ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ .

ಬಾಳೂರು  ಪೊಲೀಸ್ ಠಾಣೆ.

ದಿನಾಂಕ 21/06/2021 ರಂದು ಹುಯಿಲುಮನೆ ಗ್ರಾಮದ ಸುಧಾಕರಗೌಡ ಬಿನ್ ಲಕ್ಕೇಗೌಡ  ಎಂಬುವವರು ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾರೆಂದು ಮಾಹಿತಿ ಬಂದ ಮೇರೆಗೆ ದಾಳಿ ನಡೆಸಿದ್ದು ಆರೋಪಿಯು ಅಂಗಡಿಯ ಮುಂಭಾಗದಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದು ಸುಧಾಕರಗೌಡನನ್ನು ವಶಕ್ಕೆ ಪಡೆದು, ಆತನ ಬಳಿಯಿದ್ದ  ರಟ್ಟಿನ ಬಾಕ್ಸ್ಗಳನ್ನು ಪರಿಶೀಲಿಸಲಾಗಿ 90 ಎಂ.ಎಲ್ ನ ಒರಿಜಿನಲ್ ಚಾಯ್ಸ್ ಡಿಲೆಕ್ಸ್  ವಿಸ್ಕಿಯ  134  ಮದ್ಯದ ಪೌಚ್ ಗಳಿದ್ದು ,ಮದ್ಯದ ಅಂದಾಜು ಬೆಲೆ 4707/- ರೂ ಆಗಿದ್ದು ,ಕೊವಿಡ್-19 ಸಾಂಕ್ರಾಮಿಕ ರೋಗವು ಹರಡುತ್ತಿರುವ ಹಿನ್ನೆಲೆಯಲ್ಲಿ ಸಕರ್ಾರವು ಹೊರಡಿಸಿರುವ ಆದೇಶಗಳನ್ನು ಉಲ್ಲಂಘಿಸಿ ಯಾವುದೇ ಪರವಾನಗಿಯನ್ನು ಹೊಂದದೆ, ಸಾರ್ವಜನಿಕರನ್ನು ಗುಂಪುಸೇರಿಸಿಕೊಂಡು ಅಕ್ರಮವಾಗಿ ಮದ್ಯವನ್ನು  ಮಾರಾಟ ಮಾಡುತ್ತಿದ್ದ  ಆರೋಪಿತನ  ವಿರುದ್ದ ಬಣಕಲ್  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ  ಪಿಎಸ್ಐ. ರೇಣುಕಮ್ಮ  ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಅಕ್ರಮ ಮಟ್ಕಾ ಜೂಜಾಟ  ಪ್ರಕರಣ

ತರೀಕೆರೆ  ಪೊಲೀಸ್ ಠಾಣೆ

ದಿನಾಂಕ 21/06/2021 ರಂದು ತರೀಕೆರೆ ಠಾಣಾ ಸರಹದ್ದಿನಲ್ಲಿ ಗಸ್ತು ಮಾಡುತ್ತಿರುವಾಗ ತರೀಕೆರೆ ಟೌನ್ನ  ಕೋಡಿಕ್ಯಾಂಪ್  4 ನೇ ಕ್ರಾಸ್ ಬೋವಿಕಾಲೋನಿ ಹುಲುಗಮ್ಮ ದೇವಾಲಯದ ಮುಂಭಾಗದ ರಸ್ತೆಯಲ್ಲಿ  ಅಕ್ರಮವಾಗಿ ಮಟ್ಕಾ  ಪಣವಾಗಿಟ್ಟುಕೊಂಡು ಜೂಜಾಟವಾಡುತ್ತಿದ್ದಾರೆಂದು ಬಂದ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು ತರೀಕೆರೆ ಟೌನ್ನ  ಕೋಡಿಕ್ಯಾಂಪ್  4 ನೇ ಕ್ರಾಸ್ ಬೋವಿಕಾಲೋನಿ ಹುಲುಗಮ್ಮ ದೇವಾಲಯದ ಮುಂಭಾಗದ ರಸ್ತೆಯಲ್ಲಿ  ಅಕ್ರಮವಾಗಿ ಮಟ್ಕಾ ಜೂಜಾಟವಾಡುತ್ತಿದ್ದು ಮಟ್ಕಾ ಜೂಜಾಟ ಆಡಿಸುತ್ತಿದ್ದವನ ಹೆಸರು ವಿಳಾಸ ಕೇಳಲಾಗಿ ಕೃಷ್ಣ ಬಿನ್ ಲೇಟ್ ತಿಮ್ಮಬೋವಿ. ತರೀಕೆರೆ ಟೌನ್ ವಾಸಿ ಎಂದು ತಿಳಿಸಿದ್ದು  ಕಾನೂನು ಬಾಹಿರವಾಗಿ ಮಟ್ಕಾ  ಜೂಜಾಟವಾಡುತ್ತಿದ್ದ ಆರೋಪಿಯನ್ನು ವಶಕ್ಕೆ  ಪಡೆದು ಆತನ  ವಶದಲ್ಲಿದ್ದ ಒಂದು ಮಟ್ಕಾ ಚೀಟಿ, ಒಂದು ಪೆನ್ ಹಾಗೂ 920/-ರೂ ನಗದು ಹಣವನ್ನು ವಶಕ್ಕೆ ಪಡೆದು ಆರೋಪಿತನ  ವಿರುದ್ದ ತರೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ರಾಘವೇಂದ್ರ. ಪಿ.ಐ. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಅಪಘಾತ ಪ್ರಕರಣ .

ಸಂಚಾರ  ಪೊಲೀಸ್ ಠಾಣೆ

ದಿನಾಂಕ 22/06/2021 ರಂದು ಅಶೋಕ್ ಕುಮಾರ್, ವಿಜಯನಗರ, ಚಿಕ್ಕಮಗಳೂರು ವಾಸಿರವರು ನೀಡಿದ ದೂರಿನ ಸಾರಾಂಶವೇನೆಂದರೆ ದಿನಾಂಕ 20-06-2021 ರಂದು ಪಿರ್ಯಾದಿಯ ಸ್ನೇಹಿತರಾದ ಮಧುಕರ್ ರವರು ತಮ್ಮ ಬಾಬ್ತು ಕೆಎ-18 ಇಎಫ್ -8509 ಬೈಕಿನಲ್ಲಿ ತನ್ನ ಸ್ನೇಹಿತನಾದ ನಿತೀನ್ ರವರನ್ನು  ಕೂರಿಸಿಕೊಂಡು ಬೇಲೂರು ರಸ್ತೆಯ ಶ್ರೀಕೃಷ್ಣ ಶಾಮಿಯಾನದ ಮುಂಭಾಗದ ರಸ್ತೆಯಲ್ಲಿ ಹೋಗುತ್ತಿರುವಾಗ ಹಿಂಬದಿಯಿಂದ ಬಂದ ಕೆಎ-08ಎಂ-1528 ಶಿಪ್ಟ್ ಕಾರಿನ ಚಾಲಕ ಕಾರನ್ನು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಬೈಕಿಗೆ ಡಿಕ್ಕಿ ಹೊಡೆಸಿದ  ಪರಿಣಾಮ ಮಧುಕರ್ ಹಾಗೂ ನಿತೀನ್ ರವರ ತಲೆಗೆ , ಕೈಕಾಲುಗಳಿಗೆ ಪೆಟ್ಟಾಗಿದ್ದು ಕಾರಿನ ಚಾಲಕನ ವಿರುದ್ದ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 25-06-2021 06:36 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080