ಅಭಿಪ್ರಾಯ / ಸಲಹೆಗಳು

ಅಕ್ರಮ ಕಳ್ಳಭಟ್ಟಿ  ಮಾರಾಟ   ಪ್ರಕರಣ.

ಬಣಕಲ್   ಪೊಲೀಸ್ ಠಾಣೆ,

ದಿನಾಂಕ 19-09-2021 ರಂದು 17-30 ಗಂಟೆ ಸಮಯದಲ್ಲಿ ಬಡವನದಿಣ್ಣೆ ಗ್ರಾಮದ ವಾಸಿಯಾದ ರಮೇಶ ಬಿನ್ ಲೇಟ್ ಅಣ್ಣೇಗೌಡರವರು ತಮ್ಮ ಕೊಟ್ಟಿಗೆಯ ಶೆಡ್ ಬಳಿ ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿಯನ್ನು ತಯಾರು ಮಾಡಿ  ಮಾರಾಟ ಮಾಡುತ್ತಿದ್ದು ಈತನನ್ನು ವಶಕ್ಕೆ ಪಡೆದು , ಆತನ ಬಳಿಯಿದ್ದ ಕಳ್ಳಭಟ್ಟಿ ಸಾರಾಯಿ ಕೊಳೆಯನ್ನು  ಅಮಾನತ್ತುಪಡಿಸಿಕೊಂಡು ಬಣಕಲ್  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಎಸ್.ಐ.  ಶ್ರೀಮತಿ.ಗಾಯತ್ರಿ  ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಅಕ್ರಮ ಜೂಜಾಟ ಪ್ರಕರಣ.

ಸಿ.ಇ.ಎನ್. ಪೊಲೀಸ್ ಠಾಣೆ.

ದಿನಾಂಕ 19-09-2021 ರಂದು 16-15 ಗಂಟೆ ಸಮಯದಲ್ಲಿ ಹೊಸಳ್ಳಿಪೇಟೆಯಿಂದ ಗಡಬನಹಳ್ಳಿಗೆ ಹೋಗುವ ಸಾರ್ವಜನಿಕ ರಸ್ತೆಯಲ್ಲಿ ಅಕ್ರಮವಾಗಿ ಜೂಜಾಟವಾಡುತ್ತಿದ್ದ 1) ಶಬ್ಬೀರ್ 2) ವರದಕುಮಾರ್ 3) ಪಾಂಡುರಂಗಶೆಟ್ಟಿ4) ನಾಸೀರ್ ಅಹಮದ್ 5) ಮಹಮದ್ 6) ಹೊಯ್ಸಳರಾಜು ಇವರುಗಳನ್ನು ವಶಕ್ಕೆ ಪಡೆದು ಅವರುಗಳ ಬಳಿಯಿದ್ದ 52 ಇಸ್ಪೀಟ್ ಎಲೆಗಳು, ಒಂದು  ನೀಲಿ ಬಣ್ಣದ ಪ್ಲಾಸ್ಟಿಕ್ ಕವರ್ ಹಾಗೂ 24,470 /- ರೂ ನಗದು ಹಣವನ್ನು ಅಮಾನತ್ತುಪಡಿಸಿಕೊಂಡು ಆರೋಪಿತರ ವಿರುದ್ದ ಸಿ.ಇ.ಎನ್  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಐ.  ರಕ್ಷಿತ್  ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಸಿ.ಇ.ಎನ್. ಪೊಲೀಸ್ ಠಾಣೆ.

ದಿನಾಂಕ 19-09-2021 ರಂದು 20-00 ಗಂಟೆ ಸಮಯದಲ್ಲಿ ಚಿಕ್ಕಮಗಳೂರು- ಬೇಲೂರು ರಸ್ತೆಯಲ್ಲಿರುವ ಪಾರ್ಕ್ ಇನ್ ಲಾಡ್ಜ್ ನ 2 ನೇ ಅಂತಸ್ತಿನಲ್ಲಿರುವ ಕೊಠಡಿ ನಂಬರ್ 207 ರಲ್ಲಿ ಅಕ್ರಮವಾಗಿ ಜೂಜಾಟವಾಡುತ್ತಿದ್ದ 1) ಅಬ್ದುಲ್ ಅಜೀಜ್ 2) ಶಿವಕುಮಾರ್ 3) ಪ್ರಸನ್ನಕುಮಾರ್ 4) ವಿರೂಪಾಕ್ಷ 5) ರಿಚರ್ಡ್ ಡಿಸೋಜಾ 6) ಸಜೀತ್  ಇವರುಗಳನ್ನು ವಶಕ್ಕೆ ಪಡೆದು ಅವರುಗಳ ಬಳಿಯಿದ್ದ 52 ಇಸ್ಪೀಟ್ ಎಲೆಗಳು, ಒಂದು  ಮಾಸಲು ಬಣ್ಣದ ಬೆಡ್ ಶೀಟ್  ಹಾಗೂ 41,390 /- ರೂ ನಗದು ಹಣವನ್ನು ಅಮಾನತ್ತುಪಡಿಸಿಕೊಂಡು ಆರೋಪಿತರ ವಿರುದ್ದ ಸಿ.ಇ.ಎನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಐ .ರಕ್ಷಿತ್ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಅಕ್ರಮ ಮದ್ಯ ಮಾರಾಟ   ಪ್ರಕರಣ.

ಮೂಡಿಗೆರೆ  ಪೊಲೀಸ್ ಠಾಣೆ,

ದಿನಾಂಕ 19-09-2021 ರಂದು ಸಂಜೆ 04-40 ಗಂಟೆ ಸಮಯದಲ್ಲಿ ಮಾಕೋನಹಳ್ಳಿ ಎಸ್.ಬಿ.ಐ ಬ್ಯಾಂಕ್ ಹತ್ತಿರವಿರುವ ನಾಗಲಾಪುರ ವಾಸಿ ಚಂದ್ರಯ್ಯ ಬಿನ್ ಲೇಟ್ ಭೀಷ್ಮಯ್ಯರವರು ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದವರನ್ನು  ಮದ್ಯದ ಪೌಚ್ಗಳನ್ನು ವಶಕ್ಕೆ ಪಡೆದು ಆರೋಪಿ ಚಂದ್ರಯ್ಯನ ವಿರುದ್ದ ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ರವಿ.ಜಿ.ಎ. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ

ಇತ್ತೀಚಿನ ನವೀಕರಣ​ : 20-09-2021 06:11 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080