ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ

ಬಣಕಲ್  ಪೊಲೀಸ್ ಠಾಣೆ.

ದಿನಾಂಕ:22-02-2022 ರಂದು ಬಣಕಲ್ ಠಾಣಾ ಸರಹದ್ದಿನ ಬಗ್ಗಸಗೋಡು ಗ್ರಾಮ ವಾಸಿ ಸಣ್ಣೇಗೌಡ ಬಿನ್ ಬೈರೇಗೌಡ  ಎಂಬುವನು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು ಅರೋಪಿಯನ್ನು ವಶಕ್ಕೆ ಪಡೆದು ಆರೋಪಿ ವಶದಲ್ಲಿ 90 ಎಂ.ಎಲ್.ನ 28 ಟೆಟ್ರಾಪ್ಯಾಕ್ ಮದ್ಯ ಅಂದಾಜು ಬೆಲೆ 983/- ರೂ ಅಗಿದ್ದು ಮಧ್ಯವನ್ನು ಅಮಾನತ್ತುಪಡಿಸಿಕೊಂಡು ಬಂದು  ಬಣಕಲ್  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಪಿ.ಎಸ್.ಐ. ಶ್ರೀಮತಿ ಗಾಯಿತ್ರಿ  ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಅಕ್ರಮ ಮಟ್ಕಾ ಜೂಜಾಟ ಪ್ರಕರಣ

 ಮೂಡಿಗೆರೆ ಪೊಲೀಸ್ ಠಾಣೆ.

ದಿನಾಂಕ:22-02-2022 ರಂದು ಮೂಡಿಗೆರೆ ಠಾಣಾ ಸರಹದ್ದಿನ ಬಿಳಗುಳ ಗ್ರಾಮ ವಾಸಿ ಇಸ್ಮಾಯಿಲ್ ಬಿನ್ ಬಾಬು ಸಾಹೇಬ್ ಎಂಬುವನು ಅಕ್ರಮವಾಗಿ ಮಟ್ಕಾ ಜೂಜಾಟ ಆಡಿಸುತ್ತಿದ್ದ್ದು ಅರೋಪಿಯನ್ನು ವಶಕ್ಕೆ ಪಡೆದು ಆರೋಪಿ ವಶದಲ್ಲಿ 1200/- ರೂ ನಗದು ಹಣ , ಒಂದು ಮಟ್ಕಾ ಚೀಟಿ, ಒಂದು ಬಾಲ್ ಪೆನ್ ಅನ್ನು ಅಮಾನತ್ತುಪಡಿಸಿಕೊಂಡು ಬಂದು  ಮೂಡಿಗೆರೆ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಮೂಡಿಗೆರೆ ಸಿ.ಪಿ.ಐ. ಶ್ರೀ ಸೋಮಶೇಖರ್ ಜೆ.ಸಿ. ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

 ಕಳ್ಳತನ ಪ್ರಕರಣ

 ಬಸವನಹಳ್ಳಿ ಪೊಲೀಸ್ ಠಾಣೆ.

ದಿನಾಂಕ 22-02-2022 ರಂದು ಬಸವನಹಳ್ಳಿ ಠಾಣಾ ಸರಹದ್ದಿನ ಮಲ್ಲಂದೂರು ರಸ್ತೆ ಉಪ್ಪಳ್ಳಿ ವಾಸಿ ಚೇತನ್ ಎಸ್ ಬಿನ್ ಸೋಮಶೇಖರ ರವರು ನೀಡಿದ ದೂರಿನಲ್ಲಿ ದಿನಾಂಕ;22-02-2022 ರಂದು ಪಿರ್ಯಾದಿಯವರ ಬಾಬ್ರತು ಮೈಲಾರಲಿಂಗೇಶ್ವರ ಟ್ರೇಡರ್ಸ್ ಸಿಮೆಂಟ್ ಅಂಗಡಿಯನ್ನು ಬೆಳಿಗ್ಗೆ 11.30 ಗಂಟೆಗೆ ಅಂಗಡಿಯಿಂದ ಹೊರಗಡೆ ಹೋಗಿದ್ದು 12.15 ಗಂಟೆಗೆ ವಾಪಾಸ್ಸು ಅಂಗಡಿಗೆ ಬಂದು ನೋಡಿದಾಗ ಅಂಗಡಿಯ ಕ್ಯಾಶ್ ಟೇಬಲ್ ನ್ನು ಯಾರೋ ಕಳ್ಳರು ಲಾಕ್ ಮುರಿದು 4 ಲಕ್ಷ ರೂ ಹಣ ಕಳ್ಳತನ ಮಾಡಿಕೊಂಡು ಹೋಗಿದ್ದು ಕಳುವಾಗಿರುವ ಹಣವನ್ನು ಪತ್ತೆ ಮಾಡಿಕೊಡುವಂತೆ ಕೋರಿ ನೀಡಿದ ದೂರನ್ನು ಸ್ವೀಕರಿಸಿ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

 ಮನುಷ್ಯ ಕಾಣೆ ಪ್ರಕರಣ

 ಮಹಿಳಾ ಪೊಲೀಸ್ ಠಾಣೆ.

 ದಿನಾಂಕ 22-02-2022 ರಂದು ರಾತ್ರಿ ಪಿರ್ಯಾದಿ ಶ್ರೀಮತಿ ಮಂಜಮ್ಮ ಕೋಂ ಸಿ.ಜಿ.ಗುರುವ ರವರು ನೀಡಿದ ದೂರಿನಲ್ಲಿ ಪಿರ್ಯಾದಿ ಮಗಳು ಪ್ರೇಮ ಇವಳು ದಿನಾಂಕ 21-02-2022 ರಂದು ಬೆಳಿಗ್ಗೆ 9.30 ಗಂಟೆಗೆ ಕೆಲಸಕ್ಕೆ ಗೋಕುಲ್ ಎಲೆಕ್ಟ್ರಾನಿಕ್ಸ್ ರವರು ಹೋದವಳು ಮದ್ಯಾಹ್ನ ದಿನನಿತ್ಯ ಊಟಕ್ಕೆ ಬರುತ್ತಿದ್ದವಳು ವಾಪಾಸ್ಸು ಮನೆಗೆ ಬಾರದೇ ಇದ್ದು ಎಲ್ಲಾ ಕಡೆ ಹುಡುಕಾಡಿದರೂ ಸಹ ಪತ್ತೆಯಾಗಿರುವುದಿಲ್ಲ. ಕು; ಪ್ರೇಮ 23 ವರ್ಷ, 5 ಅಡಿ ಎತ್ತರ, ಕೋಲುಮುಖ, ಕೆಂಪು  ಮೈ ಬಣ್ಣ ಕನ್ನಡ ಮತ್ತು ತೆಲಗು ಮಾತಾನಾಡುತ್ತಾಳೆ. ಕಾಣೆಯಾಗಿರುವ ತನ್ನ ಮಗಳನ್ನು ಪತ್ತೆ ಮಾಡಿಕೊಡುವಂತೆ ನೀಡಿದ ದೂರಿನ ಮೇರೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. 

ಇತ್ತೀಚಿನ ನವೀಕರಣ​ : 23-02-2022 08:14 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080