ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ

ತರೀಕೆರೆ ಪೊಲೀಸ್ ಠಾಣೆ.

ದಿನಾಂಕ;26/04/2022 ರಂದು ಮೂಡಿಗೆರೆ ಠಾಣಾ ಸರಹದ್ದಿನ ಪಿರುಮೇನಹಳ್ಳಿ ತಾಂಡ್ಯ ಗ್ರಾಮದ ರಮೇಶನಾಯ್ಕ ಬಿನ್ ಲಕ್ಷ್ಮಣನಾಯ್ಕ ತನ್ನ ಬಾಬ್ತು ಅಂಗಡಿಯ ಖಾಲಿ ಜಾಗದಲ್ಲಿ ಸಾರ್ವಜನಿಕರಿಗೆ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದು ಆರೋಪಿತನನ್ನು ವಶಕ್ಕೆ ಪಡೆದು, ಅಕ್ರಮವಾಗಿ  ಹೊಂದಿದ್ದ 90 ಎಂ.ಎಲ್ ನ 34 ಟೆಟ್ರಾಪ್ಯಾಕ್ ಮದ್ಯ ಅಂದಾಜು ಬೆಲೆ ರೂ 1194.42/- ಅಗಿದ್ದು, ಸದರಿ ಮದ್ಯವನ್ನು ಅಮಾನತ್ತುಪಡಿಸಿಕೊಂಡು ಬಂದು ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ತರೀಕೆರೆ ಪಿ.ಎಸ್.ಐ. ಕೃಷ್ಣಾನಾಯ್ಕ. ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಬಾಳೂರು ಪೊಲೀಸ್ ಠಾಣೆ.

ದಿನಾಂಕ;26/04/2022 ರಂದು ಬಾಳೂರು ಠಾಣಾ ಸರಹದ್ದಿನ ದುರ್ಗದಹಳ್ಳಿ ಗ್ರಾಮದ ವಾಸಿ ಸದಾಶಿವ ಬಿನ್ ವೆಂಕಪ್ಪಗೌಡ ರವರು ತಮ್ಮ ಬಾಬ್ತು ದಿನಸಿ ಅಂಗಡಿಯಲ್ಲಿ ಸಾರ್ವಜನಿಕರಿಗೆ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದು ಆರೋಪಿತನನ್ನು ವಶಕ್ಕೆ ಪಡೆದು, ಅಕ್ರಮವಾಗಿ  ಹೊಂದಿದ್ದ 180 ಎಂ.ಎಲ್ ನ 48 ಟೆಟ್ರಾಪ್ಯಾಕ್ ಮದ್ಯ ಅಂದಾಜು ಬೆಲೆ ರೂ 4164/- ಅಗಿದ್ದು, ಸದರಿ ಮದ್ಯವನ್ನು ಅಮಾನತ್ತುಪಡಿಸಿಕೊಂಡು ಬಂದು ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಬಾಳೂರು ಪಿ.ಎಸ್.ಐ. ಪವನಕುಮಾರ್ ಸಿ.ಸಿ. ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಮನುಷ್ಯ ಕಾಣೆ ಪ್ರಕರಣ

ಕಳಸ ಪೊಲೀಸ್ ಠಾಣೆ.

ದಿನಾಂಕ;26/04/2022 ರಂದು ಪಿರ್ಯಾದಿ ಸತೀಶ್ ಎಸ್ ಬಿನ್ ಸೋಮಯ್ಯ ಮಾವಿನಕೆರೆ ಗ್ರಾಮ ಕಳಸ ವಾಸಿ ಇವರು ನೀಡಿದ ದೂರಿನಲ್ಲಿ ಪಿರ್ಯಾದಿಯ ಮಗ ಗಣೇಶ ಕೆ.ಎಸ್. 19 ವರ್ಷ,  ಇವರು ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದವನು, ದಿನಾಂಕ; 24/04/2022 ರಂದು ರಾತ್ರಿ ಮನೆಯಿಂದ ಹೋದವನು, ವಾಪಾಸ್ಸು ಕಾಣೆಯಾಗಿದ್ದು, ಈವರೆಗೆ ಹುಡಕಲಾಗಿ ಪತ್ತೆಯಾಗಿರುವುದಿಲ್ಲ. ಕಾಣೆಯಾಗಿರುವ ಗಣೇಶ ಕೆ.ಎಸ್, 19 ವರ್ಷ, ದೃಡಕಾಯ ಶರೀರ, 5.6 ಅಡಿ ಎತ್ತರ, ಗೋದಿ ಮೈಬಣ್ಣ, ಕೋಲುಮುಖ, ಕನ್ನಡ, ಇಂಗ್ಲಿಷ್ ಭಾಷೆ ಮಾತನಾಡುತ್ತಾರೆ. ಬಲಗೈ ಮಣಿಕಟ್ಟಿನ ಹತ್ತಿರ ಹಳೆಯ ಗಾಯದ ಗುರುತು ಇದೆ. ಕಾಣೆಯಾಗಿರುವ ತನ್ನ ಮಗ ಗಣೇಶ ನನ್ನು ಪತ್ತೆ ಮಾಡಿ ಕೊಡುವಂತೆ ನೀಡಿದ ದೂರಿನ ಮೇರೆಗೆ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ತರೀಕೆರೆ ಪೊಲೀಸ್ ಠಾಣೆ.

ದಿನಾಂಕ;26/04/2022 ರಂದು ಪಿರ್ಯಾದಿ ತಿಮ್ಮಾಬೋವಿ ವಿಠಲಪುರ ಗ್ರಾಮ ತರೀಕೆರೆ ವಾಸಿ ಇವರು ನೀಡಿದ ದೂರಿನಲ್ಲಿ ದಿನಾಂಕ;24/04/2022 ರಂದು ವಿಠಲಪುರಕ್ಕೆ  ಸಂಸಾರದೊಂದಿಗೆ ಬಂದಿದ್ದು, ನನ್ನ ಹೆಂಡತಿ ರಂಜಿತ ಮನೆಯಿಂದ ದಿನಾಂಕ; 25/04/2022 ರಂದು ಮನೆಯಿಂದ ಹೋದವಳು, ವಾಪಾಸ್ಸು ಮನೆಗೆ ಬಾರದೆ ಕಾಣೆಯಾಗಿದ್ದು, ಈವರೆಗೆ ಹುಡಕಲಾಗಿ ಪತ್ತೆಯಾಗಿರುವುದಿಲ್ಲ. ಕಾಣೆಯಾಗಿರುವ ರಂಜಿತಾ, 23 ವರ್ಷ, 5 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ಹಸಿರು ಬಣ್ಣದ ನೈಟಿ ಧರಿಸಿರುತ್ತಾಳೆ. ಕಾಣೆಯಾಗಿರುವ ತನ್ನ ಹೆಂಡತಿ ರಂಜಿತಾಳನ್ನು ಪತ್ತೆ ಮಾಡಿ ಕೊಡುವಂತೆ ನೀಡಿದ ದೂರಿನ ಮೇರೆಗೆ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 27-04-2022 01:03 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080