ಅಭಿಪ್ರಾಯ / ಸಲಹೆಗಳು

ಅಕ್ರಮ ಇಸ್ಪೀಟ್ ಜೂಜಾಟ ಪ್ರಕರಣ

ಸಿ.ಇ.ಎನ್. ಪೊಲೀಸ್ ಠಾಣೆ.

ದಿನಾಂಕ:19/04/2022 ರಂದು ಬೆಳಿಗ್ಗೆ ಚಿಕ್ಕಮಗಳೂರು ನಗರದ  ನಲ್ಲೂರು ಗ್ರಾಮದ ಕೃಷ್ಣಪ್ಪ ರವರ ಲೇ ಔಟ್ ನ ಒಳಭಾಗದಲ್ಲಿ ಸಾರ್ಚಜನಿಕ ರಸ್ತೆಯಲ್ಲಿ  ಅಕ್ರಮವಾಗಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಅರೋಪಿತರಾದ 1] ಮಹಮ್ಮದ್ ಸಿ.ಪಿ. 2] ಪ್ರಕಾಶ 3] ಸುರೇಶ್ ಪಿ.ಸಿ. 4] ಹೊಯ್ಸಳ 5] ಮಂಜುನಾಥ ಟಿ.ಎಸ್ @ ವರದರಾಜು 6] ಗಂಗಾಧರ ಹೆಚ್.ಆರ್.  7] ಪಾಂಡುರಂಗ 8] ನಾಸೀರ್ ಅಹಮ್ಮದ್  ರವರನ್ನು ವಶಕ್ಕೆ ಪಡೆದು ಆರೋಪಿತರು ಅಕ್ರಮವಾಗಿ ಇಸ್ಪೀಟ್ ಜೂಜಾಟಕ್ಕೆ ಬಳಸಿದ  37800 /- ರೂ ನಗದು ಹಣ , 52 ಇಸ್ಪೀಟ್ ಎಲೆಗಳು, ಒಂದು ಬಟ್ಟೆ, ಎರಡು ಅರ್ದ ಉರಿದ ಕ್ಯಾಂಡಲ್ ಅನ್ನು ಅಮಾನತ್ತುಪಡಿಸಿಕೊಂಡು ಬಂದು ಸಿ.ಇ.ಎನ್. ಪೊಲೀಸ್ ಠಾಣೆಯಲ್ಲಿ ಆರೋಪಿತರ ವಿರುದ್ದ  ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಸಿ.ಇ.ಎನ್. ಪೊಲೀಸ್ ಠಾಣೆಯ ಪಿ.ಎಸ್.ಐ. ನಾಸೀರ್ ಹುಸೇನ್ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಕಳ್ಳತನ ಪ್ರಕರಣ

ಬಣಕಲ್ ಪೊಲೀಸ್ ಠಾಣೆ.

ದಿನಾಂಕ19-04-2022 ರಂದು ಪಿರ್ಯಾದಿ ರವರು ನೀಡಿದ ದೂರಿನಲ್ಲಿ ಪಿರ್ಯಾದುದಾರರು ಮೂಡಿಗೆರೆ ತಾಲ್ಲೋಕು ಬಣಕಲ್ ಹೋಬಳಿ ಮತ್ತಿಕಟ್ಟೆಯಲ್ಲಿರುವ ನಮ್ಮ ಬಾಬ್ತು ತೋಟದಲ್ಲಿ ಬೆಳೆದಿರುವ ಕಾಫಿ, ಕಾಳು ಮೆಣಸು ಗೋಡಾನ್ ನಲ್ಲಿ ಇಟ್ಟಿದ್ದು ದಿನಾಂಕ 18-04-2022 ರಂದು ಪಿರ್ಯಾದಿ ರಾತ್ರಿ ಗೋಡನ್ ಬೀಗ ಹಾಕಿಕೊಂಡು ಹೋಗಿದ್ದು ಮಾರನೇ ದಿನ ಬೆಳಿಗ್ಗೆ ಹೋಗಿ ನೋಡಲಾಗಿ ಯಾರೋ ಕಳ್ಳರು ಗೋಡಾನ್ ಹಿಂಭಾಗದ ಗೇಟ್ ತೆಗೆದು ಹಂಚಿನ ಮೇಲೆ ಹತ್ತಿ ಹಂಚುಗಳನ್ನು ತೆಗೆದು  ಗೋಡಾನ್ ನಲ್ಲಿ ಇದ್ದ 60 ಕೆ.ಜಿಯ 8 ಕಾಳು ಮೆಣಸಿನ ಚೀಲಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ, ಕಳ್ಳತನವಾದ ಕಾಳು ಮೆಣಸಿನ ಬೆಲೆ ಸುಮಾರು 2, 54,400/- ರೂ ಅಗಿದ್ದು ಕಳ್ಳರನ್ನು ಪತ್ತೆ ಮಾಡಿ ಕಳುವಾಗಿರುವ ಕಾಳು ಮೆಣಸಿನ್ನು ಪತ್ತೆ ಮಾಡಿಕೊಡುವಂತೆ ನೀಡಿದ ದೂರಿನ ಮೇರೆಗೆ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಅಲ್ದೂರು ಪೊಲೀಸ್ ಠಾಣೆ.

ದಿನಾಂಕ 20-04-2022 ರಂದು ಪಿರ್ಯಾದಿ ರಾಜು ಹೆಚ್. ಜೆ, ಬಿನ್ ಜವರಯ್ಯ ರವರು ನೀಡಿದ ದೂರಿನಲ್ಲಿ ಪಿರ್ಯಾದಿ ತನ್ನ ಬಾಬ್ತು ಕೆಎ-18-ವಿ-7491 ರ ಹಿರೋಹೊಂಡಾ ಬೈಕನ್ನು ದಿನಾಂಕ 18/04/2022 ರಂದು ಅಲ್ದೂರು ಪಟ್ಟಣ ಗಣಪತಿ ದೇವಸ್ಥಾನ ಹತ್ತಿರ ನಿಲ್ಲಿಸಿ ಮದುವೆಗೆ ಹೋಗಿದ್ದು, ಮದ್ಯಾಹ್ನ ವಾಪಾಸ್ಸು ಬಂದು ನೋಡಲಾಗಿ ಬೈಕ್ ನಿಲ್ಲಿಸಿದ್ದ ಜಾಗದಲ್ಲಿ ಕಾಣೆಯಾಗಿದ್ದು ಯಾರೋ ಕಳ್ಳರು ಬೈಕ್ ನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ, ಕಳ್ಳರನ್ನು ಪತ್ತೆ ಮಾಡಿ ಕಳುವಾಗಿರುವ ಬೈಕ್ ಅನ್ನು ಪತ್ತೆ ಮಾಡಿಕೊಡುವಂತೆ ನೀಡಿದ ದೂರಿನ ಮೇರೆಗೆ ಅಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 20-04-2022 07:31 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080