ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ

ಮೂಡಿಗೆರೆ ಪೊಲೀಸ್ ಠಾಣೆ.

ದಿನಾಂಕ;25/04/2022 ರಂದು ಮೂಡಿಗೆರೆ ಠಾಣಾ ಸರಹದ್ದಿನ ಕಿತ್ತಲೆಗಂಡಿ ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣದ ಮುಂಭಾಗದಲ್ಲಿ ನಂದನ್ ಕುಮಾರ್ ಕೆ.ಜಿ. ಬಿನ್ ಲೇಟ್ ಗುಡ್ಡೇಗೌಡ ಕೆ.ಹೆಚ್. ವಾಸ ಕಡಿದಾಳು ಗ್ರಾಮ ಈತನು ಸಾರ್ವಜನಿಕರಿಗೆ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದು ಆರೋಪಿತನನ್ನು ವಶಕ್ಕೆ ಪಡೆದು, ಅಕ್ರಮವಾಗಿ  ಹೊಂದಿದ್ದ 8 ಲೀಟರ್ 40 ಎಂ.ಎಲ್ ನ ಮದ್ಯ ಅಂದಾಜು ಬೆಲೆ ರೂ 2447/- ಅಗಿದ್ದು, ಸದರಿ ಮದ್ಯವನ್ನು ಅಮಾನತ್ತುಪಡಿಸಿಕೊಂಡು ಬಂದು ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಮೂಡಿಗೆರೆ ಪಿ.ಎಸ್.ಐ. ರವಿ ಜಿ.ಎ. ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಕಳ್ಳತನ ಪ್ರಕರಣ

ಕಡೂರು ಪೊಲೀಸ್ ಠಾಣೆ.

ದಿನಾಂಕ;25/04/2022 ರಂದು ಪಿರ್ಯಾದಿ ಸೋಮಶೇಖರಪ್ಪ ಕಂಸಾಗರ ವಾಸಿ ರವರು ನೀಡಿದ ದೂರಿನಲ್ಲಿ ಪಿರ್ಯಾದಿಯವರು ಚಿಕ್ಕಪಟ್ಟಣಗೆರೆ ಗ್ರಾಮದ ತಮ್ಮ ಜಮೀನಿನಲ್ಲಿ ಬೆಳೆದ ಬಾಳೆ ತೋಟದಲ್ಲಿ ಈ ದಿನ ಬೆಳಗಿನ ಜಾವ 3-00 ಗಂಟೆ ಸಮಯದಲ್ಲಿ ಯಾರೋ ಕಳ್ಳರು ಕಳ್ಳತನ ಮಾಡಲು ಬಂದಿದ್ದು ತೋಟದಲ್ಲಿದ್ದ ಬಾಳೆಗೊನೆಗಳನ್ನು 3 ಜನ ಕಡಿಯುತ್ತಿದ್ದು, ಪಿರ್ಯಾದಿಯವರನ್ನು ಬಂದು ನೋಡಲಾಗಿ 3 ಜನರು ಓಡಿ ಹೋಗಿದ್ದು ಸದರಿಯವರು 17-18 ಗೊನೆ ಕಳ್ಳತನ ಮಾಡಿದ್ದು 3 ಗೊನೆಗಳನ್ನು ಮಾರುತಿ 800 ಕಾರಿಗೆ ಹಾಕಿದ್ದು, ಕಳುವಾಗಿರುವ ಬಾಳೆಗೊನೆ ಬೆಲೆ ಸುಮಾರು 10-12 ಸಾವಿರ ರೂಗಳಷ್ಟು ಅಗಿದ್ದು, ಕಳ್ಳತನ ಮಾಡಿದ ಕಳ್ಳರನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕಾಗಿ ನೀಡಿದ ದೂರಿನ ಮೇರೆಗೆ ಕಡೂರು ಠಾಣೆಯಲ್ಲಿ ಪ್ರಕಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಮನುಷ್ಯ ಕಾಣೆ ಪ್ರಕರಣ

ಗ್ರಾಮಾಂತರ ಪೊಲೀಸ್ ಠಾಣೆ.

ದಿನಾಂಕ;24/04/2022 ರಂದು ಪಿರ್ಯಾದಿ ದಿಲೀಪ್ ಬಿನ್ ನಾರಾಯಣ ಹೊಸಲಕ್ಯಾ ವಾಸಿ ಇವರು ನೀಡಿದ ದೂರಿನಲ್ಲಿ ಪಿರ್ಯಾದಿಯ ಅಣ್ಣ ಮಧು ಇವರು ಖಾಸಗಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದವನು, ದಿನಾಂಕ;17/04/2022 ರಂದು ಊರಿಗೆ ಹಬ್ಬಕ್ಕೆ ಬಂದವನು, ವಾಪಾಸ್ಸು ದಿನಾಂಕ;22/04/2022 ಊರಿನಿಂದ ಬೆಂಗಳೂರಿಗೆ ಹೋಗುತ್ತೇನೆಂದು ಹೋದವನು, ಬೆಂಗಳೂರಿಗೆ ಹೋಗದೇ ಕಾಣೆಯಾಗಿದ್ದು, ಈವರೆಗೆ ಹುಡಕಲಾಗಿ ಪತ್ತೆಯಾಗಿರುವುದಿಲ್ಲ. ಕಾಣೆಯಾಗಿರುವ ಮಧು ಬಿನ್ ನಾರಾಯಣ ದುಂಡುಮುಖ, ಎಣ್ಣೆಗೆಂಪು ಮೈಬಣ್ಣ, 5.5 ಅಡಿ ಎತ್ತರ, ಕನ್ನಡ ಭಾಷೆ ಮಾತನಾಡುತ್ತಾರೆ. ಕಾಣೆಯಾಗಿರುವ ತನ್ನ ಅಣ್ಣ ನನ್ನು ಪತ್ತೆ ಮಾಡಿ ಕೊಡುವಂತೆ ನೀಡಿದ ದೂರಿನ ಮೇರೆಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 25-04-2022 06:41 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080