ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ

ಅಲ್ದೂರು ಪೊಲೀಸ್ ಠಾಣೆ.

ದಿನಾಂಕ:28.05.2022 ರಂದು 9.00 ಗಂಟೆ ಸಮಯದಲ್ಲಿ ಅಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಣತಿ ಗ್ರಾಮದ ಕಾಲೋನಿಯಲ್ಲಿ ಮಹೇಂದ್ರ ಕೆ.ವಿ. ಬಿನ್ ವೆಂಕಟೇಶ  ಈತನು ಅಕ್ರಮವಾಗಿ ಮನೆಯ ಹಿಂದೆ ಸಾರ್ವಜನಿಕರಿಗೆ ಕಳ್ಳಭಟ್ಟಿ ಮದ್ಯ ಮಾರಾಟ ಮಾಡುತ್ತಿದ್ದು ದಾಳಿ ವೇಳೆಯಲ್ಲಿ ಆರೋಪಿತನು ಓಡಿ ಹೋಗಿದ್ದು , ಆರೋಪಿತನು ಅಕ್ರಮವಾಗಿ ಹೊಂದಿದ್ದ 5 ಲೀಟರ್ ಕಳ್ಳಭಟ್ಟಿ ಸಾರಾಯಿಯನ್ನು (ಮದ್ಯವನ್ನು) ಮತ್ತು ಕಳ್ಳಭಟ್ಟಿ ತಯಾರಿಸಲು ಬಳಸಿದ ಪರಿಕರಗಳನ್ನು ಅಮಾನತ್ತುಪಡಿಸಿಕೊಂಡು, ಬಂದು ಆರೋಪಿತನ ವಿರುದ್ದ ಅಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಅಲ್ದೂರು ಠಾಣಾ ಪಿ.ಎಸ್.ಐ. ಶ್ರೀಮತಿ ಶಿವರುದ್ರಮ್ಮ ಎಸ್. ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಹರಿಹರಪುರ ಪೊಲೀಸ್ ಠಾಣೆ.

ದಿನಾಂಕ:27.05.2022 ರಂದು 17.30 ಗಂಟೆ ಸಮಯದಲ್ಲಿ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯ ಚಾವಲ್ಮನೆ ಗ್ರಾಮದ ಹೊಸ್ಕೇರಿಯಲ್ಲಿ ದುಗ್ಗಪ್ಪನಾಯ್ಕ ಬಿನ್ ಮಂಜಪ್ಪನಾಯ್ಕ  ಬಿನ್ ವಾಸಿ ಈತನು ಅಕ್ರಮವಾಗಿ ಅಂಗಡಿ ಬಳಿ ಮದ್ಯ ಮಾರಾಟ ಮಾಡುತ್ತಿದ್ದು ದಾಳಿ ವೇಳೆಯಲ್ಲಿ ಆರೋಪಿತನು ಓಡಿ ಹೋಗಿದ್ದು , ಆರೋಪಿತನು ಅಕ್ರಮವಾಗಿ ಹೊಂದಿದ್ದ 90 ಎಂ.ಎಲ್. ನ 107 ಟೆಟ್ರಾಪ್ಯಾಕ್ ಎಂ.ಎಲ್. ನ 3758/- ರೂ ಬೆಲೆಯ ಮದ್ಯವನ್ನು ಅಮಾನತ್ತುಪಡಿಸಿಕೊಂಡು, ಬಂದು ಆರೋಪಿತನ ವಿರುದ್ದ ಹರಿಹರಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಹರಿಹರಪುರ ಠಾಣಾ ಪಿ.ಎಸ್.ಐ. ವಿಠ್ಠಲ್ ವಡವಾಣಿ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿರುತ್ತಾರೆ.

ಮನುಷ್ಯ ಕಾಣೆ  ಪ್ರಕರಣ.

