ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ   ಪ್ರಕರಣ.
ಅಜ್ಜಂಪುರ  ಪೊಲೀಸ್ ಠಾಣೆ,
ದಿನಾಂಕ 20-09-2021 ರಂದು ಬೆಳಗ್ಗೆ 09-30 ಗಂಟೆ ಸಮಯದಲ್ಲಿ ಹೊಸಳ್ಳಿ ತಾಂಡ್ಯದ ಊರ ಮುಂದೆ ಹೋಗಿ ರಸ್ತೆ ಬದಿಯಲ್ಲಿ  ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದ ರಘುನಾಯ್ಕ ಬಿನ್ ಹೇಮ್ಲಾನಾಯ್ಕ ಹೊಸಳ್ಳಿ ತಾಂಡ್ಯ  ಈತನನ್ನು ವಶಕ್ಕೆ ಪಡೆದು, 180 ಎಂ.ಎಲ್ ನ ಬ್ಯಾಗ್ ಪೇಪರ್ನ 22 ಟೆಟ್ರಾ ಪೌಚ್ ಹಾಗೂ 90 ಎಂ.ಎಲ್ ನ 90 ಕ್ಯಾಪ್ಟನ್ ಮಾರ್ಟಿನ್ ವಿಸ್ಕಿ ಹಾಗೂ 180 ಎಂ.ಎಲ್ ನ 21 ಓಲ್ಡ್ ತವೆರಿನ್ ಟೆಟ್ರಾ ಪೌಚ್ ಗಳನ್ನು ಅಮಾನತ್ತುಪಡಿಸಿಕೊಂಡು ,ಆರೋಪಿ ರಘುನಾಯ್ಕನ  ವಿರುದ್ದ ಅಜ್ಜಂಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಕೃಷ್ಣಾನಾಯ್ಕ, ಪಿ.ಎಸ್.ಐ.   ತರೀಕೆರೆ ಪೊಲೀಸ್ ಠಾಣೆ  ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ.
ಕಡೂರು ಪೊಲೀಸ್ ಠಾಣೆ.
ದಿನಾಂಕ 20-09-2021 ರಂದು ಮಾಲತೇಶ ರವರು ನೀಡಿದ ದೂರಿನ ಸಾರಾಂಶವೇನೆಂದರೆ ಈ ದಿವಸ ದಿನಾಂಕ 20-09-2021 ರಂದು ಮದ್ಯಾಹ್ನ 02-00 ಗಂಟೆ ಸಮಯದಲ್ಲಿ ನನ್ನ ದೊಡ್ಡಪ್ಪನಾದ ರೇವಣ್ಣರವರು ಕೆಎ-66 ಹೆಚ್- 8311 ಟಿವಿಎಸ್ ನಲ್ಲಿ ರ್ಸತೆಯ ಎಡಬದಿಯಲ್ಲಿ ಕಡೂರು ಕಡೆಯಿಂದ ಬರುತ್ತಿರುವಾಗ್ಗೆ , ಕಡೂರು ಕಡೆಯಿಂದ ಬಂದ ಕೆಎ-35 ಎಫ್- 416 ಕೆಎಸ್ ಆರ್ಟಿಸಿ ಬಸ್ಸಿನ ಚಾಲಕ ಬಸ್ಸನ್ನು ಅತಿವೇಗ ಹಾಗೂ ಅಜಾಗರೂಗತೆಯಿಂದ ಚಾಲನೆ ಮಾಡಿಕೊಂಡು ಬಂದು ಟಿವಿಎಸ್ ಗೆ ಡಿಕ್ಕಿ ಹೊಡೆಸಿದ ಪರಿಣಾಮ ರೇವಣ್ಣರವರು ಕೆಳಗೆ ಬಿದ್ದಿದ್ದು ತಲೆಗೆ ತೀವ್ರ ತರಹದ ಪೆಟ್ಟಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ. ಬಸ್ಸಿನ ಚಾಲಕ ಎಂ.ತೋಟಿಗೇರ್ ರವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಕಡೂರು  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ

 

ಇತ್ತೀಚಿನ ನವೀಕರಣ​ : 21-09-2021 06:56 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080