ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಸಾಗಾಣಿಕೆ  ಪ್ರಕರಣ

ಅಲ್ದೂರು ಪೊಲೀಸ್ ಠಾಣೆ.

ದಿನಾಂಕ:21-06-2022 ರಂದು ರಾತ್ರಿ 10.00 ಗಂಟೆ ಸಮಯದಲ್ಲಿ ಅಲ್ದೂರು ಪೊಲೀಸ್ ಠಾಣಾ ಸರಹದ್ದಿನ ಅಂಬೇಡ್ಕರ್ ವೃತ್ತದ ಬಳಿ ಕೆಎ-18-ಇಹೆಚ್-7927 ಸ್ಕೂಟಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲು ಮದ್ಯವನ್ನು ಸಾಗಾಣಿಕೆ ಮಾಡುತ್ತಿದ್ದ, ಆನಂದ ಬಿ. ಈ. ಬಿನ್ ಈರಯ್ಯ , ವಾಸ ಬಸರವಳ್ಳಿ ಗ್ರಾಮ ಆವತಿ ಹೋಬಳಿ  ಈತನನ್ನು  ವಶಕ್ಕೆ ಪಡೆದು, ಅರೋಪಿತನ ವಶದಲ್ಲಿ ಇದ್ದ 90 ಎಂ.ಎಲ್. ನ 50 ಟೆಟ್ರಾಪ್ಯಾಕ್ ಮದ್ಯವನ್ನು ಅಂದಾಜು ಬೆಲೆ 1756/- ರೂ ಅಗಿದ್ದು ಸ್ಕೂಟಿಯನ್ನು ಮತ್ತು ಮದ್ಯವನ್ನು ಅಮಾನತ್ತುಪಡಿಸಿಕೊಂಡಿದ್ದು, ಆರೋಪಿತನ ವಿರುದ್ದ ಅಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಅಲ್ದೂರು ಠಾಣಾ ಪಿ.ಎಸ್.ಐ. ಶಿವರುದ್ರಮ್ಮ. ಎಸ್. ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಸಖರಾಯಪಟ್ಟಣ.

ದಿನಾಂಕ:21-06-2022 ರಂದು 17.30 ಗಂಟೆ ಸಮಯದಲ್ಲಿ ಸಖರಾಯಪಟ್ಟಣ ಪೊಲೀಸ್ ಠಾಣಾ ಸರಹದ್ದಿನ ಪಿಳ್ಳೇನಹಳ್ಳಿ ಕ್ರಾಸ್ ಬಳಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲು ಮದ್ಯವನ್ನು ಸಾಗಾಣಿಕೆ ಮಾಡುತ್ತಿದ್ದ, ಎಲ್. ಶೇಖರನಾಯ್ಕ ಬಿನ್ ಲೇಟ್ ಲಕ್ಷ್ಮಣ ನಾಯ್ಕ, ವಾಸ ಪಿಳ್ಳೇನಹಳ್ಳಿ ಗ್ರಾಮ ಈತನನ್ನು  ವಶಕ್ಕೆ ಪಡೆದು, ಅರೋಪಿತನ ವಶದಲ್ಲಿ ಇದ್ದ 90 ಎಂ.ಎಲ್. ನ 50 ಟೆಟ್ರಾಪ್ಯಾಕ್ ಮದ್ಯವನ್ನು ಅಂದಾಜು ಬೆಲೆ  1756/- ರೂ ಅಗಿದ್ದು  ಮದ್ಯವನ್ನು ಅಮಾನತ್ತುಪಡಿಸಿಕೊಂಡಿದ್ದು, ಆರೋಪಿತನ ವಿರುದ್ದ ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಸಖರಾಯಪಟ್ಟಣ ಠಾಣಾ ಪಿ.ಎಸ್.ಐ. ಎನ್.ಪಿ. ನವೀನ  ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ

ಸಖರಾಯಪಟ್ಟಣ.

ದಿನಾಂಕ:22-06-2022 ರಂದು 7.10 ಗಂಟೆ ಸಮಯದಲ್ಲಿ ಸಖರಾಯಪಟ್ಟಣ ಪೊಲೀಸ್ ಠಾಣಾ ಸರಹದ್ದಿನ ಕುರಿಚಿಕ್ಕನಹಳ್ಳಿ ಕ್ರಾಸ್ ಬಳಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ, ಲೋಕೇಶ ಬಿನ್ ದಿ;ರಂಗೇಗೌಡ, ವಾಸ ಕುರಿಚಿಕ್ಕನಹಳ್ಳಿ ಗ್ರಾಮ ಈತನನ್ನು  ವಶಕ್ಕೆ ಪಡೆದು, ಅರೋಪಿತನ ವಶದಲ್ಲಿ ಇದ್ದ 90 ಎಂ.ಎಲ್. ನ 40 ಟೆಟ್ರಾಪ್ಯಾಕ್ ಮದ್ಯವನ್ನು ಅಂದಾಜು ಬೆಲೆ 1405 /- ರೂ ಅಗಿದ್ದು  ಮದ್ಯವನ್ನು ಅಮಾನತ್ತುಪಡಿಸಿಕೊಂಡಿದ್ದು, ಆರೋಪಿತನ ವಿರುದ್ದ ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಸಖರಾಯಪಟ್ಟಣ ಠಾಣಾ ಪಿ.ಎಸ್.ಐ. ಎನ್.ಪಿ. ನವೀನ  ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ

ಕಳ್ಳತನ ಪ್ರಕರಣ

ನ.ರಾ. ಪುರ ಪೊಲೀಸ್ ಠಾಣೆ.

