ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

ತರೀಕೆರೆ ಪೊಲೀಸ್ ಠಾಣೆ.

ದಿನಾಂಕ: 20/08/2021 ರಂದು ಪಿರ್ಯಾದಿ ಅರುಣ ಕೆ.ಎಸ್. ಎಂಬುವರು ಠಾಣೆಗೆ ಹಾಜರಾಗಿ ನೀಡಿದ ದೂರಿನಲ್ಲಿ ದಿನಾಂಕ 19/08/2021 ರಂದು ಮದ್ಯಾಹ್ನ 3.30 ಗಂಟೆ ಸುಮಾರಿಗೆ ಪಿರ್ಯಾದಿಯವರ ತಂದೆ ಕೃಷ್ಣಮೂರ್ತಿಯವರು ಭದ್ರಾವತಿಯಿಂದ ತರೀಕೆರೆಗೆ ತಮ್ಮ ಬಾಬ್ತು ಕೆಎ-41-6548 ರ ಆಟೋ ರೀಕ್ಷಾವನ್ನು ಚಾಲನೆ ಮಾಡಿಕೊಂಡು ರಜಿಯಾಬಾನು ಮತ್ತು ಮಹಮ್ಮದ್ ರಿಹಾನ್ ಎಂಬುವರನ್ನು ಆಟೋದಲ್ಲಿ ಕೂರಿಸಿಕೊಂಡು ಬರುತ್ತಿರುವಾಗ ತರೀಕೆರೆ ಬಳಿ ಇಂಡಿಯನ್ ಪೆಟ್ರೋಲ್ ಬಂಕ್ ಎನ್.ಹೆಚ್. 206 ರಸ್ತೆಯಲ್ಲಿ ಆಟೋ ರೀಕ್ಷಾವನ್ನು ಅತೀವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಒಂದು ಮರಕ್ಕೆ ಡಿಕ್ಕಿ ಹೊಡೆಸಿದ್ದು, ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೂ ಪೆಟ್ಟಾಗಿದ್ದು,  ತಮ್ಮ ತಂದೆಯವರಿಗೆ ತೀವ್ರತರವಾದ ಪೆಟ್ಟಾಗಿದ್ದು ಅಸ್ಪತ್ರೆಗೆ ಚಿಕಿತ್ಸೆಗೆ ಸೇರಿಸಿದ್ದು ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ 1.30 ಗಂಟೆ ಗೆ ಮೃತಪಟ್ಟಿರುವುದಾಗಿ ಮುಂದಿನ ಕ್ರಮ ಜರೂಗಿಸುವಂತೆ ನೀಡಿದ ಪಿರ್ಯಾದುವಿನ ಮೇರೆಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ

ಅಕ್ರಮ ಮದ್ಯ ಮಾರಾಟ ಪ್ರಕರಣ.

ಯಗಟಿ  ಪೊಲೀಸ್ ಠಾಣೆ,

ದಿನಾಂಕ 19-08-2021 ರಂದು ಬಿಸಲೆರೆ ಗ್ರಾಮದ ಬಿ.ಸಿ. ಮೂರ್ತಿರವರು ತಮ್ಮ ಮನೆಯ ಮುಂದೆ  ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು ಆರೋಪಿಯನ್ನು  ವಶಕ್ಕೆ ಪಡೆದು ಆರೋಪಿಯು ಅಕ್ರಮವಾಗಿ ಹೊಂದಿದ 1335/-ರೂ ಬೆಲೆಯ  90 ಎಂ.ಎಲ್.ನ 38 ರಾಜಾವಿಸ್ಕಿಯ ಟೆಟ್ರಾ ಪೌಚ್ ಗಳನ್ನು ಅಮಾನತ್ತುಪಡಿಸಿಕೊಂಡು ಬಂದು ಯಗಟಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ  ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಎಸ್.ಐ. ಶಶಿಕುಮಾರ್ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ.

