ಅಭಿಪ್ರಾಯ / ಸಲಹೆಗಳು

ಮನುಷ್ಯ ಕಾಣೆ ಪ್ರಕರಣ.

ಗೋಣಿಬೀಡು ಪೊಲೀಸ್ ಠಾಣೆ.

ದಿನಾಂಕ25-09-2021 ರಂದು ನೋಣಯ್ಯ ಬಿನ್ ಬಾಬು,ಹನುಮನಹಳ್ಳಿ ಗ್ರಾಮವಾಸಿರವರು ನೀಡಿದ ದೂರಿನ ಸಾರಾಂಶವೇನೆಂದರೆ ,ದಿನಾಂಕ 24-09-2021 ರಂದು ಮದ್ಯಾಹ್ನ 12-00 ಗಂಟೆ ಸಮಯದಲ್ಲಿ ನನ್ನ ಮಗಳಾದ ದಿವ್ಯಾ ,19ವರ್ಷ ಈಕೆಯು ಮನೆಯಿಂದ ಅಂಗಡಿಗೆ ಹೋಗುವುದಾಗಿ ಹೇಳಿ ಹೋದವಳು ವಾಪಾಸ್ ಮನೆಗ ಬಂದಿರುವುದಿಲ್ಲ. ಪರಿಚಯಸ್ಥರ, ಸಂಬಂಧಿಕರ ಹಾಗೂ ಸ್ನೇಹಿತರ ಮನೆಗಳಲ್ಲಿ ಹುಡುಕಲಾಗಿ ಎಲ್ಲಿಯೂ ಪತ್ತೆಯಾಗಿರುವುದಿಲ್ಲ. ಆದ್ದರಿಂದ ಕಾಣೆಯಾಗಿರುವ ನನ್ನ ಮಗಳನ್ನು ಪತ್ತೆ  ಮಾಡಿಕೊಡುವಂತೆ ನೀಡಿದ ದೂರಿನ ಮೇರೆಗೆ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ತರೀಕೆರೆ  ಪೊಲೀಸ್ ಠಾಣೆ.

ದಿನಾಂಕ 25-09-2021 ರಂದು ಸಂತೋಷನಾಯ್ಕ ಬಿನ್ ಲೇಟ್ ಶಂಕರನಾಯ್ಕ, ಗುಡ್ಡದಹಳ್ಳಿ ವಾಸಿರವರು ನೀಡಿದ ದೂರಿನ ಸಾರಾಂಶವೇನೆಂದರೆ ,ಈಗ್ಗೆ ಒಂದು ತಿಂಗಳ ಹಿಂದೆ ನನ್ನ ಹೆಂಡತಿಯಾದ ರಂಜಿತಾಬಾಯಿ ಹಾಗೂ ಮಕ್ಕಳೊಂದಿಗೆ ಬೆಂಗಳೂರಿನ ಸರ್ಜಾಪುರ ಸೋಂಪುರ ಗೇಟ್ ಹತ್ತಿರವಿರುವ ಎಂ,ಎಸ್, ಕಲ್ಯಾಣಮಂಟಪದಲ್ಲಿ ಕೆಲಸ ಮಾಡಿಕೊಂಡಿದ್ದು ,ನನ್ನ ತಾಯಿಗೆ ಆರೋಗ್ಯ ಸರಿಯಿಲ್ಲದ ಕಾರಣ ಅವರನ್ನು ನೋಡಿಕೊಳ್ಳಲು ಊರಿಗೆ ವಾಪಾಸ್ ನನ್ನ ಹೆಂಡತಿಯೊಂದಿಗೆ ಬರುತ್ತಿರುವಾಗ ನನ್ನ ಹೆಂಡತಿ ಊರಿಗೆ ಬರುವುದಿಲ್ಲವೆಂದು ಹೇಳಿದ್ದರಿಂದ ದಿನಾಂಕ 13-09-2021 ರಂದು ತರೀಕೆರೆಯ ನನ್ನ ಚಿಕ್ಕಪ್ಪನ ಮನೆಯಲ್ಲಲಿ ಉಳಿದುಕೊಂಡಿದ್ದು ,ನಾನು ಆರ್.ಎಂ.ಸಿ. ಹೋಟೆಲ್ ನಲ್ಲಿ ಕೆಲಸ ಮಾಡಿಕೊಂಡಿದ್ದೆನು .ದಿನಾಂಕ 15-09-2021 ರಂದು ಊಟ ತರಲೆಂದು   ನಾನು ಹೋಟೆಲ್ ಗೆ ಹೋಗಿ ಊಟ ತಂದು ವಾಪಾಸ್ ಬಂದಾಗ ನನ್ನ ಹೆಂಡತಿ ರಂಜಿತಾಬಾಯಿರವರು ಮನೆಯಲ್ಲಿ ಇರಲಿಲ್ಲ.  ಪರಿಚಯಸ್ಥರ, ಸಂಬಂಧಿಕರ ಹಾಗೂ ಸ್ನೇಹಿತರ ಮನೆಗಳಲ್ಲಿ ಹುಡುಕಲಾಗಿ ಎಲ್ಲಿಯೂ ಪತ್ತೆಯಾಗಿರುವುದಿಲ್ಲ. ಆದ್ದರಿಂದ ಕಾಣೆಯಾಗಿರುವ ನನ್ನ ಹೆಂಡತಿಯನ್ನು ಪತ್ತೆ  ಮಾಡಿಕೊಡುವಂತೆ ನೀಡಿದ ದೂರಿನ ಮೇರೆಗೆ ತರೀಕೆರೆ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ.

