ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ

ಬಾಳೂರು ಪೊಲೀಸ್ ಠಾಣೆ.

ದಿನಾಂಕ;25/04/2022 ರಂದು ಬಾಳೂರು ಠಾಣಾ ಸರಹದ್ದಿನ ಕೆ.ತಲಗೂರು ಗ್ರಾಮದ ವಾಸಿ ಗುರು ಪ್ರಸಾದ್ @ ಪಾಪು ಬಿ ಜಯಕುಮಾರ್ ತನ್ನ ಬಾಬ್ತು ದಿನಸಿ ಅಂಗಡಿ ಮುಂಭಾಗದಲ್ಲಿ ಈತನು ಸಾರ್ವಜನಿಕರಿಗೆ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದು ಆರೋಪಿತನನ್ನು ವಶಕ್ಕೆ ಪಡೆದು, ಅಕ್ರಮವಾಗಿ  ಹೊಂದಿದ್ದ 90 ಎಂ.ಎಲ್ ನ 50 ಟೆಟ್ರಾಪ್ಯಾಕ್ ಮದ್ಯ ಅಂದಾಜು ಬೆಲೆ ರೂ 1756/- ಅಗಿದ್ದು, ಸದರಿ ಮದ್ಯವನ್ನು ಅಮಾನತ್ತುಪಡಿಸಿಕೊಂಡು ಬಂದು ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಬಾಳೂರು ಪಿ.ಎಸ್.ಐ. ಪವನ್ ಕುಮಾರ್ ಸಿ.ಸಿ. ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಅಕ್ರಮ ಮಟ್ಕಾ ಜೂಜಾಟ ಪ್ರಕರಣ

ಮೂಡಿಗೆರೆ ಪೊಲೀಸ್ ಠಾಣೆ.

ದಿನಾಂಕ;25/04/2022 ರಂದು ಮೂಡಿಗೆರೆ ಠಾಣಾ ಸರಹದ್ದಿನ ಹ್ಯಾಂಡ್ ಪೋಸ್ಟ್ ಹತ್ತಿರ ದಾರದಹಳ್ಳಿ ಕಡೆಗೆ ಹೋಗುವಾಗ ರಸ್ತೆಯಲ್ಲಿ ಪೈವ್ ಸ್ಟಾರ್ ಪಂಚರ್ ಶಾಪ್  ಅಂಗಡಿ ಪಕ್ಕದಲ್ಲಿ ಸೈಯದ್ ಅರೀಪ್ ಬಿನ್ ಲೇಟ್ ಸೈಯದ್ ಅಲಿ ಎಂಬವರು ಅಕ್ರಮವಾಗಿ ಸಾರ್ವಜನಿಕರಿಗೆ ಮಟ್ಕಾ ಜೂಜಾಟ ಆಡಿಸುತ್ತಿದ್ದು, ಆರೋಪಿತನನ್ನು ವಶಕ್ಕೆ ಪಡೆದು, ಅಕ್ರಮವಾಗಿ  ಸಾರ್ವಜನಿಕರಿಂದ ಸಂಗ್ರಹಿಸಿದ ಹಣ ರೂ 1060/- ಅಗಿದ್ದು, ಸದರಿ ನಗದು ಹಣ, ಒಂದು ಮಟ್ಕಾ ಚೀಟಿ ಮತ್ತು ಒಂದು ಬಾಲ್ ಪೆನ್ನು ಅನ್ನು  ಅಮಾನತ್ತುಪಡಿಸಿಕೊಂಡು ಬಂದು ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಬಾಳೂರು ಪಿ.ಎಸ್.ಐ. ರವಿ ಜಿ.ಎ. ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಕಳ್ಳತನ ಪ್ರಕರಣ

ಅಜ್ಜಂಪುರ ಪೊಲೀಸ್ ಠಾಣೆ.

ದಿನಾಂಕ;26/04/2022 ರಂದು ಪಿರ್ಯಾದಿ ಶಶಿಕುಮಾರ್, ಅಜ್ಜಂಫುರ ಟೌನ್ ವಾಸಿ ರವರು ನೀಡಿದ ದೂರಿನಲ್ಲಿ ಪಿರ್ಯಾದಿಯವರು ದಿನಾಂಖ 26/04/2022 ರಂದು ಅಜ್ಜಂಫುರ ಟೌನ್ ಕಿರಾಳಮ್ಮ ದೇವಸ್ಥಾನದ ಬಳಿ ತಮ್ಮ ಬಾಬ್ತು ಕೆಎ-18-ವೈ-1906 ಬೈಕ್ ಅನ್ನು ನಿಲ್ಲಿಸಿ ಹೋಗಿದ್ದು, ವಾಪಸ್ಸು ಬಂದು ನೋಡಲಾಗಿ, ಯಾರೋ ಕಳ್ಳರು  ಬೈಕ್ ಅನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು,  ಬೈಕಿನ ಅಂದಾಜು ಬೆಲೆ 50 ಸಾವಿರ ರೂಪಾಯಿಗಳಾಗಿದ್ದು, ಕಳ್ಳತನ ಮಾಡಿದ ಕಳ್ಳರನ್ನು ಪತ್ತೆ ಮಾಡಿ ಕಳುವಾಗಿರುವ ಬೈಕ್ ಅನ್ನು ಪತ್ತೆ ಮಾಡಿ ಕೊಡಬೇಕಾಗಿ ನೀಡಿದ ದೂರಿನ ಮೇರೆಗೆ ಅಜ್ಜಂಪುರ ಠಾಣೆಯಲ್ಲಿ ಪ್ರಕಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಮನುಷ್ಯ ಕಾಣೆ ಪ್ರಕರಣ

ಬಾಳೆಹೊನ್ನೂರು ಪೊಲೀಸ್ ಠಾಣೆ.

ದಿನಾಂಕ;26/04/2022 ರಂದು ಪಿರ್ಯಾದಿ ತಾರಾ ಬಿನ್ ಮಂಜುನಾಥ ತುಪ್ಪೂರು ಹಿರೇಗದ್ದೆ ವಾಸಿ ಇವರು ನೀಡಿದ ದೂರಿನಲ್ಲಿ ಪಿರ್ಯಾದಿಯ ಮಗಳಾದ ದೀಕ್ಷಾ, ಎಂ, ಇವಳು ಬಾಳೆಹೊನ್ನೂರಿನ ಕಡ್ಲೆಮಕ್ಕಿಯಲ್ಲಿ ಸರ್ಕಾರಿ ಕಾಲೇಜಿನಲ್ಲಿ 2 ನೇ ಪಿ.ಯು,ಸಿ. ಓದುತ್ತಿದ್ದು, ದಿನಾಂಕ;25/04/2022 ರಂದು ಪರೀಕ್ಷೆ ಇದ್ದು, ಪರೀಕ್ಷೆ ಬರೆಯಲು ಕಾಲೇಜಿಗೆ ಹೋಗಿದ್ದು ವಾಪಾಸ್ಸು ಮನೆಗೆ ಬಾರದೆ ಇದ್ದು,  ಈವರೆಗೆ ಹುಡಕಲಾಗಿ ಪತ್ತೆಯಾಗಿರುವುದಿಲ್ಲ. ಕಾಣೆಯಾಗಿರುವ ತನ್ನ ಮಗಳನ್ನು ಪತ್ತೆ ಮಾಡಿ ಕೊಡುವಂತೆ ನೀಡಿದ ದೂರಿನ ಮೇರೆಗೆ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 26-04-2022 06:23 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080