ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ

ಬಾಳೆಹೊನ್ನೂರು ಪೊಲೀಸ್ ಠಾಣೆ.

ದಿನಾಂಕ:22-03-2022 ರಂದು ಬಾಳೆಹೊನ್ನೂರು ಠಾಣಾ ಸರಹದ್ದಿನ  ಮಾಗಲ ಗ್ರಾಮದ ವಾಸಿ ಸತೀಶ ಕೆ.  ಬಿನ್ ಕೃಷ್ಣಪ್ಪ ತನ್ನ ಮನೆಯ ಮುಂದೆ ಅಕ್ರವಾಗಿ ಮದ್ಯ ಮಾರಾಟ ಮಾಡುತ್ತಿದ್ದು , ಅರೋಪಿತನನ್ನು ವಶಕ್ಕೆ ಪಡೆದು ಆರೋಪಿಯು ಅಕ್ರಮವಾಗಿ ಹೊಂದಿದ್ದ 90 ಎಂ.ಎಲ್. ನ 80 ಟೆಟ್ರಾಪ್ಯಾಕ್ ಮದ್ಯವನ್ನು ಅಂದಾಜು ಬೆಲೆ 2810/- ರೂ ಹಾಗೂ ಮದ್ಯ ಮಾರಾಟ ಮಾಡಿದ ನಗದು ಹಣ 170/- ರೂ ವನ್ನು ಅಮಾನತ್ತುಪಡಿಸಿಕೊಂಡು ಬಂದು  ಅರೋಪಿತನ ವಿರುದ್ದ ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆ ಬಾಳೆಹೊನ್ನೂರು ಪಿ.ಎಸ್.ಐ. ನಿತ್ಯಾನಂದಗೌಡ  ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಗ್ರಾಮಾಂತರ ಪೊಲೀಸ್ ಠಾಣೆ.

ದಿನಾಂಕ:22-03-2022 ರಂದು ಗ್ರಾಮಾಂತರ ಠಾಣಾ ಸರಹದ್ದಿನ ಸಿಂದಿಗೆರೆ ಗ್ರಾಮ ವಾಸಿ ಸೋಮಶೇಖರ ಬಿನ್ ರಂಗಸ್ವಾಮಿ ಈತನು  ಭಕ್ತರಹಳ್ಳಿ ಗ್ರಾಮದ ಬಸ್ ನಿಲ್ದಾಣದ ಹತ್ತಿರ ಅಕ್ರವಾಗಿ ಮದ್ಯ ಮಾರಾಟ ಮಾಡುತ್ತಿದ್ದು , ಅರೋಪಿತನನ್ನು ವಶಕ್ಕೆ ಪಡೆದು ಆರೋಪಿಯು ಅಕ್ರಮವಾಗಿ ಹೊಂದಿದ್ದ 90 ಎಂ.ಎಲ್. ನ 11 ಟೆಟ್ರಾಪ್ಯಾಕ್ ಮದ್ಯವನ್ನು ಅಂದಾಜು ಬೆಲೆ 386/- ರೂ ಅಗಿದ್ದು ಮದ್ಯವನ್ನು ಅಮಾನತ್ತುಪಡಿಸಿಕೊಂಡು ಬಂದು  ಅರೋಪಿತನ ವಿರುದ್ದ ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆ ಗ್ರಾಮಾಂತರ ಠಾಣ ಪಿ.ಐ. ಶ್ರೀಮತಿ ಸ್ವರ್ಣ  ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಮನುಷ್ಯ ಕಾಣೆ ಪ್ರಕರಣ

ಮಹಿಳಾ ಪೊಲೀಸ್ ಠಾಣೆ.

ದಿನಾಂಕ:23/03/2022 ರಂದು ಪಿರ್ಯಾದಿ  ಸಚಿನ್ ಹೆಚ್.ಅರ್. ಬಿನ್ ರಾಮಚಂದ್ರ ಕೆಂಪನಹಳ್ಳಿ ಚಿಕ್ಕಮಗಳೂರು ವಾಸಿ ಇವರು ನೀಡಿದ ದೂರಿನಲ್ಲಿ ದಿನಾಂಕ:21/03/2022 ರಂದು ಪಿರ್ಯಾದಿ ಹೆಂಡತಿ ಅಶ್ವಿನಿ ಇವರು  ಮನೆಯಿಂದ ತಾಯಿ ಮನೆಗೆ  ಹೋಗಿ ಬರುವುದಾಗಿ ಹೇಳಿ ಹೋದವಳು ಈವರೆಗೂ ವಾಪಾಸ್ಸು ಬಂದಿರುವುದಿಲ್ಲ. ಎಲ್ಲಾ ಕಡೆ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ. ಕಾಣೆಯಾಗಿರುವ ತನ್ನ ಹೆಂಡತಿ ಶ್ರೀಮತಿ ಅಶ್ವಿನಿ, 21 ವರ್ಷ, 4.7 ಅಡಿ ಎತ್ತರ, ಕೋಲುಮುಖ, ಸಾದಾರಣ ಮೈ ಕಟ್ಟು , ಗೋದಿ ಮೈಬಣ್ಣ, ಕನ್ನಡ ಬಾಷೆ ಮಾತನಾಡುತ್ತಾರೆ. ಕಾಣೆಯಾಗಿರುವ ತನ್ನ ಹೆಂಡತಿಯನ್ನು ಪತ್ತೆ ಮಾಡಿಕೊಡಬೇಕಾಗಿ ಕೋರಿ ನೀಡಿದ ದೂರಿನ ಮೇರೆಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಬಾಳೆಹೊನ್ನೂರು ಪೊಲೀಸ್ ಠಾಣೆ.