ದಿನಾಂಕ;21/06/2022 ರಂದು ಪಿರ್ಯಾದಿ ನಾಗರಾಜ ಬಿನ್ ಈರಪ್ಪ, ಸಿಂಸೆ ಬೋವಿ ಕಾಲೋನಿ, ಈಚಿಕೆರೆ ಗ್ರಾಮ ನ.ರಾ.ಪುರ ವಾಸಿ ನೀಡಿದ ದೂರಿನಲ್ಲಿ ಪಿರ್ಯಾದಿ ಮಡಬೂರು ಗ್ರಾಮದ ಗರನಕೊಪ್ಪದ ಬಳಿ ಬಸ್ ನಿಲ್ದಾಣದ ಹತ್ತಿರ ನ.ರಾಪುರದ ಶಿವಮೊಗ್ಗ ರಸ್ತೆಯಲ್ಲಿ ತಡೆ ಗೋಡೆ ಕಾಮಗಾರಿ ಮಾಡಲು, ಅದಕ್ಕಾಗಿ 50 ಕಬ್ಬಿಣದ ಸೆಂಟ್ರಿಂಗ್ ಶೀಟ್ ಗಳನ್ನು ಬಾಡಿಗೆಗೆ ತೆಗೆದುಕೊಂಡು ಬಂದಿದ್ದು, ದಿನಾಂಕ;19/06/2022 ರಂದು ಕೆಲಸ ಮಾಡಿ ಬಂದಿದ್ದು ದಿನಾಂಕ;20/06/2022 ರಂದು ಮನೆಗೆ ಬೀಗ ಹಾಕಿಕೊಂಡು ಹೋಗಿದ್ದು, ದಿನಾಂಕ;20/06/2022 ರಂದು ನೋಡಲಾಗಿ  ಯಾರೋ ಕಳ್ಳರು ಸೆಂಟ್ರೀಂಗ್ ಶೀಟ್ ಗಳನ್ನು ಅಂದಾಜು ಬೆಲೆ 50,000/- ರೂ ಗಳಾಗಿದ್ದು, ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ, ಕಳ್ಳರನ್ನು ಪತ್ತೆ ಮಾಡಿ ಕಳುವಾಗಿರುವ ಸೆಂಟ್ರಿಂಗ್ ಶೀಟ್ ಗಳನ್ನು ಪತ್ತೆ ಮಾಡಿಕೊಡುವಂತೆ ನೀಡಿದ ದೂರಿನ ಮೇರೆಗೆ  ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಮನುಷ್ಯ ಕಾಣೆ ಪ್ರಕರಣ

ತರೀಕೆರೆ ಪೊಲೀಸ್ ಠಾಣೆ.

ದಿನಾಂಕ;21/06/2022 ರಂದು ಪಿರ್ಯಾದಿ ರಾಘವೇಂದ್ರ ಬಿನ್ ಚಿಕ್ಕಿರಣ್ಣ  ವಾಸ ತುದಿಪೇಟೆ, ತರೀಕೆರೆ ಇವರು ನೀಡಿದ ದೂರಿನಲ್ಲಿ ಪಿರ್ಯಾದಿಯ ಮಗಳು ಯಶಸ್ವಿನಿ ಇವಳು ದಿನಾಂಕ; 21/06/2022 ರಂದು ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಿಂದ ಹೋದವಳು, ವಾಪಾಸ್ಸು ಮನೆಗೆ ಬಾರದೇ ಕಾಣೆಯಾಗಿದ್ದು, ಈವರೆಗೆ ಹುಡಕಲಾಗಿ ಪತ್ತೆಯಾಗಿರುವುದಿಲ್ಲ. ಕಾಣೆಯಾಗಿರುವ ಮಗಳು ಯಶಸ್ವಿನಿ, 19 ವರ್ಷ,  5.5 ಅಡಿ ಎತ್ತರ, ದುಂಡುಮುಖ,  ಗೋದಿ ಮೈ ಬಣ್ಣ, ಕಪ್ಪು ಕೂದಲು, ಕನ್ನಡ, ಇಂಗ್ಲಿಷ್ ಬಾಷೆ ಮಾತಾನಾಡುತ್ತಾಳೆ,  ಡಾರ್ಕ್ ಬ್ಲೂ ಬಣ್ಣದ ಕೋಟ್ ಮತ್ತು ಪ್ಯಾಂಟ್ ಚೆಕ್ಸ್ ಶರಟು ಧರಿಸಿರುತ್ತಾರೆ. ಕಾಣೆಯಾಗಿರುವ ಮಗಳು ಯಶಸ್ವಿನಿ ರವರನ್ನು ಪತ್ತೆ ಮಾಡಿ ಕೊಡುವಂತೆ ನೀಡಿದ ದೂರಿನ ಮೇರೆಗೆ ತರೀಕೆರೆ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 22-06-2022 06:09 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080