ಅಭಿಪ್ರಾಯ / ಸಲಹೆಗಳು

ಕಳ್ಳತನಕ್ಕೆ ಪ್ರಯತ್ನ  ಪ್ರಕರಣ.

ನಗರ ಪೊಲೀಸ್ ಠಾಣೆ,

ದಿನಾಂಕ 31-07-2021 ರಂದು ಶಶಿಧರ್ ಹೆಚ್ ಸಿ 324ರವರು 26 ನೇ ಗ್ರಾಮಗಸ್ತು ಕರ್ತವ್ಯಕ್ಕೆ ಹೋಗಿದ್ದು ಮದ್ಯಾಹ್ನ 12-30 ಗಂಟೆ ಸಮಯದಲ್ಲಿ ಷರೀಫ್ ಗಲ್ಲಿ ಕಡೆ ಗಸ್ತು ಮಾಡುತ್ತಿರುವಾಗ ರಾಯಲ್ ಶಾಮಿಯಾನದ   ಬೀಗ ಹಾಕಿರುವ ಅಂಗಡಿಯ ಬಳಿ ಒಬ್ಬ ಆಸಾಮಿಯು ನಿಂತಿದ್ದು ಸಮವಸ್ತ್ರದಲ್ಲಿದ್ದ ಪಿರ್ಯಾದಿಯನ್ನು ನೋಡಿ ಓಡಿಹೋಗಲು ಪ್ರಯತ್ನಿಸಿದ್ದು ಆತನನ್ನು  ಹಿಡಿದುಕೊಂಡಾಗ ಆತನ ಕೈಯಲ್ಲಿ ಒಂದು ಕಬ್ಬಿಣದ ರಾಡು ಇದ್ದು ಸಮವಸ್ತ್ರದಲ್ಲಿದ್ದ ನಮ್ಮಗಳನ್ನು ನೋಡಿ ಮರೆಮಾಚಲು ಪ್ರಯತ್ನಿಸಿದ್ದಲ್ಲದೆ, ಸರಿಯಾದ ವಿಳಾಸವನ್ನು ನೀಡದೇ ಇದ್ದುದ್ದರಿಂದ ಆರೋಪಿತನ ವಿರುದ್ದ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ

ಅಕ್ರಮ ಮದ್ಯ ಮಾರಾಟ ಪ್ರಕರಣ

ಬಾಳೆಹೊನ್ನೂರು ಪೊಲೀಸ್ ಠಾಣೆ

ದಿನಾಂಕ 30-07-2021 ರಂದು ಹಲಸೂರು ಗ್ರಾಮದ ಕಬ್ಬಿನ ಮಣ್ಣು ರಸ್ತೆಯಲ್ಲಿ ಯೋಗೇಂದ್ರ ಬಿನ್ ಅಣ್ಣಪ್ಪ ಎಂಬುವವರು ಅಕ್ರಮವಾಗಿ ಮದ್ಯವನ್ನು ಬೈಕಿನಲ್ಲಿ ಸಾಗಾಟ ಮಾಢುತ್ತಿದ್ದು ಆರೋಪಿಯನ್ನು ವಶಕ್ಕೆ ಪಡೆದು 90 ಎಂ.ಎಲ್ ನ ಹೈವಡ್ಸ್ ಚೀರ್ಸ್ ವಿಸ್ಕಿಯ 50 ಪೌಚ್ ಗಳನ್ನು ವಶಕ್ಕೆ ಪಡೆದಿದ್ದು ಮದ್ಯದ ಅಂದಾಜು ಬೆಲೆ 1756/ - ರೂ ಆಗಿರುತ್ತೆ, ಆರೋಪಿ ವಿರುದ್ದ . ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.ಈ ಕಾರ್ಯಾಚರಣೆಯಲ್ಲಿ ಪಿಎಸ್ಐ ನಿತ್ಯಾನಂದಗೌಡ  ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ.

ಸಖರಾಯಪಟ್ಟಣ ಪೊಲೀಸ್ ಠಾಣೆ.

