ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ.

ಬಾಳೂರು ಪೊಲೀಸ್ ಠಾಣೆ.

ದಿನಾಂಕ:19-05-2022 ರಂದು ಬಾಳೂರು ಪೊಲೀಸ್ ಠಾಣಾ ಸರಹದ್ದಿನ ಹ್ಯಾಂಡ್ ಪೋಸ್ಟ್ ವಾಸಿ, ಶ್ರೀನಿವಾಸ ಬಿನ್ ಈಶ್ವರ ರವರು ಹ್ಯಾಂಡ್ ಪೋಸ್ಟ್ ನಲ್ಲಿ ತನ್ನ ಅಂಗಡಿಗೆ ಬರುವ ಗಿರಾಕಿಗಳಿಗೆ, ಅಕ್ರಮವಾಗಿ ಮದ್ಯದ ಟೆಟ್ರಾಪ್ಯಾಕ್ ಗಳನ್ನು  ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದು, ಅರೋಪಿತನನ್ನು ವಶಕ್ಕೆ ಪಡೆದು ಅರೋಪಿತನ ವಶದಲ್ಲಿ ಇದ್ದ, 90 ಎಂ.ಎಲ್. ನ 768 ಟೆಟ್ರಾಪ್ಯಾಕ್  ಮದ್ಯವನ್ನು ಅಮಾನತ್ತುಪಡಿಸಿಕೊಂಡಿದ್ದು, ಮದ್ಯದ ಅಂದಾಜು ಬೆಲೆ 26,979/- ರೂ ಗಳಾಗಿರುತ್ತೆ. ಆರೋಪಿತ ವಿರುದ್ದ ಬಾಳೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಬಾಳೂರು ಠಾಣಾ ಪಿಎಸ್ಐ ಪವನ್ ಕುಮಾರ್ . ಸಿ.ಸಿ. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಗ್ರಾಮಾಂತರ ಪೊಲೀಸ್ ಠಾಣೆ.

ದಿನಾಂಕ:19-05-2022 ರಂದು ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನ ಕೋಡಿಹಳ್ಳಿ ಗ್ರಾಮದ ವಾಸಿ ಕೃಷ್ಣಪ್ಪ ಬಿನ್ ಲೇಟ್ ಸಣ್ಣ ಮರಿಯಯ್ಯ ಇವನು ತಮ್ಮ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು , ಅರೋಪಿತನನ್ನು ವಶಕ್ಕೆ ಪಡೆದು ಆರೋಪಿತನ ವಶದಲ್ಲಿ ಇದ್ದ 90 ಎಂ.ಎಲ್. ನ 23 ಟೆಟ್ರಾಪ್ಯಾಕ್ ಮದ್ಯವನ್ನು ಅಮಾನತ್ತುಪಡಿಸಿಕೊಂಡಿದ್ದು, ಮದ್ಯದ ಅಂದಾಜು ಬೆಲೆ 1475/- ರೂ ಗಳಾಗಿರುತ್ತೆ. ಆರೋಪಿತ ವಿರುದ್ದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಗ್ರಾಮಾಂತರ ಠಾಣಾ ಪಿ.ಐ. ಸ್ವರ್ಣ ಜಿ.ಎಸ್.  ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

 

ಅಕ್ರಮ ಮಟ್ಕಾ ಜೂಜಾಟ ಪ್ರಕರಣ

ಕಡೂರು ಪೊಲೀಸ್ ಠಾಣೆ.

ದಿನಾಂಕ;19-05-2022 ರಂದು ಕಡೂರು ಠಾಣಾ ಸರಹದ್ದಿನ ಕಡೂರು ಪಟ್ಟಣದ ಬಾಲಾಜಿ ನರ್ಸಿಂಗ್ ಹೋಂ ಬಳಿ  ಅಕ್ರಮವಾಗಿ ಮಟ್ಕಾ ಜೂಜಾಟ ಆಡಿಸುತ್ತಿದ್ದ ಅರೋಪಿ ಜಿಶಾನ್ ಬಿನ್ ಜಾಕಿರ್ ಹುಸೇನ್ . ಅಬ್ದುಲ್ಲಾ ಕಾಲೋನಿ, ಕಡೂರು ಟೌನ್ ಈತನನ್ನು ವಶಕ್ಕೆ ಪಡೆದು ಅರೋಫಿತನು ಸಂಗ್ರಹಿಸಿದ ರೂ 5050/- ನಗದು ಹಣ, ಒಂದು ಮಟ್ಕಾ ಚೀಟಿ,  ಒಂದು ಬಾಲ್ ಪೆನ್ನು ಅನ್ನು ಆಮಾನತ್ತು ಪಡಿಸಿಕೊಂಡು ಬಂದು ಕಡೂರು ಠಾಣೆಯಲ್ಲಿ ಅರೋಫಿತರ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಡಿಸಿಐಬಿ ಘಟಕದ ಪಿಎಸ್.ಐ. ಗೋವಿಂದನಾಯ್ಕ ಬಿ. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಮನುಷ್ಯ ಕಾಣೆ  ಪ್ರಕರಣ.

