ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ.

ಅಲ್ದೂರು ಪೊಲೀಸ್ ಠಾಣೆ.

ದಿನಾಂಕ:22-11-2021 ರಂದು ಅಲ್ದೂರು ಠಾಣಾ ಸರಹದ್ದಿನ  ಕಬ್ಬಿಣ ಸೇತುವೆ ಗ್ರಾಮದ ಬಿಸ್ಮಿಲ್ಲಾ  ಹೋಟೇಲ್ ಪಕ್ಕದಲ್ಲಿರುವ ಮಂಜುನಾಥರವರು ಅಂಗಡಿ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದು, ಆರೋಫಿ ಮಂಜುನಾಥ ದಾಳಿ ವೇಳೆ ತಪ್ಪಿಸಿಕೊಂಡು ಓಡಿ ಹೋಗಿದ್ದು ಆರೋಪಿ ಬಳಿಯಿದ್ದ 90 ಎಂ.ಎಲ್. 71 ಮತ್ತು  180 ಎಂ.ಎಲ್. ನ 5 ಟೆಟ್ರಾಪ್ಯಾಕ್ ಮದ್ಯವನ್ನು ವಶಕ್ಕೆ ಪಡೆದು, ಮದ್ಯದ ಅಂದಾಜು ಬೆಲೆ 2928/-ರೂ ಆಗಿದ್ದು, ಆರೋಪಿ ವಿರುದ್ದ  ಅಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಡಿ.ಸಿ.ಐ.ಬಿ. ಘಟಕದ ಪಿ.ಎಸ್.ಐ. ಶ್ರೀ ಪುದ್ದು ಕೆ. ಹಾಗೂ ಸಿಬ್ಬಂದಿಗಳಾದ ಎ.ಎಸ್.ಐ ರಂಗಯ್ಯ  ಸಿಬ್ಬಂದಿಗಳಾದ  ಮಹೇಶ್ ಮತ್ತು ಉಮೇಶ ರವರು ಪಾಲ್ಗೊಂಡಿರುತ್ತಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ.

ಅಲ್ದೂರು ಪೊಲೀಸ್ ಠಾಣೆ.

ದಿನಾಂಕ:22-11-2021 ರಂದು ಮದ್ಯಾಹ್ನ ಅಲ್ದೂರು ಠಾಣಾ ಸರಹದ್ದಿನ  ಅಲ್ದೂರು ಪಟ್ಟಣದ ಬಿ.ಹೆಚ್. ರಸ್ತೆಯಲ್ಲಿ ಕೃಷ್ಣ ರಾಜ ಅರಸ್ ಬಿನ್ ರಂಗರಾಜ್ ಅರಸ್ ಎಂಬುವರು ತಮ್ಮ ಅಂಗಡಿಯ ಹಿಂಭಾಗದಲ್ಲಿ ನಿಂತು ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದು, ಆರೋಫಿಯನ್ನು ವಶಕ್ಕೆ ಪಡೆದು ಆರೋಪಿ ಬಳಿಯಿದ್ದ 90 ಎಂ.ಎಲ್. 32 ಟೆಟ್ರಾಪ್ಯಾಕ್ ಮದ್ಯವನ್ನು ಮತ್ತು 70 ರೂ ನಗದು ಹಣವನ್ನು ವಶಕ್ಕೆ ಪಡೆದು, ಮದ್ಯದ ಅಂದಾಜು ಬೆಲೆ 1124/-ರೂ ಆಗಿದ್ದು, ಆರೋಪಿ ವಿರುದ್ದ  ಅಲ್ದೂರು  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಎಸ್.ಐ. ಶ್ರೀಮತಿ ಶಿವರುದ್ರಮ್ಮ ಹಾಗೂ ಸಿಬ್ಬಂದಿಗಳಾದ ಎ.ಎಸ್.ಐ ಬಸವರಾಜು ಕೆ.ಸಿ. ಸಿಬ್ಬಂದಿಗಳಾದ  ಹರ್ಷ , ಆನಂದ , ಚೇತನ  ಪೂರ್ಣೇಶ ರವರುಪಾಲ್ಗೊಂಡಿರುತ್ತಾರೆ.

ಸಿಂಗಟಗೆರೆ  ಪೊಲೀಸ್ ಠಾಣೆ.