ದಿನಾಂಕ 30-07-2021 ರಂದು ಸಂಜೆ 6-00ಗಂಟೆ ಸಮಯದಲ್ಲಿ ಉದ್ದೇಬೋರನಹಳ್ಳಿ ಗ್ರಾಮದ ರಸ್ತೆಯ ಬದಿಯಲ್ಲಿ  ಜಯಕೀರ್ತೀರವರು ನಡೆದುಕೊಂಡು ಬರುತ್ತಿರುವಾಗ ಚಿಕ್ಕಮಗಳೂರು ಕಡೆಯಿಂದ ಬಂದ ಕೆಎ-46 ಇ-3154 ನ ಪಲ್ಸರ್ ಬೈಕ್ ಚಾಲಕ ತನ್ನ ಬೈಕನ್ನು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಹಿಂದಿನಿಂದ ಜಯಕೀರ್ತೀರವರಿಗೆ ಡಿಕ್ಕಿ ಹೊಡೆಸಿದ ಪರಿಣಾಮ ತಲೆಗೆ ತೀವ್ರತರಹದ ಪೆಟ್ಟಾಗಿ ಮೃತಪಟ್ಟಿರುತ್ತಾರೆ. ಬೈಕ್ ಚಾಲಕನ ವಿರುದ್ದ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ನೀಡಿದ ದೂರಿನ ಮೇರೆಗೆ ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೇ ಕೈಗೊಂಡಿರುತ್ತಾರೆ.

ಕಳ್ಳತನ ಪ್ರಕರಣ.

ತರೀಕೆರೆ ಪೊಲೀಸ್ ಠಾಣೆ .

ದಿನಾಂಕ 14-07-2021 ರಂದು ರಾತ್ರಿ ಸುಮಾರು 10-00 ಗಂಟೆ ಸಮಯದಲ್ಲಿ ಭರತ್ ರವರು ತರೀಕೆರೆಯ ಎಂಜಿ ರಸ್ತೆಯಲ್ಲಿರುವ ತಮ್ಮ ಮನೆಯ ಹತ್ತಿರ ಕೆಎ-51 ಹೆಚ್ ಎಲ್ 6242 ಪಲ್ಸರ್ ಬೈಕನ್ನು ಹ್ಯಾಂಡಲ್ ಲಾಕ್ ಮಾಡಿ ನಿಲ್ಲಿಸಿದ್ದು ಬೆಳಿಗ್ಗೆ ನೋಡಲಾಗಿ ಬೈಕನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ, ಬೈಕಿನ ಅಂದಾಜು ಬೆಲೆ 95.000/- ರೂಗಳಾಗಿರುತ್ತೆ.  ಬೈಕನ್ನು ಎಲ್ಲಾ ಕಡೆ ಹುಡುಕಾಡಿದ್ದು ಎಲ್ಲಿಯೂ ಪತ್ತೆಯಾಗದೇ ಇದ್ದರಿಂದ ಪತ್ತೆ ಮಾಡಿಕೊಡಬೇಕೆಂದು ನೀಡಿದ ದೂರಿನನ್ವಯ ತರೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಅಪಘಾತ ಪ್ರಕರಣ.

ಬಾಳೆಹೊನ್ನೂರು  ಪೊಲೀಸ್ ಠಾಣೆ.

ದಿನಾಂಕ 29-07-2021 ರಂದು ನೀಲಮ್ಮ ರವರು ತಮ್ಮ ಸಂಸಾರದೊಂದಿಗೆ ಹೊರನಾಡು ದೇವಸ್ಥಾನಕ್ಕೆ ಹೋಗಲೆಂದು ಕೆಎ-18 ಎಂಕ್ಯೂ 7495 ಕಾರಿನಲ್ಲಿ ಬೆಳಗಿನ ಜಾವ 04-40 ಗಂಟೆ ಸಮಯದಲ್ಲಿ ಬಾಳೆಹೊನ್ನೂರು    ಹತ್ತಿರ ಬರುತ್ತಿರುವಾಗ ಕಾರನ್ನು ಚಾಲನೆ ಮಾಡುತ್ತಿದ್ದ ಶಿವಕುಮಾರ್  ಕಾರನ್ನು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ವಾಹನ ನಿಯಂತ್ರಣ ತಪ್ಪಿ ವಾಟಕೂಡಿಗೆ ಹತ್ತಿರ ಹರಿಯುತ್ತಿರುವ ಹಳ್ಳಕ್ಕೆ ಬಿದ್ದಿದ್ದರಿಂದ ನೀಲಮ್ಮರವರಿಗೆ ಕೈಕಾಲುಗಳಿಗೆ ಪೆಟ್ಟಾಗಿದ್ದು ಈ ಬಗ್ಗೆ ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ  ಕೈಗೊಂಡಿರುತ್ತಾರೆ.

 

 

ಇತ್ತೀಚಿನ ನವೀಕರಣ​ : 31-07-2021 06:31 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080