ಗೋಣಿಬೀಡು ಪೊಲೀಸ್ ಠಾಣೆ.

ದಿನಾಂಕ 24-09-2021 ರಂದು ಪವಿತ್ರ ಕೋಂ ದಿನೇಶ, ಸುಭಾಷ್ ನಗರ ವಾಸಿರವರು ನೀಡಿದ ದೂರೇನೆಂದರೆ ದಿನಾಂಕ 24-09-2021 ರಂದು ಮದ್ಯಾಹ್ನ 12-00 ಗಂಟೆ ಸಮಯದಲ್ಲಿ  ನನ್ನ ಗಂಡನಾದ ದಿನೇಶ್ ರವರು ಅವರ ಸ್ನೇಹಿತರಾದ ಕಿಸಾನ್ ರವರೊಂದಿಗೆ ಮೂಡಿಗೆರೆಯಿಂದ ಅಗ್ರಹಾರ ದೇವಸ್ಥಾನದ ದರ್ಶನಕ್ಕೆಂದು ಕೆಎ-02 ಹೆಚ್ 0304 ಬೈಕಿನಲ್ಲಿ ಹೋಗುತ್ತಿರುವಾಗ ಮಂಡಿಮನೆ ಸುಣ್ಣದ ಹಳ್ಳದ  ಸೇತುವೆ ಬಳಿ ಕೆಎ13 ಎನ್ 5985 ವಾಹನದ ಚಾಲಕನು ತನ್ನ ವಾಹನವನ್ನು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ನನ್ನ ಗಂಡ ಚಲಾಯಿಸುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆಸಿದ ಪರಿಣಾಮ ನನ್ನ ಗಂಡ ಹಾಗೂ ಅವರ ಸ್ನೇಹಿತರಿಗೆ  ತಲೆಗೆ ತೀವ್ರ ತರಹದ ಪೆಟ್ಟಾಗಿ ನನ್ನ ಗಂಡನಾದ ದಿನೇಶ್ ರವರು ಮೃತಪಟ್ಟಿರುತ್ತಾರೆಂದು ಕೆಎ13 ಎನ್ 5985 ವಾಹನದ ಚಾಲಕನ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ನೀಡಿದ ದೂರಿನ ಮೇರೆಗೆ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

 

ಇತ್ತೀಚಿನ ನವೀಕರಣ​ : 25-09-2021 06:15 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080