ಮಹಿಳಾ ಪೊಲೀಸ್ ಠಾಣೆ

ದಿನಾಂಕ;27-05-2022 ರಂದು ಮಂಜುನಾಥ ಬಿನ್ ಅನಂದ ಕುಮಾರ್, ವಾಸ ಕೆಂಪನಹಳ್ಳಿ, ಚಿಕ್ಕಮಗಳೂರು ರವರು ನೀಡಿದ ದೂರೇನೆಂದರೆ, ಪಿರ್ಯಾದುದಾರರ ಮಗಳು ಅಪೂರ್ವ  ದಿನಾಂಕ;20/05/2022 ರಂದು ಮನೆಯಿಂದ ಯಾರಿಗೂ ಹೇಳದೆ ಹೋದವಳು ವಾಪಾಸ್ಸು ಮನೆಗೆ ಬಾರದೇ ಕಾಣೆಯಾಗಿದ್ದು ಈವರೆಗೂ ಎಲ್ಲಾ ಕಡೆ ಹುಡುಕಿದರೂ ಪತ್ತೆಯಾಗಿಲ್ಲವೆಂದು ಕಾಣೆಯಾಗಿರುವ ಮಗಳು ಅಪೂರ್ವ ಎಂ.ಎನ್.  5.1 ಅಡಿ ಎತ್ತರ, 21 ವರ್ಷ, ದುಂಡು ಮುಖ, ಎಣ್ಣೆಗೆಂಪು ಬಣ್ಣ,  ಮೈ ಕಟ್ಟು, ಕಪ್ಪು ತಲೆ ಕೂದಲು, ಸಾದಾರಣ ಮೈ ಕಟ್ಟು, ಕನ್ನಡ ಇಂಗ್ಲಿಷ್, ತೆಲಗು, ಹಿಂದಿ ತಮಿಳು, ಬಾಷೆ ಮಾತನಾಡುತ್ತಾಳೆ. ಕಾಣೆಯಾಗಿರುವ ತನ್ನ ಮಗಳು ಅಪೂರ್ವ ಳನ್ನು ಪತ್ತೆ ಮಾಡಿಕೊಡುವಂತೆ ನೀಡಿದ ದೂರಿನ ಮೇರೆಗೆ  ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಕಡೂರು ಪೊಲೀಸ್ ಠಾಣೆ

ದಿನಾಂಕ;27-05-2022 ರಂದು ಗಿರಿಯಪ್ಪ ಬಿನ್ ಗೋವಿಂದಪ್ಪ, ವಾಸ ಶ್ರೀರಾಂಪುರ, ಕಡೂರು ತಾಲ್ಲೋಕು ರವರು ನೀಡಿದ ದೂರೇನೆಂದರೆ, ಪಿರ್ಯಾದುದಾರರ ಮಗಳು ರೇಣುಕಾ ಪಿರ್ಯಾದಿ ಮನಗೆ ಬಂದಿದ್ದು, ದಿನಾಂಕ;16/05/2022 ರಂದು ಮನೆಯಿಂದ ಗಂಡನ ಮನೆಗೆ ಹೋಗುವುದಾಗಿ ಮನೆಯಿಂದ ಹೇಳಿ ಹೋದವಳು ಗಂಡನ ಮನೆಗೆ ಹೋಗದೇ, ವಾಪಾಸ್ಸು ಮನೆಗೆ ಬಾರದೇ ಕಾಣೆಯಾಗಿದ್ದು ಈವರೆಗೂ ಎಲ್ಲಾ ಕಡೆ ಹುಡುಕಿದರೂ ಪತ್ತೆಯಾಗಿಲ್ಲವೆಂದು ಕಾಣೆಯಾಗಿರುವ ಮಗಳು ರೇಣುಕಾ.  5.6 ಅಡಿ ಎತ್ತರ, 32 ವರ್ಷ, ಗೋದಿ ಮೈ ಬಣ್ಣ,  ಕನ್ನಡ ಬಾಷೆ ಮಾತನಾಡುತ್ತಾಳೆ. ಕೇಸರಿ ಬಣ್ಣದ ಚೂಡಿದಾರ ಲೆಗ್ಗಿನ್ಸ್ ಧರಿಸಿರುತ್ತಾಳೆ. ಕಾಣೆಯಾಗಿರುವ ತನ್ನ ಮಗಳು ರೇಣುಕಾ ಳನ್ನು ಪತ್ತೆ ಮಾಡಿಕೊಡುವಂತೆ ನೀಡಿದ ದೂರಿನ ಮೇರೆಗೆ  ಕಡೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 28-05-2022 08:01 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080