ಅಭಿಪ್ರಾಯ / ಸಲಹೆಗಳು

ಮರಣಾಂತಿಕ ರಸ್ತೆ ಅಪಘಾತ ಪ್ರಕರಣ

ಅಜ್ಜಂಫುರ ಪೊಲೀಸ್ ಠಾಣೆ.

ದಿನಾಂಕ;29/05/2022 ರಂದು ಪಿರ್ಯಾದಿ ಮಲ್ಲಿಕಾರ್ಜುನ ಬಿನ್ ಈಶ್ವರಪ್ಪ, ಹುಣಸಘಟ್ಟ, ವಾಸಿ ಇವರು ನೀಡಿದ ದೂರಿನಲ್ಲಿ ದಿನಾಂಕ;29/05/2022 ರಂದು ಪಿರ್ಯಾದಿ ತಂದೆ ಈಶ್ವರಪ್ಪ ರವರು ಸಾಮಾನು ತರಲು ಹುಣಸಘಟ್ಟ ಬಸ್ ನಿಲ್ದಾಣಕ್ಕೆ ಹೋಗಿದ್ದು  ಬೆಳ್ಳಗ್ಗೆ 8.15 ಗಂಟೆ ಸಮಯದಲ್ಲಿ ಈಶ್ವರಪ್ಪ ರವರು ಬಸ್ ನಿಲ್ದಾಣದ ರಸ್ತೆಯ ಬದಿಯಲ್ಲಿ ನಿಂತಿರುವಾಗ ಹುಣಸಘಟ್ಟ ಗೇಟ್ ಕಡೆಯಿಂದ ಬಂದ ಕೆಎ-66-1240 ನಂಬರಿನ ಟಾಟಾ 909 ಗೂಡ್ಸ್ ವಾಹನದ ಚಾಲಕ ವಾಹನವನ್ನು ಅತೀವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು  ಈಶ್ವರಪ್ಪ ರವರಿಗೆ ಡಿಕ್ಕಿ ಹೊಡೆಸಿದ ಪರಿಣಾಮ ಅವರ ಎರಡು ಕಾಲುಗಳು ಮುರಿದಿದ್ದು ಚಿಕಿತ್ಸೆಗೆ ಸೇರಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಕೆಎ-66-1240 ನಂಬರಿನ ಟಾಟಾ 909 ಗೂಡ್ಸ್ ವಾಹನದ ಚಾಲಕನ ವಿರುದ್ದ ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಅಜ್ಜಂಫುರ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ.

ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಮತ್ತು ಹಲ್ಲೆ ಪ್ರಕರಣ

ಮೂಡಿಗೆರೆ ಪೊಲೀಸ್ ಠಾಣೆ.

ದಿನಾಂಕ;29/05/2022 ರಂದು ಪಿರ್ಯಾದಿ ಸುಜಾತ ರವರು ಮೂಡಿಗೆರೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಮಯದಲ್ಲಿ ಠಾಣೆಗೆ ಅರ್ಜಿ ವಿಚಾರಣೆಗೆ ಬಂದಿದ್ದ ಶಿಲ್ಪ ಎಂಬುವರು ಠಾಣೆಯಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದು ಪಿರ್ಯಾದಿ ಸಮಾದಾನದಿಂದ ಇರುವಂತೆ ತಿಳಿಸಿದ್ದು ಪಿರ್ಯಾದಿಯೊಂದಿಗೆ ಗಲಾಟೆ ಮಾಡಿದ್ದು ಸಮವಸ್ತ್ರದಲ್ಲಿದ್ದ ಪಿರ್ಯಾದಿಯನ್ನು ದೂಡಿ ಕೈ ಯಿಂದ ಕೈ ಮುಖಕ್ಕೆ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುತ್ತಾಳೆಂದು ಶಿಲ್ಪರವರ ವಿರುದ್ದ ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ  ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

 

ಮನುಷ್ಯ ಕಾಣೆ ಪ್ರಕರಣ

ಗ್ರಾಮಾಂತರ ಪೊಲೀಸ್ ಠಾಣೆ.

