಿದ್ದು ಆರೋಪಿತನ ವಿರುದ್ದ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಎಸ್.ಐ. ಶ್ರೀಮತಿ. ರೇಣುಕಮ್ಮ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 19-08-2021 06:25 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080