ಅಭಿಪ್ರಾಯ / ಸಲಹೆಗಳು

ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ

ಸಂಚಾರ   ಪೊಲೀಸ್ ಠಾಣೆ.

ದಿನಾಂಕ: 22/07/2021 ರಂದು ಪಿರ್ಯಾದಿ ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನಲ್ಲಿ ದಿನಾಂಕ 22/07/2021 ರಂದು ತರೀಕೆರೆಯಿಂದ ಬೇಲೂರಿಗೆ  ಹೋಗಲೆಂದು ಕೆಎ-05 ಎಂಎಸ್- 4137 ಇನ್ನೋವ ಕಾರಿನಲ್ಲಿ ಬರುತ್ತಿರುವಾಗ ಬೆಳಗಿನ ಜಾವ ಸುಮಾರು 05-30 ಗಂಟೆ ಸಮಯದಲ್ಲಿ ಚಿಕ್ಕಮಗಳೂರಿನ ಮೌಂಟೆನ್ ವ್ಯೂ ಶಾಲೆಯ ಸಮೀಪ ಕಾರಿನ ಚಾಲಕ ಕಾರನ್ನು   ಅತಿವೇಗ ಹಾಗೂ ಅಜಾಗರೂಕತೆಯಿಂದ  ಚಾಲನೆ ಮಾಡಿಕೊಂಡು ರಸ್ತೆಯ ಬಲಭಾಗದ ಮರಕ್ಕೆ ಡಿಕ್ಕಿ ಹೊಡೆಸಿದ ಪರಿಣಾಮ ಕಾರಿನಲ್ಲಿದ್ದ ರಾಮಸ್ವಾಮಿ, 72 ವರ್ಷ ಇವರಿಗೆ ತಲೆಗೆ , ಕೈಕಾಲುಗಳಿಗೆ ಪೆಟ್ಟಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಅಂಬ್ಯುಲೆನ್ಸ್ ನಲ್ಲಿ ಕರೆದುಕೊಂಡು ಹೋಗುವಾಗ ಮಾರ್ಗ ಮದ್ಯೆದಲ್ಲಿ ಮೃತಪಟ್ಟಿರುತ್ತಾರೆ, ರಾಮು, 60 ವರ್ಷ, ಹಾಗೂ ಚಾಲಕ ರವಿಕಿರಣ್ ರವರಿಗೂ ಸಹ ಪೆಟ್ಟಾಗಿರುತ್ತೆ. ಅಪಘಾತ ಪಡಿಸಿದ ವಾಹನದ ಚಾಲಕನ ಮೇಲೆ ಕ್ರಮ  ಕೈಗೊಳ್ಳಲು ನೀಡಿದ ದೂರಿನ ಮೇರೆಗೆ ಸಂಚಾರ  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಕರ್ನಾಟಕ ಜಾನುವಾರು  ಹತ್ಯಾ ಪ್ರತಿಬಂಧಕ ಸಂರಕ್ಷಣಾ ಆದ್ಯಾದೇಶ

ಗ್ರಾಮಾಂತರ  ಪೊಲೀಸ್ ಠಾಣೆ

 ದಿನಾಂಕ 22-07-2021 ರಂದು ಐ.ಜಿ. ಬಡಾವಣೆಯಲ್ಲಿ ರೌಂಡ್ಸ್ ನಲ್ಲಿರುವಾಗ ಚಿಕ್ಕಮಗಳೂರು- ಮಲ್ಲಂದೂರು ರಸ್ತೆಯಲ್ಲಿನ ಇಂದಾವರದಿಂದ ಮುಂದೆ ಮಲ್ಲಂದೂರು ಕಡೆಗೆ ಗೂಡ್ಸ್ ವಾಹನದಲ್ಲಿ ಜಾಣುವಾರುಗಳನ್ನು ತುಂಬಿಕೊಂಡು ಹೋಗುತ್ತಿರುವುದಾಗಿ  ಮಾಹಿತಿ ಬಂದ ಮೇರೆಗೆ ಸ್ಥಳಕ್ಕೆ ಹೋಗಿದ್ದು ಕೆಎ- 51 ಡಿ- 5044 ಗೂಡ್ಸ್ ವಾಹನವನ್ನು ತಡೆದು ನಿಲ್ಲಿಸಲಾಗಿ ಚಾಲಕ ಓಡಿಹೋಗಿದ್ದು ವಾಹನದಲ್ಲಿದ್ದ  ಮತ್ತೊಬ್ಬ ಆಸಾಮಿಯನ್ನು ವಶಕ್ಕೆ ಪಡೆಯಲಾಗಿ ಆತನ ಹೆಸರು ಸಾದಿಕ್ ಆಗಿದ್ದು ಗೂಡ್ಸ್ ವಾಹನವನ್ನು ಪರಿಶೀಲಿಸಲಾಗಿ ವಾಹನದ ಹಿಂಭಾಗದ ಬಾಡಿಯಲ್ಲಿ ಸುಮಾರು 20000/-ರೂ ಬೆಲೆಯ ದನಗಳನ್ನು ಹಿಂಸಾತ್ಮಕವಾಗಿ ತುಂಬಿದ್ದು ಈ ಬಗ್ಗೆ ಸಾದಿಕ್ ನನ್ನು ವಿಚಾರ ಮಾಡಲಾಗಿ ಗಾಳಿಪೇಟೆ ಗ್ರಾಮದ ಹರ್ಷದ್ ರವರಿಗೆ ಮಾರಾಟ ಮಾಢಲು ತೆಗೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದು , ಯಾವುದೇ ಪರವಾನಗಿಯನ್ನು ಹೊಂದದೆ ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಕೊಂಡು ಕಡಿದು ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿದ್ದರಿಂದ ಆರೋಪಿ ವಿರುದ್ದ  ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಐ.ಸ್ವರ್ಣ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

 

 

ಇತ್ತೀಚಿನ ನವೀಕರಣ​ : 22-07-2021 06:23 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080