ದಿನಾಂಕ:22-11-2021 ರಂದು ಸಂಜೆ  ಸಿಂಗಟಗೆರೆ  ಠಾಣಾ ಸರಹದ್ದಿನ ಅಣ್ಣೀಗೆರೆ  ಗ್ರಾಮದ  ವಾಸಿ ಸಿದ್ರಾಮಕ್ಕ  ಕೊಂ ಲೇಟ್ ಚಿಕ್ಕಣ್ಣ ಎಂಬುವರು ತಮ್ಮ ಮನೆಯ ಮುಂದಿನ ರಸ್ತೆಯ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದು, ಆರೋಫಿತಳನ್ನು ವಶಕ್ಕೆ ಪಡೆದು ಆರೋಪಿ ಬಳಿಯಿದ್ದ 90 ಎಂ.ಎಲ್. 34 ರಾಜಾ ವಿಸ್ಕಿಯ ಟೆಟ್ರಾಪ್ಯಾಕ್ ಮದ್ಯವನ್ನು ಮತ್ತು 160 ರೂ ನಗದು ಹಣವನ್ನು ವಶಕ್ಕೆ ಪಡೆದು, ಮದ್ಯದ ಅಂದಾಜು ಬೆಲೆ 1190/-ರೂ ಆಗಿದ್ದು, ಆರೋಪಿ ವಿರುದ್ದ  ಸಿಂಗಟಗೆರೆ  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಎಸ್.ಐ. ಶ್ರೀಮತಿ ಲೀಲಾವತಿ ಆರ್ ಹಾಗೂ ಸಿಬ್ಬಂದಿಗಳಾದ ಸುರೇಶ ಧನಪಾಲನಾಯ್ಕ ರವರು ಪಾಲ್ಗೊಂಡಿರುತ್ತಾರೆ.

ಅಜ್ಜಂಫುರ ಪೊಲೀಸ್ ಠಾಣೆ.

ದಿನಾಂಕ:22-11-2021 ರಂದು ಅಜ್ಜಂಫುರ ಠಾಣಾ ಸರಹದ್ದಿನ ಸಂಕ್ಲಪುರ ಬೋವಿ ಕಾಲೋನಿಯಲ್ಲಿ  ಹನುಮಂತಪ್ಪ ಬಿನ್  ಟಿ. ತಮ್ಮಯ್ಯ ಬೋವಿ ಎಂಬುವರು ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದು, ಆರೋಫಿಯು ದಾಳಿ ವೇಳೆಯಲ್ಲಿ ತಪ್ಪಿಕೊಂಡು ಓಡಿ ಹೋಗಿದ್ದು ಆರೋಪಿತನ ಬಳಿಯಿದ್ದ 90 ಎಂ.ಎಲ್. 41 ಟೆಟ್ರಾಪ್ಯಾಕ್ ಮದ್ಯವನ್ನು ವಶಕ್ಕೆ ಪಡೆದು, ಮದ್ಯದ ಅಂದಾಜು ಬೆಲೆ 1440/-ರೂ ಆಗಿದ್ದು, ಆರೋಪಿ ವಿರುದ್ದ  ಅಜ್ಜಂಪುರ  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಎಸ್.ಐ. ತಿಪ್ಪೇಶ್ ಡಿ.ವಿ. ಹಾಗೂ ಸಿಬ್ಬಂದಿಗಳಾದ ಓಂಕಾರಮೂರ್ತಿ, ಲತೇಶ್, ವೇದಾಮೂರ್ತಿ ರವರುಪಾಲ್ಗೊಂಡಿರುತ್ತಾರೆ.

ಅಕ್ರಮ ಇಸ್ಪೀಟ್ ಜೂಜಾಟ ಪ್ರಕರಣ

ಪಂಚನಹಳ್ಳಿ  ಪೊಲೀಸ್ ಠಾಣೆ.

ದಿನಾಂಕ:22-11-2021 ರಂದು ಪಂಚನಹಳ್ಳಿ ಠಾಣಾ ಸರಹದ್ದಿನ ಬಸರೀಕಟ್ಟೆ ಗ್ರಾಮದ  ಕೆರೆಯಂಗಳದ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಮಾಡುತ್ತಿದ್ದು, ಆರೋಫಿತರಾದ ಮುದ್ದುರಂಗಪ್ಪ ಬಿ.ಎಂ. ಬಿನ್ ಮರುಳಪ್ಪ, 2. ಮಧು ಬಿನ್ ಸಂಜೀವಪ್ಪ 3. ಪ್ರಕಾಸ ಬಿನ್ ರಂಗನಾಥ 4. ಗಂಗಾಧರ ಬಿನ್ ಕರಿಯಪ್ಪ 5. ದೇವರಾಜ್ ಬಿನ್ ಸಿದ್ದಪ್ಪ ರವರನ್ನು ವಶಕ್ಕೆ ಪಡೆದು ಆರೋಪಿತರು ಜೂಜಾಟಕ್ಕೆ ಬಳಿಸಿದ 2500/- ನಗದು ಹಣವನ್ನು ವಶಕ್ಕೆ ಪಡೆದು, ಆರೋಪಿತರ ವಿರುದ್ದ  ಪಂಚನಹಳ್ಳಿ  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಎಸ್.ಐ. ಜಿ.ಕೆ. ಪವಿತ್ರ ಹಾಗೂ ಸಿಬ್ಬಂದಿಗಳಾದ  ಆನಂದನಾಯ್ಕ, ಬೀರೇಶ್ ಆನಂದ ರವರು ಪಾಲ್ಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 23-11-2021 08:18 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080