ಅಭಿಪ್ರಾಯ / ಸಲಹೆಗಳು

ಮರಣಾಂತಿಕ ರಸ್ತೆ ಅಪಘಾತ ಪ್ರಕರಣ

ಕಡೂರು  ಪೊಲೀಸ್ ಠಾಣೆ.

ದಿನಾಂಕ:19/02/2022 ರಂದು ಪಿರ್ಯಾದಿ ಸಂಜು ಬಿ.ವಿ. ಬಿನ್ ವಸಂತಕುಮಾರ್ ಬಂಡಿಕೊಪ್ಪಲು ವಾಸಿ ಇವರು ನೀಡಿದ ದೂರಿನಲ್ಲಿ ದಿನಾಂಕ 18/02/2022 ರಂದು ರಾತ್ರಿ ಪಿರ್ಯಾದಿ ಅತ್ತೆ ಮಗ ವಿನಯ್ ನು ತನ್ನ ಬಾಬ್ತು ಕೆಎ-01 ಹೆಚ್.ಎಫ್. -8952 ರ ಯಮಹಾ ಬೈಕನ್ನು ಚಾಲನೆ ಮಾಡಿಕೊಂಡು ಮಸಾಲಾ ಡಾಬಾ ದಿಂದ ಕಡೂರಿಗೆ ಬರುತ್ತಿರುವಾಗ ಕಡೂರು ಕಡೆಯಿಂದ  ಬರುತ್ತಿದ್ದ ಕೆಎ-02-ಇವೈ-0935 ಬೈಕ್ ಚಾಲಕ ಬೈಕ್ ಅನ್ನು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ವಿನಯ್ ಚಲಾಯಿಸುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆಸಿದ ಪರಿಣಾಮ ವಿನಯ್ ರಸ್ತೆ ಮೇಲೆ ಬಿದ್ದು ತಲೆಗೆ ಮೈಕೈಗೆ  ಪೆಟ್ಟಾಗಿ, ವಿನಯ್ ನನ್ನು ಚಿಕಿತ್ಸೆಗೆ ಶಿವಮೊಗ್ಗ ನಾರಾಯಣ ಹೃದಾಲಯ ಅಸ್ಪತ್ರೆಗೆ ಸೇರಿಸಿದ್ದು , ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ 19-02-2022  ಅಸ್ಪತ್ರೆಗೆ ಬೆಳಿಗ್ಗೆ ಜಾವ 1-45 ಗಂಟೆಗೆ ಮೃತಪಟ್ಟಿದ್ದು, ವಿನಯ್ ಸಾವಿಗೆ ಕಾರಣವಾಗಿರುವ  ಕೆಎ-02-ಇವೈ-0935 ಬೈಕ್ ಚಾಲಕ ಲಕ್ಷ್ಮೀಕಾಂತ ರವರ  ವಿರುದ್ದ ಕ್ರಮ ಕೈಗೊಳ್ಳಲು ನೀಡಿದ ದೂರಿನ ಮೇರೆಗೆ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

ಸಖರಾಯಪಟ್ಟಣ ಪೊಲೀಸ್ ಠಾಣೆ.

ದಿನಾಂಕ:19-02-2022 ರಂದು ಸಖರಾಯಪಟ್ಟಣ ಠಾಣಾ ಸರಹದ್ದಿನ ಪಿಳ್ಳೇನಹಳ್ಳಿಯಿಂದ  ಹುಲಿಕೆರೆಗೆ ಹೋಗುವ ರಸ್ತೆಯಲ್ಲಿ ಕೇತುಮಾರನಹಳ್ಳಿ ವಾಸಿ ಹರೀಶ್ ಕೆ.ಎಸ್. ಮತ್ತು ಶಂಕರಪ್ಪ ಎಂಬುವನು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು ಅರೋಪಿಯನ್ನು ವಶಕ್ಕೆ ಪಡೆದು ಆರೋಪಿ ವಶದಲ್ಲಿ 90 ಎಂ.ಎಲ್.ನ 46 ಟೆಟ್ರಾಪ್ಯಾಕ್ ಮದ್ಯ ಅಂದಾಜು ಬೆಲೆ 1616/- ರೂ ಅಗಿದ್ದು ಮಧ್ಯವನ್ನು ಮತ್ತು ಮದ್ಯ ಮಾರಾಟ ಮಾಡಿದ ನಗದು ಹಣ 100/- ರೂ ವನ್ನು ಅಮಾನತ್ತುಪಡಿಸಿಕೊಂಡು ಬಂದು  ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ. ಹರೀಶ್ ಆರ್.  ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 19-02-2022 06:24 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080