ದಿನಾಂಕ;29/05/2022 ರಂದು ಪಿರ್ಯಾದಿ ತ್ಯಾಗರಾಜ್ ಬಿನ್ ಕರ್ಪಯ್ಯ, ಕೈಮರ,ಚಿಕ್ಕಮಗಳೂರು ವಾಸಿ ಇವರು ನೀಡಿದ ದೂರಿನಲ್ಲಿ ಪಿರ್ಯಾದಿಯ ತಂದೆ ಕರ್ಪಯ್ಯ ಇವರು  ದಿನಾಂಕ; 15/05/2022 ರಂದು ಸಂಜೆ  ಮನೆಯಿಂದ ಹೋದವರು, ವಾಪಾಸ್ಸು ಮನೆಗೆ ಬಾರದೇ ಕಾಣೆಯಾಗಿದ್ದು, ಈವರೆಗೆ ಹುಡಕಲಾಗಿ ಪತ್ತೆಯಾಗಿರುವುದಿಲ್ಲ. ಕಾಣೆಯಾಗಿರುವ ಕರ್ಪಯ್ಯ ಬಿನ್ ಲೇ ಪಳನಿಮುತ್ತು, 83 ವರ್ಷ,  ಕಪ್ಪು ಮೈಬಣ್ಣ, ದೃಡಕಾಯ ಶರೀರ,  ಕನ್ನಡ ತಮಿಳು ಬಾಷೆ ಮಾತನಾಡುತ್ತಾರೆ. ನೀಲಿ ಬಣ್ಣದ ಚೌಕಳಿ ಇರುವ ತುಂಬು ತೋಳಿನ ಶರಟು ಧರಿಸಿರುತ್ತಾರೆ. ಕಾಣೆಯಾಗಿರುವ ತನ್ನ ತಂದೆ ಕರ್ಪಯ್ಯ ರವರನ್ನು ಪತ್ತೆ ಮಾಡಿ ಕೊಡುವಂತೆ ನೀಡಿದ ದೂರಿನ ಮೇರೆಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಗ್ರಾಮಾಂತರ ಪೊಲೀಸ್ ಠಾಣೆ.

ದಿನಾಂಕ;29/05/2022 ರಂದು ಪಿರ್ಯಾದಿ ಶ್ರೀಮತಿ ಇಂದ್ರಮ್ಮ ಕೊಂ ವೆಂಕಟೇಶ್, ಕುರುಬರಹಳ್ಳಿ ಗ್ರಾಮ, ಚಿಕ್ಕಮಗಳೂರು ವಾಸಿ ಇವರು ನೀಡಿದ ದೂರಿನಲ್ಲಿ ಪಿರ್ಯಾದಿಯ ಮಗಳಾದ ಕು: ಪ್ರೇಮ ಇವಳು ಐ.ಡಿ.ಎಸ್.ಜಿ. ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಎ. ವಿದ್ಯಾಬ್ಯಾಸ ಮಾಡುತ್ತಿದ್ದು ದಿನಾಂಕ 29/05/2022  ಮನೆಯಲ್ಲಿ ಇದ್ದವಳು ಯಾರಿಗೂ ಹೇಳದೆ ಮನೆಯಿಂದ ಹೋದವರು, ವಾಪಾಸ್ಸು ಮನೆಗೆ ಬಾರದೇ ಕಾಣೆಯಾಗಿದ್ದು, ಈವರೆಗೆ ಹುಡಕಲಾಗಿ ಪತ್ತೆಯಾಗಿರುವುದಿಲ್ಲ. ಕಾಣೆಯಾಗಿರುವ ಪ್ರೇಮ, 21 ವರ್ಷ,  ಗೋದಿ ಮೈಬಣ್ಣ, ದುಂಡುಮುಖ, 5 ಅಡಿ ಎತ್ತರ,   ಕನ್ನಡ ಬಾಷೆ ಮಾತನಾಡುತ್ತಾಳೆ. ಸಿಮೆಂಟ್ ಬಣ್ಣದ ಚೂಡಿದಾರ ಟಾಪ್ ಮತ್ತು ಪಿಂಕ್ ಬಣ್ಣದ ಲೆಗ್ಗಿನ್ಸ್ ಧರಿಸಿರುತ್ತಾಳೆ. ಕಾಣೆಯಾಗಿರುವ ತನ್ನ ಮಗಳು ಕು; ಪ್ರೇಮ ರವರನ್ನು ಪತ್ತೆ ಮಾಡಿ ಕೊಡುವಂತೆ ನೀಡಿದ ದೂರಿನ ಮೇರೆಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 29-05-2022 07:53 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080