ಯಗಟಿ  ಪೊಲೀಸ್ ಠಾಣೆ,

ದಿನಾಂಕ 19-08-2021 ರಂದು ಬಿಸಲೆರೆ ಗ್ರಾಮದ ಶಿವಮೂರ್ತಿರವರು ತಮ್ಮ ಮನೆಯ ಮುಂದೆ  ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು ಆರೋಪಿಯನ್ನು  ವಶಕ್ಕೆ ಪಡೆದು ಆರೋಪಿಯು ಅಕ್ರಮವಾಗಿ ಹೊಂದಿದ 1229/-ರೂ ಬೆಲೆಯ  90 ಎಂ.ಎಲ್.ನ 35 ರಾಜಾವಿಸ್ಕಿಯ ಟೆಟ್ರಾ ಪೌಚ್ ಗಳನ್ನು ಅಮಾನತ್ತುಪಡಿಸಿಕೊಂಡು ಬಂದು ಯಗಟಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ  ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಎಸ್.ಐ. ಶಶಿಕುಮಾರ್ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಮನುಷ್ಯ ಕಾಣೆ ಪ್ರಕರಣ.

ಬೀರೂರು ಪೊಲೀಸ್ ಠಾಣೆ.

ದಿನಾಂಕ 19-08-2021 ರಂದು ಪಿರ್ಯಾದಿ ರಮೇಶ ಬಿನ್ ನಂಜುಂಡಪ್ಪ ರವರು ನೀಡಿದ ದೂರಿನಲ್ಲಿ ಪಿರ್ಯಾದಿ ಮಗಳು ಸುಮಿತ್ರಾ 23 ವರ್ಷ ಇವಳು ದಿನಾಂಕ 16/08/2021 ರಂದು ಕಂಪ್ಯೂಟರ್ ಕ್ಲ್ಲಾಸಿಗೆ ಹೋಗುತ್ತೇನೆಂದು ಹೋದವಳು ವಾಪಾಸ್ಸು ಮನೆಗೆ ಬಂದಿರುವುದಿಲ್ಲವೆಂದು ಎಲ್ಲಾ ಕಡೆ ಹುಡುಕಿದರೂ ಸಹ ಪತ್ತೆಯಾಗಿಲ್ಲವೆಂದು ಸುಮಿತ್ರಾಳ ಚಹರೆ ಕೆಂಪು ಮೈ ಬಣ್ಣ, ಕೋಲುಮುಖ, 5 1/2  ಅಡಿ ಎತ್ತರವಾಗಿರುತ್ತಾಳೆ, ಸಾಧಾರಣ ಮೈಕಟ್ಟು ಹೊಂದಿರುತ್ತಾಳೆ. ಎಂದು ನೀಡಿದ ದೂರಿನ ಮೇರೆಗೆ ಬೀರೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಅಕ್ರಮ ಮಟ್ಕಾ ಜೂಜಾಟ ಪ್ರಕರಣ

ನಗರ  ಪೊಲೀಸ್ ಠಾಣೆ

ದಿನಾಂಕ 19/08/2021 ರಂದು 15.30 ಗಂಟೆ ಸಮಯದಲ್ಲಿ ಚಿಕ್ಕಮಗಳೂರು ದಜರ್ಿ ಬೀದಿ ರಸ್ತೆಯಲ್ಲಿ ಪಾಂಡುರಂಗ ದೇವಸ್ಥಾನದ ಬಳಿ ಅಕ್ರಮವಾಗಿ ಮಟ್ಕಾ ಜೂಜಾಟವಾಡಿಸುತ್ತಿದ್ದ ಶ್ರೀನಿವಾಸ ಜಿ. ಬಿನ್ ಗೋವಿಂದಸ್ವಾಮಿ, 42 ವರ್ಷ  ಶಂಕರಪುರ ಚಿಕ್ಕಮಗಳೂರು  ವಾಸಿ ಈತನನ್ನು ವಶಕ್ಕೆ ಪಡೆದು ಆತನ ವಶದಲ್ಲಿದ್ದ ಒಂದು ಮಟ್ಕಾ ಚೀಟಿ, ಒಂದು ಪೆನ್ ಹಾಗೂ 1950/- ರೂ ನಗದು ಹಣವನ್ನು ವಶಕ್ಕೆ ಪಡೆದು ಆರೋಪಿತನ ವಿರುದ್ದ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ದೇವರಾಜ ಎಸ್. ಬಿರಾದಾರ್ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 20-08-2021 06:20 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080