ಅಭಿಪ್ರಾಯ / ಸಲಹೆಗಳು

ಅಕ್ರಮ ಮಟ್ಕಾ ಜೂಜಾಟ  ಪ್ರಕರಣ.
ಸಿ.ಇ.ಎನ್ .ಪೊಲೀಸ್ ಠಾಣೆ.
ದಿನಾಂಕ 30-10-2021 ರಂದು 17-30 ಗಂಟೆ ಸಮಯದಲ್ಲಿ ಚಿಕ್ಕಮಗಳೂರು ನಗರದ ಎಂ,ಜಿ ರಸ್ತೆಯಲ್ಲಿ ಗಸ್ತಿನಲ್ಲಿರುವಾಗ ಶಂಕರಪುರದ ಕೊನೆಯ ಕ್ರಾಸ್ ನ ರಾಜಕಾಲುವೆಯ ಹತ್ತಿರ ಶ್ರೀನಿವಾಸ @ ಸೀನ ಬಿನ್  ಗೋವಿಂದಸ್ವಾಮಿ , ಎಂಬುವವನು ಅಕ್ರಮವಾಗಿ ಮಟ್ಕಾ ಜೂಜಾಟವನ್ನು ಆಡಿಸುತ್ತಿದ್ದು  ಆತನನ್ನು ವಶಕ್ಕೆ ಪಡೆದು ಆತನ ಬಳಿಯಿದ್ದ 1) ನಂಬರ್ ಬರೆದಿರುವ ಹಾಳೆ 2) ಒಂದು ಪೆನ್ ಹಾಗೂ 3) 3,800/ ರೂ  ನಗದು ಹಣವನ್ನು  ಅಮಾನತ್ತುಪಡಿಸಿಕೊಂಡು ಆರೋಪಿತರುಗಳ ವಿರುದ್ದ  ಸಿ.ಇ.ಎನ್.  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಎಸ್.ಐ, ರಫೀಕ್ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ.

ಮನುಷ್ಯ ಕಾಣೆ ಪ್ರಕರಣ.
ಸಖರಾಯಪಟ್ಟಣ  ಪೊಲೀಸ್ ಠಾಣೆ.
ದಿನಾಂಕ 30-10-2021 ರಂದು ಅಶೋಕ ಬಿನ್ ಕುಮಾರ್. ಹುಲಿಕೆರೆ ವಾಸಿರವರು ನೀಡಿದ ದೂರಿನ ಸಾರಾಂಶವೇನೆಂದರೆ , ನಾನು ಬೆಳಗಾವಿಯಲ್ಲಿ ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಈಗ್ಗೆ ಒಂದು ವಾರದ ಹಿಂದೆ ನನ್ನ ಹೆಂಡತಿಯಾದ ಸಂಗೀತಾಳನ್ನು ಬೆಳಗಾವಿಯಿಂದ ನನ್ನ ಮನೆಗೆ ಬಿಟ್ಟು ಹೋಗಿದ್ದು ಒಂದು ವಾರ ಬಿಟ್ಟು ಬಂದು ಕರೆದುಕೊಂಡು ಹೋಗುವುದಾಗಿ ಹೇಳಿದ್ದು ದಿನಾಂಕ 29-10-2021 ರಂದು ರಾತ್ರಿ 09-30 ಗಂಟೆ ಸಮಯದಲ್ಲಿ ಮನೆಯಲ್ಲಿ ಮಲಗಿದ್ದವಳು ಮಗುವನ್ನು ಬಿಟ್ಟು ಎಲ್ಲಿಗೋ ಹೋಗಿದ್ದು ಕಾಣೆಯಾಗಿರುವ  ನನ್ನ ಹೆಂಡತಿಯಾದ  ಸಂಗೀತಾಳನ್ನು  ಪರಿಚಯಸ್ಥರ, ಸಂಬಂಧಿಕರ ಹಾಗೂ ಸ್ನೇಹಿತರ ಮನೆಗಳಲ್ಲಿ ಹುಡುಕಲಾಗಿ ಎಲ್ಲಿಯೂ ಪತ್ತೆಯಾಗಿರುವುದಿಲ್ಲ. ಆದ್ದರಿಂದ ಕಾಣೆಯಾಗಿರುವ ನನ್ನ ಹೆಂಡತಿಯನ್ನು   ಪತ್ತೆ  ಮಾಡಿಕೊಡುವಂತೆ ನೀಡಿದ ದೂರಿನ ಮೇರೆಗೆ ಸಖರಾಯಪಟ್ಟಣ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ.
ಗ್ರಾಮಾಂತರ ಪೊಲೀಸ್ ಠಾಣೆ,
ದಿನಾಂಕ 30-10-2021 ರಂದು ರಾತ್ರಿ 09-10 ಗಂಟೆ ಸಮಯದಲ್ಲಿ ಇಂದಿರಾನಗರದ ಅಂಬರೀಶರವರು ತಮ್ಮ  ಮನೆಯ ಗೇಟಿನ ಮುಂದಿನ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದು ಅಂಬರೀಶನನ್ನು ವಶಕ್ಕೆ ಪಡೆದು  , ಆತನ ಬಳಿಯಿದ್ದ 90 ಎಂ.ಎಲ್ ನ 45 ಓರಿಜಿನಲ್ ಚಾಯ್ಸ್ ಡಿಲೆಕ್ಸ್ ವಿಸ್ಕಿಯ ಟೆಟ್ರಾ ಪೌಚ್ ಗಳನ್ನು ವಶಕ್ಕೆ ಪಡೆದು ,ಮದ್ಯದ ಅಂದಾಜು ಬೆಲೆ 1932/ - ರೂ  ಆಗಿದ್ದು ,ಆರೋಪಿಯ ವಿರುದ್ದ  ಗ್ರಾಮಾಂತರ  ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಎಸ್.ಐ, ಪುದ್ದು, ಡಿಸಿಐಬಿ ಘಟಕ  ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿರುತ್ತಾರೆ


 

ಇತ್ತೀಚಿನ ನವೀಕರಣ​ : 31-10-2021 07:49 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಮಗಳೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080