ದಿನಾಂಕ:22/03/2022 ರಂದು ಪಿರ್ಯಾದಿ ಪಾರ್ವತಮ್ಮ ಕೊಂ ಚಂದ್ರಪ್ಪ  ಬಿನ್ ರಾಮಚಂದ್ರ ಬಾಸಪುರ ಎಸ್ಟೇಟ್ ಖಾಂಡ್ಯ ಹೋಬಳಿ ವಾಸಿ ಇವರು ನೀಡಿದ ದೂರಿನಲ್ಲಿ ದಿನಾಂಕ:20/03/2022 ರಂದು ಪಿರ್ಯಾದಿ ಮತ್ತು ಪಿರ್ಯಾದಿ ಮಗಳು ಅನಿತಾ  ಬಾಳೆಹೊನ್ನೂರು ಪಟ್ಟಣಕ್ಕೆ ಬಂದಿದ್ದು ಇವರು  ಬಸ್ ನಿಲ್ದಾಣದ ಬಳಿ ಅನಿತಾ ಮೂತ್ರ ವಿಸರ್ಜನೆಗೆ ಹೋಗಿ ಬರುವುದಾಗಿ ಹೇಳಿ ಹೋದವಳು ಈವರೆಗೂ ವಾಪಾಸ್ಸು ಬಂದಿರುವುದಿಲ್ಲ. ಎಲ್ಲಾ ಕಡೆ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ. ಕಾಣೆಯಾಗಿರುವ ತನ್ನ ಮಗಳು ಶ್ರೀಮತಿ ಅನಿತಾ, 19 ವರ್ಷ, ಇವಳನ್ನು ಪತ್ತೆ ಮಾಡಿಕೊಡಬೇಕಾಗಿ ಕೋರಿ ನೀಡಿದ ದೂರಿನ ಮೇರೆಗೆ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಕಳ್ಳತನ ಪ್ರಕರಣ

ಕೊಪ್ಪ ಪೊಲೀಸ್ ಠಾಣೆ.

ದಿನಾಂಕ 23-03-2022 ರಂದು ಪಿರ್ಯಾದಿ  ಬಿ.ಜೆ. ನಿರಂಜನ ಬಿನ್ ಲೇಟ್ ಜಯರಾಮ ಆಚಾರ್  ರಾಗೋಡು ತಲಮಕ್ಕಿ ವಾಸಿ ರವರು ನೀಡಿದ ದೂರಿನಲ್ಲಿ ದಿನಾಂಕ 19-03-2022 ರಂದು ಪಿರ್ಯಾದಿ ತಮ್ಮ ಹೆಂಡಿಯ ಚಿಕಿತ್ಸೆಗಾಗಿ ಕೊಪ್ಪದ ಅಸ್ಪತ್ರೆಗೆ ಹೋಗಿದ್ದು ಮನೆಗೆ ಬೀಗ ಹಾಕಿಕೊಂಡು ಹೋಗಿದ್ದು ದಿನಾಂಕ 22-03-2022 ರಂದು ಮನೆಯ ವಾರ್ಡರೂಬ್ ಪೆಟ್ಟಿಗೆ ತೆಗೆದು ನೋಡಿದ್ದು ಯಾರೋ ಕಳ್ಳರು ಮನೆಯ ಹೆಂಚನ್ನು ತೆಗೆದು ಮನೆಯಲ್ಲಿ ಇದ್ದ 3500/- ರೂ ನಗದು ಹಣ 5 ಗ್ರಾಂ ಚಿನ್ನದ ಉಂಗುರ, 2 ಬೆಳ್ಳಿಯ ಉಂಗುರ ಮತ್ತು 1 1/2  ಕ್ವಿಂಟಾಲ್ ಅಡಿಕೆಯನ್ನು  ಒಟ್ಟು 1,04,100 ರೂ ಬೆಲೆಯ ಸ್ವತ್ತನ್ನು ಕಳವು ಮಾಡಿಕೊಂಡು ಹೋಗಿದ್ದು ಕಳ್ಳರನ್ನು ಪತ್ತೆ ಮಾಡಿ ಕಳುವಾಗಿರುವ ಸ್ವತ್ತುಗಳನ್ನು ಪತ್ತೆ ಮಾಡಿಕೊಡಬೇಕಾಗಿ ಕೋರಿ ನೀಡಿದ ದೂರಿನ ಮೇರೆಗೆ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

 

ಇತ್ತೀಚಿನ ನವೀಕರಣ​ : 23-03-2022 07:36 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080