ಬಾಳೂರು ಪೊಲೀಸ್ ಠಾಣೆ.

ದಿನಾಂಕ;20-05-2022 ರಂದು ಬಸವರಾಜ್ ಎನ್. ಸಿ. ಬಿನ್ ಲೇಟ್ ಚಂದ್ರೇಗೌಡ, ನಿಡುವಾಳೆ ಬಾಳೂರು ಹೋಬಳಿ ವಾಸಿ ರವರು ನೀಡಿದ ದೂರೇನೆಂದರೆ, ಪಿರ್ಯಾದುದಾರರ ಮಗ ವೀರೇಶ, ಈತನು ದಿನಾಂಕ;07/05/2022 ರಂದು  ಮನೆಯಿಂದ ಹೋದವಳು, ವಾಪಾಸ್ಸು ಮನೆಗೆ ಬಾರದೇ ಕಾಣೆಯಾಗಿದ್ದು ಈವರೆಗೂ ಎಲ್ಲಾ ಕಡೆ ಹುಡುಕಿದರೂ ಪತ್ತೆಯಾಗಿಲ್ಲವೆಂದು ಕಾಣೆಯಾಗಿರುವ ವೀರೇಶ್,  29 ವರ್ಷ, ಎತ್ತರ 5.5 ಅಡಿ, ದುಂಡುಮುಖ, ದೃಡಕಾಯ ಶರೀರ, ಬಿ.ಎ ವಿದ್ಯಾಬ್ಯಾಸ ಮಾಡಿರುತ್ತಾನೆ. ಕಾಣೆಯಾಗಿರುವ ತನ್ನ ಮಗ ವಿರೇಶನನ್ನು  ಪತ್ತೆ ಮಾಡಿಕೊಡುವಂತೆ ನೀಡಿದ ದೂರಿನ ಮೇರೆಗೆ  ಬಾಳೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ತರೀಕೆರೆ ಪೊಲೀಸ್ ಠಾಣೆ.

ದಿನಾಂಕ;19-05-2022 ರಂದು ಗೀರೀಶ್ ಕೆ.ಕೆ. ಬಿನ್ ಲೇಟ್ ಕೇಶಮೂರ್ತಿ, ಬಸವೇಶ್ವರ ರಸ್ತೆ , ತರೀಕೆರೆ ವಾಸಿ ರವರು ನೀಡಿದ ದೂರೇನೆಂದರೆ, ಪಿರ್ಯಾದುದಾರರ ಮಗಳು ಗೀತಾ ಟಿ.ಜಿ. ಇವಳು ದಿನಾಂಕ;17/05/2022 ರಂದು ಸಂಜೆ ಮನೆಯಿಂದ ಹೋದವಳು, ವಾಪಾಸ್ಸು ಮನೆಗೆ ಬಾರದೇ ಕಾಣೆಯಾಗಿದ್ದು ಈವರೆಗೂ ಎಲ್ಲಾ ಕಡೆ ಹುಡುಕಿದರೂ ಪತ್ತೆಯಾಗಿಲ್ಲವೆಂದು ಕಾಣೆಯಾಗಿರುವ ಗೀತಾ ಟಿ.ಜಿ.  20 ವರ್ಷ, ಎತ್ತರ 5.0 ಅಡಿ, ಕೋಲುಮುಖ, ತೆಳ್ಳನೆ ಶರೀರ, ಉದ್ದನೆಯ ತಲೆ ಕೂದಲು ಪಿ.ಯು.ಸಿ. ವಿದ್ಯಾಬ್ಯಾಸ ಮಾಡಿರುತ್ತಾಳೆ. ಕನ್ನಡ ಬಾಷೆ ಮಾತನಾಡುತ್ತಾಳೆ. ಮನೆಯಿಂದ ಹೋಗುವಾಗ ಬಿಳಿ ಬಣ್ಣದ ನೈಟ್ ಪ್ಯಾಂಟಟ್ಬಿಳಿ ಬಣ್ಣದ ಟೀ ಶರಟು ಧರಿಸಿರುತ್ತಾಳೆ. ಕಾಣೆಯಾಗಿರುವ ತನ್ನ ಮಗಳು ಗೀತಾ ಟಿ.ಜಿ. ಇವಳನ್ನು  ಪತ್ತೆ ಮಾಡಿಕೊಡುವಂತೆ ನೀಡಿದ ದೂರಿನ ಮೇರೆಗೆ  ತರೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 20-05-2022 07:10 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080